ನ್ಯಾಯ ಸಂಕಲ್ಪ ಪಾದಯಾತ್ರೆ ಕೈಗೊಂಡ ರಾಹುಲ್ ಗಾಂಧಿ: ಇಂಡಿಯಾ ಒಕ್ಕೂಟದ ನಾಯಕರು ಭಾಗಿ

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದಕ್ಷಿಣ ಮುಂಬೈನ ಮಹಾತ್ಮ ಗಾಂಧಿ ಅವರ ನಿವಾಸವಾದ ಮಣಿ ಭವನದಿಂದ ಇಂದು ಬೆಳಿಗ್ಗೆ “ನ್ಯಾಯ ಸಂಕಲ್ಪ ಪಾದಯಾತ್ರೆ”ಯನ್ನು ಕೈಗೊಂಡರು.

- Advertisement -

ಆಂಗ್ಲರ ಆಡಳಿತವನ್ನು ಕೊನೆಗಾಣಿಸಲು ಸ್ವತಂತ್ರ ಹೋರಾಟದ ಸಂದರ್ಭ 1942ರಲ್ಲಿ ಮುಂಬೈನ ಕ್ರಾಂತಿ ಮೈದಾನದಲ್ಲಿ ಆರಂಭವಾದ ‘ಭಾರತ ಬಿಟ್ಟು ತೊಲಗಿ’ ಸ್ಮರಣಾರ್ಥ “ನ್ಯಾಯ ಸಂಕಲ್ಪ ಯಾತ್ರೆ” ಕೈಗೊಳ್ಳಲಾಗಿದೆ. ಸಂಕಲ್ಪ ಯಾತ್ರೆಯು ಆಗಸ್ಟ್‌ವರೆಗೂ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇಂದು ನಡೆದ ಪಾದಯಾತ್ರೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್‌ ಗಾಂಧಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡರು.

ಸಂಕಲ್ಪ ಯಾತ್ರೆಯಲ್ಲಿ ವಿಪಕ್ಷಗಳ ಇಂಡಿಯಾ ಒಕ್ಕೂಟದ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಡೊನಾಲ್ಡ್‌ ಟ್ರಂಪ್‌ ಬಿಟ್ಟು ಅಮೆರಿಕ ಆಳಿದ ಅಧ್ಯಕ್ಷರೆಲ್ಲ ಗುಲಾಮಗಿರಿ ಪ್ರೋತ್ಸಾಹಿಸಿದ ವಂಶಕ್ಕೆ ಸೇರಿದವರು

63 ದಿನಗಳಿಂದ ಹಮ್ಮಿಕೊಳ್ಳಲಾಗಿದ್ದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಮಾ.16 ರಂದು ಕೇಂದ್ರ ಮುಂಬೈನ ಡಾ. ಬಿ ಆರ್ ಅಂಬೇಡ್ಕರ್‌ ಅವರ ಸ್ಮಾರಕ ಕೇಂದ್ರ ‘ಚೈತನ್ಯ ಭೂಮಿ’ಯಲ್ಲಿ ನುಡಿನಮನ ಹಾಗೂ ಸಂವಿಧಾನದ ಪ್ರಸ್ತಾವನೆ ಓದುವುದರೊಂದಿಗೆ ಮುಕ್ತಾಯಗೊಳಿಸಲಾಗಿತ್ತು.

ಲೋಕಸಭಾ ಚುನಾವಣಾ ಹಿನ್ನೆಲೆ ನ್ಯಾಯ ಯಾತ್ರೆಯನ್ನು ಜನವರಿ 14ರಂದು ಮಣಿಪುರದಿಂದ ಆರಂಭಿಸಲಾಗಿತ್ತು.

ವಿಪಕ್ಷಗಳ ಇಂಡಿಯಾ ಒಕ್ಕೂಟವು ತಮ್ಮ ಬಲ ಪ್ರದರ್ಶಿಸಲು ಇಂದು ಸಂಜೆ ರ್‍ಯಾಲಿ ಹಮ್ಮಿಕೊಳ್ಳಲಿದೆ. ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...