ಬಿಜೆಪಿ ಸೇರಿದ್ದು ನಾನು ಮಾಡಿದ ಐತಿಹಾಸಿಕ ಪ್ರಮಾದ: ಸುಭಾಷ್ ಚಂದ್ರ ಬೋಸ್ ‘ಮೊಮ್ಮಗ’

Date:

ಸ್ವಾತಂತ್ರ್ಯ ಹೋರಾಟದ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಒಬ್ಬರಾದ ಸುಭಾಷ್ ಚಂದ್ರ ಬೋಸ್ ಅವರ ‘ಮೊಮ್ಮಗ’ ಚಂದ್ರ ಕುಮಾರ್ ಬೋಸ್ ಅವರು “ಬಿಜೆಪಿ ಸೇರಿದ್ದು ನಾನು ಮಾಡಿದ ಐತಿಹಾಸಿಕ ಪ್ರಮಾದ” ಎಂದು ಹೇಳಿದ್ದಾರೆ.

- Advertisement -

ಚಂದ್ರ ಕುಮಾರ್ ಬೋಸ್ 2016ರಲ್ಲಿ ಬಿಜೆಪಿ ಸೇರಿದ್ದರು. ಪಶ್ಚಿಮ ಬಂಗಾಳ ಬಿಜೆಪಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಆದರೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣ 2023ರ ಸೆಪ್ಟೆಂಬರ್‌ನಲ್ಲಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? 80 ವರ್ಷ ಕಳೆದರೂ ಭಾರತಕ್ಕೆ ತಲುಪಿಲ್ಲ ನೇತಾಜಿ ಚಿತಾಭಸ್ಮ

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಬಿಜೆಪಿಗೆ ಸೇರಿದ್ದು, ಒಂದು ‘ಐತಿಹಾಸಿಕ ಪ್ರಮಾದ’ – ಆದರೆ ನಾನು ಅದನು ಬೇಗ ಅಥವಾ ತಡವಾಗಿಯಾದರೂ ಅರಿತುಕೊಂಡೆ! ಚುನಾವಣೆಗಳಲ್ಲಿ ಗೆಲ್ಲಲು ಮತದಾರರನ್ನು ವಿಭಜಿಸುವುದು-ಧ್ರುವೀಕರಣ ಮಾಡುವುದು ಒಂದು ಪಕ್ಷದ ಉದ್ದೇಶವಾದರೆ ಅದು ನನ್ನ ನಿಲುವಲ್ಲ” ಎಂದು ಹೇಳಿದ್ದಾರೆ.

ಹಾಗೆಯೇ, “ಕೋಮುವಾದದಿಂದ ಕೋಮುವಾದವನ್ನು ಎದುರಿಸಲು ಸಾಧ್ಯವಿಲ್ಲ! ನಮ್ಮ ರಾಷ್ಟ್ರವನ್ನು ರಕ್ಷಿಸಲು ನಾವು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸೋಣ. ಒಂದೇ ರೀತಿಯ ಮನಸ್ಸಿನ ಪಕ್ಷಗಳು, ಕಾರ್ಯಕರ್ತರು ಮತ್ತು ಜನರು ದೇಶವನ್ನು ಹಾಳುಮಾಡಲು ಹೊರಟಿರುವ ವಿಭಜಕ ಶಕ್ತಿಗಳನ್ನು ಸೋಲಿಸಲು ಒಗ್ಗೂಡಬೇಕು. ಜೈ ಹಿಂದ್!” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇನ್ನೊಂದು ಪೋಸ್ಟ್‌ನಲ್ಲಿ, “ಭ್ರಷ್ಟಾಚಾರ ವಿರೋಧಿ ಆಂದೋಲನ, ಆರೋಗ್ಯ ಸೌಲಭ್ಯ, ಶಿಕ್ಷಣದ ಹಕ್ಕು, ಕೈಗಾರಿಕೆ, ರೈತರ ಕಲ್ಯಾಣ ಮತ್ತು ರಕ್ಷಣೆಯಂತಹ ವಿಷಯಗಳಲ್ಲಿ ರಾಜಕೀಯ ಹೋರಾಟ ನಡೆಸಬೇಕು. ಆದರೆ ಈಗ ಧರ್ಮ, ಜಾತಿ, ಮತ ಮತ್ತು ವಿಭಜನೆಯ ಹೋರಾಟವಾಗಿದೆ. ಸ್ವಾತಂತ್ರ್ಯದ 79 ವರ್ಷಗಳ ನಂತರವೂ ನಾವು ಕ್ಷುಲ್ಲಕ ರಾಜಕೀಯವನ್ನು ಮೀರಿ ಬೆಳೆಯಲು ವಿಫಲರಾಗಿದ್ದೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಎಡ್ವಿನ್ ಲುಟ್ಯನ್ ಪ್ರತಿಮೆ ಕಿತ್ತೊಗೆದು ರಾಜಾಜಿ ಪ್ರತಿಮೆ ಸ್ಥಾಪನೆಯ ಹಿಂದೆ ಮೋದಿ ಚುನಾವಣಾ ಗಿಮಿಕ್?

ಚಂದ್ರ ಕುಮಾರ್ ಬೋಸ್ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹಿರಿಯ ಸಹೋದರ ಶರತ್ ಚಂದ್ರ ಬೋಸ್‌ ಅವರ ಮಗ ಅಮಿಯ ನಾಥ್ ಬೋಸ್‌ರ ಮಗ. ಅಂದರೆ ನೇತಾಜಿ ಅಣ್ಣನ ಮೊಮ್ಮಗ. ಕೇಂದ್ರ ಸರ್ಕಾರವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 100 ರಹಸ್ಯ ಕಡತಗಳನ್ನು 2016ರ ಜನವರಿ 23ರಂದು ಬಿಡುಗಡೆ ಮಾಡಿತ್ತು. ಇದಾದ ಎರಡು ದಿನಗಳಲ್ಲೇ ಚಂದ್ರ ಕುಮಾರ್ ಬಿಜೆಪಿ ಸೇರಿದರು. 2016ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಬಿಜೆಪಿ ಸೇರಿದ ಕೆಲವೇ ವರ್ಷಗಳಲ್ಲಿ ಅದರ ಸಿದ್ಧಾಂತವನ್ನು ಬೋಸ್ ವಿರೋಧಿಸಲು ಆರಂಭಿಸಿದರು. ನೇತಾಜಿ ಅವರ ಅಂತರ್ಗತ ಜಾತ್ಯತೀತ ಸಿದ್ಧಾಂತಕ್ಕೂ ಮತ್ತು ಬಿಜೆಪಿಯ ಪ್ರಸ್ತುತ ರಾಜಕೀಯಕ್ಕೂ ಹೊಂದಾಣಿಕೆಯಾಗುತ್ತಿಲ್ಲ ಎಂದು ದೂರಿದ್ದರು. ಹಾಗೆಯೇ ಬಿಜೆಪಿ ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿದೆ ಮತ್ತು ಜನರನ್ನು ವಿಭಜಿಸುತ್ತಿದೆ, ಇದು ನೇತಾಜಿಯವರ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...