ಜೆಎಸ್‌ಎಸ್‌ಸಿ ಪರೀಕ್ಷೆ ರದ್ದು ನಿರ್ಧಾರ ವಜಾಗೊಳಿಸಿದ ಜಾರ್ಖಂಡ್ ಹೈಕೋರ್ಟ್

Date:

ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗವು (JSSC-CGL) ನಡೆಸಿದ್ದ ‘ಸಂಯೋಜಿತ ನಾಗರಿಕ ಸೇವಾ ಪರೀಕ್ಷೆ’ಯ ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಜಾರ್ಖಂಡ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಇದು ಹೇಮಂತ್ ಸೊರೇನ್ ನೇತೃತ್ವದ ಸರ್ಕಾರಕ್ಕೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ.

- Advertisement -

​ನ್ಯಾಯಮೂರ್ತಿ ದೀಪಕ್ ರೋಷನ್ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಜಾಹೀರಾತು ಸಂಖ್ಯೆ 10/2023ರ ಅಡಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಮರುನೇಮಕ ಮಾಡುವಂತೆ ಆದೇಶಿಸಿರುವ ನ್ಯಾಯಾಲಯ, ಅವರ ಸೇವೆಯನ್ನು ಯಾವುದೇ ಅಡೆತಡೆಯಿಲ್ಲದ ‘ನಿರಂತರ ಸೇವೆ’ (Continuous) ಎಂದು ಪರಿಗಣಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

​ಅಲ್ಲದೆ, ಈ ಹಿಂದೆ ನೇಮಕಾತಿ ರದ್ದುಪಡಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳಿಗೆ ಯಾವುದೇ ಆರ್ಥಿಕ ಅಥವಾ ಸೇವಾ ಸಂಬಂಧಿತ ಸೌಲಭ್ಯಗಳನ್ನು ನಿರಾಕರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಾಲಯದ ಈ ತೀರ್ಪಿನಿಂದ, ಆಯ್ಕೆಯಾಗಿದ್ದ ಸುಮಾರು 2,300 ಅಭ್ಯರ್ಥಿಗಳಿಗೆ ದೊಡ್ಡ ನಿರಾಳತೆ ಸಿಕ್ಕಂತಾಗಿದೆ.

“ಅಪೂರ್ಣ ತನಿಖೆಯ ಆಧಾರದ ಮೇಲೆ ಇಡೀ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸುವ ಸರ್ಕಾರದ ನಿರ್ಧಾರ ಸಮರ್ಥನೀಯವಲ್ಲ. ಸಂಪೂರ್ಣ ಆಯ್ಕೆ ಪ್ರಕ್ರಿಯೆಯಲ್ಲಿ ವ್ಯವಸ್ಥಿತ ಅಕ್ರಮಗಳು ನಡೆದಿವೆ ಎಂಬುದನ್ನು ಸಾಬೀತುಪಡಿಸಲು ರಾಜ್ಯ ಸರ್ಕಾರವು ಯಾವುದೇ ವಾಸ್ತವಿಕ ಆಧಾರಿತ ಪುರಾವೆಗಳನ್ನು ಒದಗಿಸುವಲ್ಲಿ ವಿಫಲವಾಗಿದೆ,” ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ.

​ಕೇವಲ ಕೆಲವರ ಮೇಲೆ ಆರೋಪಗಳಿದ್ದಾವೆ ಅಥವಾ ತನಿಖೆ ಬಾಕಿ ಇದೆ ಎಂಬ ಕಾರಣಕ್ಕೆ ನಿಯಮಾನುಸಾರ ಆಯ್ಕೆಯಾದ ಎಲ್ಲ ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಅಕ್ರಮದಲ್ಲಿ ಭಾಗಿಯಾದವರನ್ನು ಮತ್ತು ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಮುಗ್ಧ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿದೆಯೇ ಎಂದು ನಿರ್ಧರಿಸಬಹುದು. ಹೀಗಿರುವಾಗ ಏಕಾಏಕಿ ಇಡೀ ಪ್ರಕ್ರಿಯೆ ರದ್ದುಪಡಿಸುವುದು ಕಾನೂನಿನ ಮುಂದೆ ನಿಲ್ಲುವುದಿಲ್ಲ ಎಂದು ಪೀಠವು ಅಭಿಪ್ರಾಯಪಟ್ಟಿದೆ.

​ಅಲ್ಲದೆ, ಅಭ್ಯರ್ಥಿಗಳಿಗೆ ತಮ್ಮ ಅಹವಾಲು ಹೇಳಿಕೊಳ್ಳಲು (ನೈಸರ್ಗಿಕ ನ್ಯಾಯದ ತತ್ವ) ಯಾವುದೇ ಅವಕಾಶ ನೀಡದೆ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದ್ದೇಕೆ ಎಂಬುದಕ್ಕೆ ಸೂಕ್ತ ಸಮರ್ಥನೆ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೋರ್ಟ್ ಹೇಳಿದೆ.

ಸಿಐಡಿ ತನಿಖಾ ವರದಿ ಮತ್ತು ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರವು ಜೆಎಸ್‌ಎಸ್‌ಸಿ–ಸಿಜಿಎಲ್ ಪರೀಕ್ಷೆ ಮತ್ತು ಆಯ್ಕೆಯಾಗಿದ್ದ ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಪಡಿಸಿತ್ತು. ಈ ಅನ್ಯಾಯದ ನಡೆಯನ್ನು ಪ್ರಶ್ನಿಸಿ ಯಶಸ್ವಿ ಅಭ್ಯರ್ಥಿಗಳಾದ ಆಕಾಶ್ ಗೌರವ್ ಮತ್ತು ಇತರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಕ್ಟೋಬರ್ 8ರಂದು ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

​ಅರ್ಜಿದಾರರ ಪರ ವಕೀಲ ಅಮೃತಾನ್ಶ್ ವತ್ಸ್ ವಾದ ಮಂಡಿಸಿ, “ತನಿಖೆಯ ವೇಳೆ ಸರ್ಕಾರವೇ ಸುಮಾರು 465 ಅನುಮಾನಾಸ್ಪದ ಅಭ್ಯರ್ಥಿಗಳನ್ನು ಗುರುತಿಸಿ ನೋಟಿಸ್ ನೀಡಿದೆ. ಅಂದರೆ, ಅಕ್ರಮವೆಸಗಿದವರನ್ನು ಹಾಗೂ ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರನ್ನು ಪ್ರತ್ಯೇಕಿಸಲು ತನಿಖಾ ಸಂಸ್ಥೆಗಳಿಗೆ ಸಾಮರ್ಥ್ಯವಿದೆ. ಹೀಗಿರುವಾಗ ಕೆಲವರು ಮಾಡಿದ ತಪ್ಪಿಗೆ ತಮ್ಮ ಕಠಿಣ ಪರಿಶ್ರಮದಿಂದ ಉತ್ತೀರ್ಣರಾದ ಸಾವಿರಾರು ಮುಗ್ಧ ಅಭ್ಯರ್ಥಿಗಳಿಗೆ ಶಿಕ್ಷೆ ನೀಡುವುದು ಅನ್ಯಾಯ,” ಎಂದು ವಾದಿಸಿದ್ದರು. ಈ ವಾದವನ್ನು ನ್ಯಾಯಾಲಯವು ಎತ್ತಿಹಿಡಿದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್ | ನೆತನ್ಯಾಹುಗೆ ಹಿನ್ನಡೆ- ಬಣದ ಸಂಖ್ಯೆ 53ರಿಂದ 46ಕ್ಕೆ ಕುಸಿತ

ಇಸ್ರೇಲ್‌ನಲ್ಲಿ ಮತ್ತೆ ಸರ್ಕಾರ ರಚಿಸಲು ಪ್ರಯತ್ನಿಸುತ್ತಿರುವ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ...

ವಿಶೇಷ ಶಿಕ್ಷಕರ ರಾಜ್ಯ ಪ್ರಶಸ್ತಿ: ದಾವಣಗೆರೆಯಲ್ಲಿ ಅರ್ಹರಿಂದ ಅರ್ಜಿ ಆಹ್ವಾನ

2026-27ನೇ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈಯುತ್ತಿರುವ ಸಂಸ್ಥೆಗಳು, ವಿಕಲಚೇತನರ ಕ್ಷೇತ್ರದಲ್ಲಿ...

​’ಗೃಹಲಕ್ಷ್ಮಿ’ಗೆ ₹7,400 ಕೋಟಿ ಬಿಡುಗಡೆ, ಪಿಂಚಣಿಗೆ ಫಿಕ್ಸೆಡ್‌ ಡೇಟ್: ಸಿಎಂ ಡಿ.ಕೆ. ಶಿವಕುಮಾರ್

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 'ಗೃಹಲಕ್ಷ್ಮಿ' ಯೋಜನೆಯ...

ಹಿರಿಯ ಭಾಷಾಶಾಸ್ತ್ರಜ್ಞ, ವಿಮರ್ಶಕ ಡಾ. ಕೆ.ವಿ. ನಾರಾಯಣ ನಿಧನ

ಕನ್ನಡ ಸಾಹಿತ್ಯ, ಭಾಷೆ ಮತ್ತು ಸಂಸ್ಕೃತಿಯ ಲೋಕಕ್ಕೆ ತಮ್ಮ ಅಪೂರ್ವ ಕೊಡುಗೆ...