ಕಟ್ಟಡದಿಂದ ಬಿದ್ದು ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ ಮೃತ್ಯು

Date:

Advertisements

ದೆಹಲಿಯ ವಸಂತ್ ಕುಂಜ್‌ನ ಸಿ-8 ಬ್ಲಾಕ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ (66) ಮೃತಪಟ್ಟಿದ್ದಾರೆ.

ನಿನ್ನೆ ಬೆಳಿಗ್ಗೆ ಬೆಳಿಗ್ಗೆ 10.30ರ ಸುಮಾರಿಗೆ ತಮ್ಮ ಮನೆಯ ನವೀಕರಣ ಕಾರ್ಯ ವೀಕ್ಷಿಸಲು ತೆರಳಿದ್ದ ವೇಳೆ ನಾಲ್ಕನೇ ಮಹಡಿಯಿಂದ ಎರಡನೇ ಮಹಡಿಗೆ ಬಿದಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.

ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಎರಡಕ್ಕೂ ಕೊಡುಗೆ ನೀಡಿರುವ ಉಮೇಶ್ ಉಪಾಧ್ಯಾಯ ಟಿವಿ, ಮುದ್ರಣ, ರೇಡಿಯೋ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಉಕ್ರೇನ್ | ಹೋಟೆಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಸುದ್ದಿ ಸಂಸ್ಥೆ ಸುರಕ್ಷತಾ ಸಲಹೆಗಾರ ಸಾವು

ಅವರು ನೆಟ್ ವರ್ಕ್ 18 ವಾಹಿನಿಯ ಅಧ್ಯಕ್ಷರಾಗಿದ್ದರು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಝೀ ನ್ಯೂಸ್, ಸಾಬ್ ಟಿವಿ, ಜನ್ಮತ್ ಟಿವಿ, ದೂರದರ್ಶನ ಮತ್ತು ಪಿಟಿಐ ಸೇರಿದಂತೆ ಹಲವು ಸುದ್ದಿಸಂಸ್ಥೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದರು.

ಇತ್ತೀಚೆಗೆ “ಭಾರತದ ಬಗ್ಗೆ ಪಾಶ್ಚಿಮಾತ್ಯ ಮಾಧ್ಯಮ ನಿರೂಪಣೆಗಳು: ಗಾಂಧಿಯಿಂದ ಮೋದಿವರೆಗೆ” (Western Media Narratives on India: From Gandhi to Modi) ಎಂಬ ಪುಸ್ತಕವನ್ನು ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡಾ ಉಮೇಶ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X