‘ಹೊಸ ಯೋಜನೆಗೆ ಬನ್ನಿ, ಇಲ್ಲವೇ ಕೆಲಸ ಬಿಡಿ’: 2,000 ನರೇಗಾ ಗುತ್ತಿಗೆ ನೌಕರರಿಗೆ ಪಂಜಾಬ್ ಸರ್ಕಾರದ ಬೆದರಿಕೆ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ – MGNREGS) ಅಡಿಯಲ್ಲಿ ಕೆಲಸ ಮಾಡುತ್ತಿದ್ದ 2,000ಕ್ಕೂ ಹೆಚ್ಚು ಗುತ್ತಿಗೆ ನೌಕರರಿಗೆ ಪಂಜಾಬ್ ಸರ್ಕಾರ ಅಂತಿಮ ಎಚ್ಚರಿಕೆ ನೀಡಿದೆ. ಶನಿವಾರದ (ಜುಲೈ 18) ಒಳಗೆ ಸರ್ಕಾರ ಹೊಸದಾಗಿ ಜಾರಿಗೆ ತಂದಿರುವ ಉದ್ಯೋಗ ಯೋಜನೆಗೆ ಸೇರಿಕೊಳ್ಳದಿದ್ದರೆ, ಸೇವೆಯಿಂದ ವಜಾಗೊಳಿಸಲಾಗುವುದು ಎಂದು ಆದೇಶಿಸಿದೆ.

- Advertisement -

ಸುಮಾರು 20 ವರ್ಷಗಳ ಹಳೆಯ ನರೇಗಾ ಯೋಜನೆಯನ್ನು ರದ್ದುಪಡಿಸಿರುವ ಸರ್ಕಾರ, ಜುಲೈ 1 ರಿಂದ ‘ವಿಕಸಿತ್ ಭಾರತ್-ಗ್ಯಾರಂಟಿ-ರೋಜಗಾರ್ ಆಜೀವಿಕಾ ಮಿಷನ್-ಗ್ರಾಮೀಣ್’ (VB-G-RAM-G) ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಹಳೆಯ ಯೋಜನೆಯಲ್ಲಿ ವರ್ಷಕ್ಕೆ 100 ದಿನಗಳ ಕೆಲಸ ನೀಡಲಾಗುತ್ತಿತ್ತು, ಆದರೆ ಹೊಸ ಯೋಜನೆಯಡಿ 125 ದಿನಗಳ ಉದ್ಯೋಗ ನೀಡಲಾಗುತ್ತದೆ. ಈ ಹೊಸ ಯೋಜನೆಗೆ ಸೇರ್ಪಡೆಯಾಗಲು ಹಳೆಯ ಗುತ್ತಿಗೆ ನೌಕರರು ಹೊಸ ಒಪ್ಪಂದಗಳಿಗೆ ಸಹಿ ಹಾಕುವಂತೆ ಸರ್ಕಾರ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಈ 2,000 ಗುತ್ತಿಗೆ ನೌಕರರಿಗೆ ಕಳೆದ 5 ತಿಂಗಳಿಂದ ಸಂಬಳ ಪಾವತಿಯಾಗಿಲ್ಲ. ಬಾಕಿ ಇರುವ ವೇತನವನ್ನು ನೀಡಬೇಕು ಹಾಗೂ ತಮ್ಮ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ನೌಕರರು ಜೂನ್ 1 ರಿಂದಲೇ ಮುಷ್ಕರ ನಡೆಸುತ್ತಿದ್ದಾರೆ.

ಜುಲೈ 15 ರಂದು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ತರುಣ್‌ಪ್ರೀತ್ ಸಿಂಗ್ ಸೋಂಡ್ ಅವರ ಮನೆಗೆ ಮುತ್ತಿಗೆ ಹಾಕಲು ನೌಕರರು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್‌ನಲ್ಲಿ ಹಲವರು ಗಾಯಗೊಂಡಿದ್ದು, ಓರ್ವ ನೌಕರನ ಕಾಲು ಮುರಿದಿದೆ.

“ಸಚಿವರು ನಮ್ಮ ಜೊತೆ ಮಾತನಾಡಿ ಸೇವೆ ಕಾಯಂಗೊಳಿಸುವ ಹಾಗೂ ವೇತನ ಶ್ರೇಣಿ ನಿಗದಿಪಡಿಸುವ ಭರವಸೆ ನೀಡಿದ್ದರು. ಆದರೆ, ಈಗ ದಿಢೀರನೆ ಕೆಲಸದಿಂದ ತೆಗೆಯುವ ಬೆದರಿಕೆ ಪತ್ರವನ್ನು ಇಲಾಖೆಯಿಂದ ಕಳುಹಿಸಿದ್ದಾರೆ. ಸಚಿವರು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ,” ಎಂದು ನರೇಗಾ ಕಾರ್ಮಿಕರ ಸಂಘದ ಅಧ್ಯಕ್ಷ ಗುರ್ಸೇವಕ್ ಸಿಂಗ್ ಮತ್ತು ಪೋಷಕ ವರಿಂದರ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ಬೆದರಿಕೆಗೆ ಜಗ್ಗದ ನೌಕರರು, ಸೋಮವಾರ (ಜುಲೈ 20) ಸಚಿವರ ಮನೆಯ ಎದುರು ಕುಟುಂಬ ಸಮೇತ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಗುತ್ತಿಗೆ ನೌಕರರು ಕೆಲಸ ಬಹಿಷ್ಕರಿಸಿರುವ ಕಾರಣ, ಹೊಸ ಯೋಜನೆಯಡಿ ನೋಂದಾಯಿಸಿಕೊಂಡಿರುವ 26 ಲಕ್ಷ ಬಡ ಕಾರ್ಮಿಕರಿಗೆ ಉದ್ಯೋಗ ನೀಡುವ ಪ್ರಕ್ರಿಯೆಗೆ ತೀವ್ರ ಹಿನ್ನಡೆಯಾಗಿದೆ. ಹೀಗಾಗಿ, ಕೆಲಸಕ್ಕೆ ಗೈರಾಗುವ ನೌಕರರನ್ನು ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಇಲಾಖೆ, ಅವರ ಜಾಗದಲ್ಲಿ ತಾತ್ಕಾಲಿಕವಾಗಿ ‘ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ’ದ (SRLM) ಸಿಬ್ಬಂದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಿರಿಯ ಎಂಜಿನಿಯರ್‌ಗಳನ್ನು ಬಳಸಿಕೊಳ್ಳಲು ಮುಂದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...