ಅಯೋಧ್ಯೆ ತೀರ್ಪು ನೀಡಿದ ಐವರು ನ್ಯಾಯಾಧೀಶರಿಗೆ ‘ಪ್ರಾಣ ಪ್ರತಿಷ್ಠಾಪನೆ’ ಕಾರ್ಯಕ್ರಮಕ್ಕೆ ಆಹ್ವಾನ

Date:

ನಾಲ್ಕು ವರ್ಷಗಳ ಹಿಂದೆ ರಾಮ ಜನ್ಮಭೂಮಿ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟಿನ ಸಂವಿಧಾನಿಕ ಪೀಠದ ಐವರು ನ್ಯಾಯಾಧೀಶರಿಗೆ ಜನವರಿ 22ರಂದು ನಡೆಯುವ ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

2019ರಲ್ಲಿ ಅಯೋಧ್ಯೆ ರಾಮ ಮಂದಿರದ ಪರವಾಗಿ ತೀರ್ಪು ನೀಡಿದ ಐವರು ನ್ಯಾಯಾಧೀಶರಾದ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ಮಾಜಿ ನ್ಯಾಯಮೂರ್ತಿಗಳಾದ ಎಸ್‌ ಅಬ್ದುಲ್ ನಝೀರ್, ಅಶೋಕ್ ಭೂಷಣ್ ಹಾಗೂ ಎಸ್‌ ಎ ಬೋಬ್ಡೆ ಅವರನ್ನು ಆಹ್ವಾನಿಸಲಾಗಿದೆ.

ಆಹ್ವಾನಿತರಲ್ಲಿ ಮಾಜಿ ಮುಖ್ಯ ನ್ಯಾಯಾಧೀಶರು, ನ್ಯಾಯಾಧೀಶರು, ಉನ್ನತ ವಕೀಲರು ಒಳಗೊಂಡು 50 ನ್ಯಾಯ ಶಾಸ್ತ್ರಜ್ಞರನ್ನು ಆಹ್ವಾನಿಸಲಾಗಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ಮಾಜಿ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಕೂಡ ಆಹ್ವಾನಿತರಲ್ಲಿ ಸೇರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ಈ ಕಚ್ಚಾಟ, ‘ಆತ್ಮಹತ್ಯೆ’ಯ ಹುಚ್ಚಾಟ

ಐವರ ಸಾಂವಿಧಾನಿಕ ಪೀಠವು ವಿವಾದಿತ ಜಾಗವನ್ನು ರಾಮ ಲಲ್ಲಾ ದೇಗುಲಕ್ಕೆ ನೀಡಿತ್ತು. ಅಲ್ಲದೆ ಮುಸ್ಲಿಂ ಅರ್ಜಿದಾರರಿಗೆ ಮಸೀದಿ ನಿರ್ಮಿಸಲು ಪರ್ಯಾಯವಾಗಿ ಐದು ಎಕರೆ ಭೂಮಿಯನ್ನು ನೀಡಬೇಕೆಂದು ಸರ್ಕಾರಕ್ಕೆ ಆದೇಶಿಸಿತ್ತು.

ಈ ಐವರು ನ್ಯಾಯಾಧೀಶರಲ್ಲಿ ಮಾಜಿ ಸಿಜೆಐ ರಂಜನ್ ಗೊಗೋಯ್ ಅವರು ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದಾರೆ. ಅಬ್ದುಲ್ ನಾಜೀರ್ ಅವರು ಆಂಧ್ರ ಪ್ರದೇಶದ ರಾಜ್ಯಪಾಲರಾಗಿದ್ದಾರೆ. ಡಿ ವೈ ಚಂದ್ರಚೂಡ್ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿದ್ದಾರೆ. ಉಳಿದ ಇಬ್ಬರು ನ್ಯಾಯಾಧೀಶರಾದ ಅಶೋಕ್ ಭೂಷಣ್ ಹಾಗೂ ಎಸ್ ಎ ಬೋಬ್ಡೆ ನಿವೃತ್ತರಾಗಿದ್ದಾರೆ.

ದೇಗುಲ ಟ್ರಸ್ಟ್‌ನ ಮಾಹಿತಿಯಂತೆ ಜನವರಿ 22ರಂದು ನಡೆಯುವ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ರಾಜಕಾರಣಿಗಳು, ಸೆಲಬ್ರಿಟಿಗಳು, ಕೈಗಾರಿಕೋದ್ಯಮಿಗಳು, ಸಂತರು ಒಳಗೊಂಡು 7 ಸಾವಿರ ಮಂದಿ ಭಾಗವಹಿಸಲಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಈಗಾಗಲೇ ಸರಕಾರ ಕೆಲವು ಜಡ್ಜಗಳಿಗೆ ಅವರ ಸೇವೆಯನ್ನು ಪರಿಗಣಿಸಿ ರಾಜಕೀಯ ಸ್ಥಾನಮಾನ ನೀಡಿದೆ,, ಉಳಿದವರಿಗೆ ಮುಂದಿನ ದಿನಗಳಲ್ಲಿ,, ಕೇಂದ್ರದಲ್ಲಿ ಮಂತ್ರಿ ಸ್ಥಾನ, ರಾಜ್ಯಪಾಲ , ಇತರೆ ಉನ್ನತ ಹುದ್ದೆಗಳನ್ನು ನೀಡಬಹುದು,,, ಮಾಜಿಗಳಾಗಿರುವ ಇವರುಗಳ ಸೇವೆಯು ಹಿಂದಿನವರಿಗೆ ಮಾದರಿ ಆದರೆ,,,, ಊಹಿಸಲು ಭಯ ಆಗುವುದು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೊಲೀಸ್‌ ಕಸ್ಟಡಿಯಲ್ಲೇ ನಡೆದಿವೆ 275 ಅತ್ಯಾಚಾರ ಪ್ರಕರಣಗಳು: ಎನ್‌ಸಿಆರ್‌ಬಿ ಡೇಟಾ

2017 ರಿಂದ 2022ರವರೆಗೆ 275 'ಪೊಲೀಸ್‌ ಕಸ್ಟಡಿಯಲ್ಲಿ ಅತ್ಯಾಚಾರ' ಪ್ರಕರಣಗಳು ದಾಖಲಾಗಿವೆ...

ಗುಜರಾತ್ | ಭಾರತದ ಅತಿ ಉದ್ದದ ಸೇತುವೆ ‘ಸುದರ್ಶನ್ ಸೇತು’ ಉದ್ಘಾಟಿಸಿದ ಪ್ರಧಾನಿ ಮೋದಿ

ಗುಜರಾತ್‌ನ ದ್ವಾರಕಾ ಜಿಲ್ಲೆಯ ಬೇಟ್ ದ್ವಾರಕಾ ದ್ವೀಪದಿಂದ ಓಖಾ ಪ್ರದೇಶಕ್ಕೆ ಸಂಪರ್ಕಿಸುವ,...

ಲೋಕಸಭಾ ಚುನಾವಣೆ | ಮುಂದಿನ ವಾರ ಬಿಜೆಪಿ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ವರದಿ

ಮುಂದಿನ ತಿಂಗಳು ಚುನಾವಣಾ ಆಯೋಗದಿಂದ ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನವೇ...

ಆಂಧ್ರ ಪ್ರದೇಶ | ಟಿಡಿಪಿ-ಜನಸೇನಾ ಮೈತ್ರಿ: 24 ಕ್ಷೇತ್ರ ಪವನ್‌ ಕಲ್ಯಾಣ್‌ಗೆ ಬಿಟ್ಟುಕೊಟ್ಟ ಚಂದ್ರಬಾಬು ನಾಯ್ಡು

ಲೋಕಸಭೆ ಚುನಾವಣೆ ಸಂದರ್ಭದಲ್ಲಿಯೇ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ...