ಉದ್ಯೋಗ ಮಾಹಿತಿ | ರೈಲ್ವೇಯಲ್ಲಿ 2,569 ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸಲು ನ.30 ಕಡೆ ದಿನ

Date:

ರೈಲ್ವೇ ಇಲಾಖೆಯಲ್ಲಿನ ವಿವಿಧ ವಲಯಗಳ 2,569 ಹುದ್ದೆಗಳಿಗೆ ನೇಮಕಾತಿ ನಡೆಸಲು ರೈಲ್ವೆ ನೇಮಕಾತಿ ಮಂಡಳಿ (RRB) ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ನವೆಂಬರ್ 30 ಕಡೆ ದಿನವೆಂದು ತಿಳಿಸಿದೆ.

- Advertisement -

ರೈಲ್ವೇ ಇಲಾಖೆಯ ಜೂನಿಯರ್ ಎಂಜಿನಿಯರ್ (JE), ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS) ಹಾಗೂ ಕೆಮಿಕಲ್ & ಮೆಟಲರ್ಜಿಕಲ್ ಅಸಿಸ್ಟೆಂಟ್ (CMA) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ – rrbapply.gov.in ಮೂಲಕ – ನವೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಆರ್‌ಆರ್‌ಬಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅರ್ಹತಾ ಮಾನದಂಡಗಳು

ಜೂನಿಯರ್ ಎಂಜಿನಿಯರ್ (JE): ಅಭ್ಯರ್ಥಿಗಳು ಸಿವಿಲ್, ಮೆಕ್ಯಾನಿಕಲ್, ಪ್ರೊಡಕ್ಷನ್, ಆಟೋಮೊಬೈಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಇನ್‌ಸ್ಟ್ರುಮೆಂಟೇಶನ್ ಅಂಡ್‌ ಕಂಟ್ರೋಲ್, ಟೂಲ್ಸ್ ಅಂಡ್‌ ಮೆಷಿನಿಂಗ್, ಟೂಲ್ಸ್ ಅಂಡ್‌ ಡೈ ಮೇಕಿಂಗ್, ಕಂಪ್ಯೂಟರ್ ಸೈನ್ಸ್ ಅಥವಾ ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಅಥವಾ ಬಿಎಸ್ಸಿ ಪದವಿ ಪಡೆದಿರಬೇಕು.

ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS): ಎಂಜಿನಿಯರಿಂಗ್‌ನ ಯಾವುದೇ ವಿಭಾಗದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪಡೆದಿರಬೇಕು.

ಕೆಮಿಕಲ್ ಅಂಡ್‌ ಮೆಟಲರ್ಜಿಕಲ್ ಅಸಿಸ್ಟೆಂಟ್ (CMA): ಅಭ್ಯರ್ಥಿಗಳು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದಲ್ಲಿ ಬಿಎಸ್ಸಿ ಪದವಿ ಪಡೆದಿರಬೇಕು. ಕನಿಷ್ಠ 45% ಅಂಕಗಳೊಂದಿಗೆ ಉತ್ತೀರ್ಣರಾಗಿಬೇಕು.

ವಯಸ್ಸಿನ ಮಿತಿ
2026ರ ಜನವರಿ 1ಕ್ಕೆ ಅನ್ವಯವಾಗುವಂತೆ ಅರ್ಜಿದಾರರು 33 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಸರ್ಕಾರಿ ಮಾನದಂಡಗಳ ಪ್ರಕಾರ ಮೀಸಲು ವರ್ಗಗಳಿಗೆ ವಯಸ್ಸಿನಲ್ಲಿ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ಪ್ರಕ್ರಿಯೆ
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ನೇಮಕಾತಿ ನಡೆಸಲಾಗುತ್ತದೆ.

ಪರೀಕ್ಷಾ ಮಾದರಿ
CBT ಹಂತ 1: 100 ಅಂಕಗಳಿಗೆ 100 ಬಹು ಆಯ್ಕೆಯ ಪ್ರಶ್ನೆಗಳು; ಅವಧಿ – 90 ನಿಮಿಷಗಳು.
CBT ಹಂತ 2: 150 ಅಂಕಗಳಿಗೆ 150 ಬಹು ಆಯ್ಕೆಯ ಪ್ರಶ್ನೆಗಳು; ಅವಧಿ – 120 ನಿಮಿಷಗಳು.

ಎರಡೂ ಹಂತಗಳಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಮೂರನೇ ಒಂದು ಭಾಗದಷ್ಟು ಋಣಾತ್ಮಕ ಅಂಕಗಳು ಅನ್ವಯವಾತ್ತದೆ.

ವೇತನ ಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400 ರೂ.ನಿಂದ 1,12,400 ರೂ.ವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ
SC/ST, ಮಹಿಳೆಯರು, ಟ್ರಾನ್ಸ್ಜೆಂಡರ್, ಅಲ್ಪಸಂಖ್ಯಾತ ಹಾಗೂ ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 250 ರೂ. ಇರುತ್ತದೆ. (CBT ಹಂತ 1ಕ್ಕೆ ಹಾಜರಾದ ನಂತರ ಶುಲ್ಕವನ್ನು ಮರುಪಾವತಿಸಲಾಗುತ್ತದೆ, ಬ್ಯಾಂಕ್ ಶುಲ್ಕಗಳನ್ನು ಕಡಿಮೆ ಮಾಡಲಾಗುತ್ತದೆ).

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...