ಜಾಮೀನು ಅರ್ಜಿ ವಿಚಾರಣೆಯಲ್ಲಿ ನ್ಯಾಯಾಧೀಶರು ಸಾಮಾನ್ಯ ಜ್ಞಾನ ಬಳಸಬೇಕು: ಸಿಜೆಐ ಡಿ.ವೈ ಚಂದ್ರಚೂಡ್

Date:

ವಿಚಾರಣಾ ನ್ಯಾಯಾಧೀಶರು ಅಪರಾಧದ ಪ್ರಮುಖ ವಿಷಯಗಳ ಬಗ್ಗೆ ಅನುಮಾನ ಹೊಂದಿದ್ದಾಗ ಜಾಮೀನು ನೀಡದೆ ಸುರಕ್ಷಿತವಾಗಿ ಕೆಲಸ ಮಾಡಲು ಬಯಸುತ್ತಾರೆ. ಆದರೆ, ಅವರು ಪ್ರತಿ ಪ್ರಕರಣದ ಸೂಕ್ಷ್ಮತೆಗಳನ್ನು ಅರಿಯಲು ‘ದೃಢವಾದ ಸಾಮಾನ್ಯ ಜ್ಞಾನ’ವನ್ನು ಬಳಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ನಡೆದ ‘ಬರ್ಕ್ಲಿ ಸೆಂಟರ್‌’ನ 11ನೇ ವಾರ್ಷಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು. “ವಿಚಾರಣಾ ನ್ಯಾಯಾಲಯಗಳಲ್ಲಿ ಜಾಮೀನು ಪಡೆಯಬೇಕಾದ ಜನರು, ನ್ಯಾಯಾಧೀಶರ ಹಿಂದೇಟಿನ ಕಾರಣದಿಂದಾಗಿ ಹೈಕೋರ್ಟ್‌ಗಳಿಗೆ ಹೋಗುವಂತಾಗಿದೆ. ಹೈಕೋರ್ಟ್‌ಗಳಲ್ಲಿಯೂ ಕೆಲವರು ಜಾಮೀನು ಪಡೆಯಲು ಸಾಧ್ಯವಾಗುತ್ತಿಲ್ಲ. ಈ ವಿಳಂಬದಿಂದ ಹಲವರು ಅನಿಯಂತ್ರಿತ ಬಂಧನವನ್ನು ಎದುರಿಸುವಂತಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

“ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ಸೇರಿದಂತೆ ಮುಖಂಡರು, ಸಾಮಾಜಿಕ ಕಾರ್ಯಕರ್ತರು, ಶಿಕ್ಷಣ ತಜ್ಞರು, ಪತ್ರಕರ್ತರು ಮತ್ತು ರಾಜಕಾರಣಿಗಳನ್ನು ರಾಜಕೀಯ ಪ್ರೇರಿತವಾಗಿ ಬಂಧಿಸಲಾಗುತ್ತಿದೆ. ದುರದೃಷ್ಟವಶಾತ್, ವಿಚಾರಣಾ ನ್ಯಾಯಾಧೀಶರು ನೀಡುವ ಯಾವುದೇ ಆದೇಶವನ್ನು ನಾವು ಅನುಮಾನದಿಂದ ನೋಡುತ್ತೇವೆ. ಇದರರ್ಥ ವಿಚಾರಣಾ ನ್ಯಾಯಾಧೀಶರು ಹೆಚ್ಚು ಸುರಕ್ಷಿತವಾದ ನಡೆಗಳನ್ನು ಅನುಸರಿಸುತ್ತಿದ್ದಾರೆ. ಗಂಭೀರ ಅಪರಾಧಗಳಂತಹ ಪ್ರಮುಖ ವಿಷಯಗಳಲ್ಲಿ ಅವರು ಜಾಮೀನು ನೀಡುವುದಿಲ್ಲ,” ಎಂದು ಚಂದ್ರಚೂಡ್ ಬೇಸರ ವ್ಯಕ್ತಪಡಿಸಿದ್ದಾರೆ.

“ಬಹುತೇಕ ಪ್ರಕರಣಗಳು ಸುಪ್ರೀಂ ಕೋರ್ಟ್‌ಗೆ ಬರಬಾರದಿತ್ತು. ನಾವು ಜಾಮೀನಿಗೆ ಆದ್ಯತೆ ನೀಡಲು ಕಾರಣವೆಂದರೆ, ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅತ್ಯಂತ ಆರಂಭಿಕ ಹಂತದಲ್ಲಿರುವವರು ಹಿಂಜರಿಕೆ ಇಲ್ಲದೆ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂಬ ಸಂದೇಶವನ್ನು ರಾಷ್ಟ್ರಾದ್ಯಂತ ರವಾನಿಸುವ ಉದ್ದೇಶವಿದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 12ರ ಸುಪ್ರೀಂ ಕೋರ್ಟ್ ಮೆರವಣಿಗೆ: ರಾಹುಲ್, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಗೆ ನೋಟಿಸ್

ಕಳೆದ ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್ ಕಡೆಗೆ ನಡೆಸಲಾದ ಮೆರವಣಿಗೆಗೆ ಸಂಬಂಧಿಸಿದಂತೆ...

ಪೊಲೀಸ್ ವಿರುದ್ಧ ಲೈಂಗಿಕ ಕಿರುಕುಳ ದೂರಿನ ಬೆನ್ನಲ್ಲೇ ಜಾತಿನಿಂದನೆ ಕೇಸ್: ಯೂಟ್ಯೂಬರ್ ಯುವತಿ ಬಂಧಿಸದಂತೆ ಸುಪ್ರೀಂ ಆದೇಶ

ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಯುವ ಪತ್ರಕರ್ತೆ...

ರಾಮಲೀಲಾ ಮೈದಾನದಲ್ಲಿ ₹15.66 ಕೋಟಿಯ ಕಣ್ಗಾವಲು: 338 ಫೇಶಿಯಲ್ ರೆಕಗ್ನಿಷನ್ ಕ್ಯಾಮೆರಾ ಅಳವಡಿಕೆಗೆ ಸಿದ್ಧತೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಪ್ರತಿಭಟನೆಗಳು ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳ ಪ್ರಮುಖ...