ನ್ಯಾಯಾಧೀಶರು ರಾಜಕುಮಾರರೂ ಅಲ್ಲ, ಸಾರ್ವಭೌಮರೂ ಅಲ್ಲ: ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್

Date:

“ನ್ಯಾಯಾಂಗವು ಸಾರ್ವಜನಿಕರ ಹಕ್ಕುಗಳನ್ನು ಎತ್ತಿಹಿಡಿಯುವ ಉದ್ದೇಶದಿಂದಲೇ ಇದ್ದು, ಇದರ ಭಾಗವಾಗಿರುವ ನ್ಯಾಯಾಧೀಶರು ರಾಜಕುಮಾರರೂ ಅಲ್ಲ ಅಥವಾ ಸಾರ್ವಭೌಮರು ಅಲ್ಲ” ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದರು.

- Advertisement -

ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಜೆ20 ಶೃಂಗಸಭೆಯಲ್ಲಿ ಮಾತನಾಡಿದ ಸಿಜೆಐ ಚಂದ್ರಚೂಡ್ ಅವರು ಡಿಜಿಟಲ್ ತಂತ್ರಜ್ಞಾನದ ಬಗ್ಗೆ ಪ್ರಸ್ತಾಪ ಮಾಡಿದರು. “ನ್ಯಾಯಾಂಗ ನಿರ್ಧಾರ ಕೈಗೊಳ್ಳಲು ಬಳಸುವ ಕೃತಕ ಬುದ್ಧಿಮತ್ತೆಯು (ಎಐ) ಪಾರದರ್ಶಕವಾಗಿರಬೇಕು ಮತ್ತು ಅದರ ಫಲಿತಾಂಶಗಳಿಗೆ ಕಾರಣಗಳನ್ನು ನೀಡಬೇಕು” ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನು ಓದಿದ್ದೀರಾ?  ‘ಸಿಎಎ ಅಸಂವಿಧಾನಿಕ’ ಎಂದ ನ್ಯಾಯಮೂರ್ತಿ ಚಂದ್ರಚೂಡ್‌ರ ಪುತ್ರ; ವೀಡಿಯೋ ವೈರಲ್

“ನ್ಯಾಯಾಧೀಶರು ಬಹುಶಃ ಉನ್ನತ ವೇದಿಕೆಯ ಮೇಲೆ ಕುಳಿತಿರುವ ಏಕೈಕ ಸಾರ್ವಜನಿಕ ಕಾರ್ಯಕರ್ತರು. ಯಾವುದೇ ಚುನಾವಣಾ ನಷ್ಟದ ಭಯವಿಲ್ಲದೆ ಪ್ರತ್ಯೇಕ ಖಾಸಗಿ ಕೋಣೆಗಳಲ್ಲಿ ಇತರರ ಜೀವನದ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವವರು ನ್ಯಾಯಾಧೀಶರು” ಎಂದು ಹೇಳಿದರು.

“ನ್ಯಾಯಾಧೀಶರು ನೀಡುವ ಆದೇಶವು ಎಂದಿಗೂ ಪಾರದರ್ಶಕವಾಗಿರಬೇಕು ಮತ್ತು ಆ ಆದೇಶವು ಕಾನೂನು ಶಿಕ್ಷಣ ಹೊಂದಿರುವ ಅಥವಾ ಇಲ್ಲದ ಎಲ್ಲರಿಗೂ ಅರ್ಥವಾಗುವಂತಹದ್ದಾಗಿರಬೇಕು” ಎಂದು ಸಿಜೆಐ ಅಭಿಪ್ರಾಯಿಸಿದರು.

“ನ್ಯಾಯಾಲಯದ ತೀರ್ಪಿನ ಮೊದಲು ಮತ್ತು ನಂತರದ ಪ್ರಕ್ರಿಯೆಯಲ್ಲಿ ಡಿಜಿಟಲೀಕರಣ ಮತ್ತು ತಂತ್ರಜ್ಞಾನವು ಉತ್ತಮ ನ್ಯಾಯ ನೀಡುವ ಕಾರ್ಯವಿಧಾನಗಳಿಗೆ ಸಹಾಯ ಮಾಡುತ್ತದೆ” ಎಂದು ಈ ಸಂದರ್ಭದಲ್ಲೇ ಹೇಳಿದರು.

ಇದನ್ನು ಓದಿದ್ದೀರಾ? ತೀರ್ಪು ತಪ್ಪಾಗಿದೆ ಎಂದು ನೇರವಾಗಿ ರದ್ದುಪಡಿಸುವ ಅಧಿಕಾರ ಶಾಸಕಾಂಗಕ್ಕೆ ಇಲ್ಲ: ಸಿಜೆಐ ಚಂದ್ರಚೂಡ್

ಹಾಗೆಯೇ ನ್ಯಾಯಾಲಯದ ಪ್ರಕ್ರಿಯೆಗಳ ಬಗ್ಗೆ ತಪ್ಪು ಮಾಹಿತಿಯ ಕಳವಳಕಾರಿ ಅಂಶದ ಬಗ್ಗೆ ಮಾತನಾಡಿದರು. “ಭಾರತದಲ್ಲಿ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುವ ನಿಟ್ಟಿನಲ್ಲಿ ವಕೀಲರೊಂದಿಗೆ ವಾಗ್ವಾದ ನಡೆಸುವುದು ಸಾಮಾನ್ಯವಾಗಿದೆ. ಆದರೆ ಪೀಠದ ಅಭಿಪ್ರಾಯ ಮತ್ತು ವಿಚಾರಣೆಯ ತಪ್ಪು ಕ್ಲಿಪ್‌ಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುವುದರಿಂದ ಕೆಲವೊಮ್ಮೆ ತಪ್ಪಾಗುತ್ತದೆ. ಆದರೆ ಕಾನೂನು ಪತ್ರಕರ್ತರು ಲೈವ್ ರಿಪೋರ್ಟಿಂಗ್ ಮಾಡಿ ಈ ತಪ್ಪು ಮಾಹಿತಿ ಹೊರಬೀಳುವುದನ್ನು ತಡೆಯುತ್ತಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಪ್ರತಿಭಟನೆ | AISA ನಾಯಕಿ ನೇಹಾ ಬೋರಾ ವಶಕ್ಕೆ; ಪೊಲೀಸ್‌ ಬಸ್‌ ಸುತ್ತುವರಿದ ಪ್ರತಿಭಟನಾಕಾರರು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ...

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ...