ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Date:

ಛತ್ತೀಸ್‌ಗಢದ ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೈದರಾಬಾದ್‌ನಲ್ಲಿ ಭಾನುವಾರ (ಜ.5) ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಎನ್ನಲಾಗಿದ್ದು ಈತ ಮುಕೇಶ್ ಹತ್ಯೆಯ ಹಿಂದಿನ ಸೂತ್ರಧಾರ ಎಂದು ಹೇಳಲಾಗಿದೆ. ಅಲ್ಲದೆ ಘಟನೆ ಬೆಳಕಿಗೆ ಬಂದಾಗಿನಿಂದ ಸುರೇಶ್ ನಾಪತ್ತೆಯಾಗಿದ್ದ ಎನ್ನಲಾಗಿದೆ.

- Advertisement -

ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಬೆನ್ನಲ್ಲೇ ಗುತ್ತಿಗೆದಾರ ಸುರೇಶ್ ನಾಪತ್ತೆಯಾಗಿದ್ದ ಅಲ್ಲದೆ ಆತ ಹೈದರಾಬಾದ್‌ನಲ್ಲಿರುವ ತನ್ನ ಚಾಲಕನ ಮನೆಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಇತ್ತ ಆರೋಪಿಯ ಬಂಧನಕ್ಕೆ ಬಲೆ ಬೀಸಿದ ಪೊಲೀಸರು 200 ಸಿಸಿಟಿವಿಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಜೊತೆಗೆ ಸುಮಾರು 300 ಮೊಬೈಲ್ ಸಂಖ್ಯೆಗಳನ್ನು ಪತ್ತೆಹಚ್ಚಿದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸುರೇಶ್‌ ಚಂದ್ರಕರ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಛತ್ತೀಸ್‌ಘಡದ ಕಂಕೇರ್ ಜಿಲ್ಲೆಯಲ್ಲಿರುವ ಚಂದ್ರಕರ್ ಅವರ ಪತ್ನಿಯನ್ನು ಕೂಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ಕಳೆದ ವಾರ ಛತ್ತೀಸ್‌ಘಡದ ಬಸ್ತಾರ್‌ನಲ್ಲಿ ಗುತ್ತಿಗೆದಾರರೊಬ್ಬರ ಒಡೆತನದ ಶೆಡ್‌ನಲ್ಲಿ ಟ್ಯಾಂಕ್‌ನಲ್ಲಿ ಮುಕೇಶ್ ಚಂದ್ರಾಕರ್ ಅವರ ಮೃತದೇಹ ಪತ್ತೆಯಾಗಿತ್ತು. ಮುಕೇಶ್ ಅವರು ಖಾಸಗಿ ಸುದ್ದಿ ಸಂಸ್ಥೆಯಲ್ಲಿ ವರದಿಗಾರರೂ ಜೊತೆಗೆ ಸ್ವತಂತ್ರ ಪತ್ರಕರ್ತರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು.

ಕಳೆದ ವಾರ ಛತ್ತೀಸ್‌ಗಢದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸ್ಥಳೀಯ ಗುತ್ತಿಗೆದಾರನ ಕುರಿತು ವರದಿ ಮಾಡಲಾಗಿತ್ತು. ಇದಾದ ಬಳಿಕ ಮುಕೇಶ್ ಚಂದ್ರಾಕರ್ ನಾಪತ್ತೆಯಾಗಿದ್ದರು. ಈ ನಿಟ್ಟಿನಲ್ಲಿ ಸಹೋದರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದಾದ ಬಳಿಕ ಗುತ್ತಿಗೆದಾರರೊಬ್ಬರ ಒಡೆತನದ ಶೆಡ್‌ನಲ್ಲಿನ ಟ್ಯಾಂಕ್‌ನಲ್ಲಿ ಮುಕೇಶ್ ಮೃತದೇಹ ಪತ್ತೆಯಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...