ಜುಲೈ 20ರ ಪ್ರತಿಭಟನೆ ಟ್ರೇಲರ್ ಅಷ್ಟೇ, UAPA-NSA ಅಡಿ ಬಂಧನಕ್ಕೂ ಸಿದ್ಧ: ಸಿಜೆಪಿ ವಕ್ತಾರ

Date:

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಬುಧವಾರ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜುಲೈ 20ರ ಪ್ರತಿಭಟನೆಯು ಬರೀ ಟ್ರೇಲರ್ ಅಷ್ಟೇ, ಪ್ರತಿಭಟನಾಕಾರರ ಬೇಡಿಕೆಗಳನ್ನು ಪರಿಹರಿಸಲು ವಿಫಲವಾದರೆ ಹತ್ತಾರು ಲಕ್ಷ ಯುವಕರು ದೆಹಲಿಯಲ್ಲಿ ಸೇರಲಿದ್ದಾರೆ ಎಂದು ಎಚ್ಚರಿಸಿದ್ದಾರೆ. ಹಾಗೆಯೇ ನಾವು UAPA-NSA ಅಡಿ ಬಂಧನಕ್ಕೂ ಸಿದ್ಧ ಎಂದಿದ್ದಾರೆ.

- Advertisement -

ಈ ಬಗ್ಗೆ ಮಾಧ್ಯಮ ಸಂಸ್ಥೆಯೊಂದರ ಜತೆ ಮಾತನಾಡಿದ ಸಿಜೆಪಿ ವಕ್ತಾರ, “ಈ ಆಂದೋಲನವು ದೇಶದ ಸ್ವಾತಂತ್ರ್ಯಾನಂತರದ ಇತಿಹಾಸದ ಅತಿದೊಡ್ಡ ಚಳವಳಿಯಾಗಿದೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಆಲಿಸದಿದ್ದರೆ ಲಕ್ಷಾಂತರ ಜನರು ದೆಹಲಿಗೆ ಬರಬಹುದು. ನಾವು ಹಿಂಜರಿಯುವ ಮಾತೇ ಇಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನೂ ಓದಿ: ‘ವಿಡಿಯೋ ನೋಡಲು ನಮಗೆ ಸಮಯವಿಲ್ಲ’: ಪೊಲೀಸ್ ದೌರ್ಜನ್ಯ ಪ್ರಶ್ನಿಸಿದ್ದ ಸಿಜೆಪಿ ಅರ್ಜಿಗೆ ಸಿಜೆಐ ನಕಾರ

ಪ್ರತಿಭಟನಾಕಾರರು ಶಾಂತಿಯುತವಾಗಿರಲಿಲ್ಲ ಎಂಬ ಹೇಳಿಕೆಯನ್ನು ತಳ್ಳಿಹಾಕಿದ ರಂಕಾ, ಜುಲೈ 20ರ ಮೆರವಣಿಗೆ ಶಾಂತಿಯುತವಾಗಿತ್ತು. ಪೊಲೀಸರು ಕ್ರೂರವಾಗಿ ವರ್ತಿಸಿ ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ. ಪೊಲೀಸರು ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಿದ ನಂತರವೇ ಪರಿಸ್ಥಿತಿ ಹದಗೆಟ್ಟಿದ್ದು ಎಂದು ಸ್ಪಷ್ಟನೆ ನೀಡಿದ್ದಾರೆ.

“ಗಾಂಧಿ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ನಾವು ಅನುಸರಿಸುವುದರಿಂದ ಯುವಕರು 31 ದಿನಗಳ ಕಾಲ ಇಲ್ಲಿ ಶಾಂತಿಯುತವಾಗಿ ಕುಳಿತಿದ್ದಾರೆ. ನಮ್ಮ ಬೇಡಿಕೆ ಸ್ಪಷ್ಟವಾಗಿದೆ. ಅಭಿಜೀತ್ ದೀಪ್ಕೆ ಆ ಬಗ್ಗೆ ಮಾತನಾಡಿದ್ದಾರೆ. ನಮ್ಮ ಪ್ರತಿಭಟನೆ ನಿಲ್ಲದು. ಈ ಚಳವಳಿಯ ನಾಯಕತ್ವವು ಕಾನೂನು ಕ್ರಮಕ್ಕೆ ಹೆದರುವುದಿಲ್ಲ. ನಾವು ಯಾವುದೇ ಎಫ್‌ಐಆರ್‌ಗೆ ಹೆದರುವುದಿಲ್ಲ, ಯುಎಪಿಎ ಮತ್ತು ಎನ್‌ಎಸ್‌ಎ ಅಡಿಯಲ್ಲಿ ಬಂಧನಕ್ಕೆ ಒಳಗಾಗಲೂ ಸಿದ್ಧರಿದ್ದೇವೆ. ಜೈಲು ಶಿಕ್ಷೆ ನಮ್ಮ ಹೋರಾಟಕ್ಕೆ ತೆರಬೇಕಾದ ಸಣ್ಣ ಬೆಲೆ” ಎಂದು ರಂಕಾ ಹೇಳಿದ್ದಾರೆ.

ಇನ್ನು ರಾಜಕೀಯ ಪಕ್ಷಗಳು ಈ ಚಳವಳಿಗೆ ಬೆಂಬಲಿಸುವಂತೆ ಕರೆ ನೀಡಿದ ರಂಕಾ ಬಿಜೆಪಿ ಸೇರಿದಂತೆ ಯಾವುದೇ ಪಕ್ಷದ ನಾಯಕರನ್ನು ಪ್ರತಿಭಟನಾಕಾರರು ಸ್ವಾಗತಿಸುತ್ತೇವೆ. ಇದು ಒಂದು ದೊಡ್ಡ ಚಳವಳಿಯಾಗಿರುವುದರಿಂದ ಯಾರೂ ಬರಬಹುದು. ಬೇಡಿಕೆ ಅದೇ ಆಗಿರುತ್ತದೆ” ಎಂದರು.

ಇನ್ನೊಂದೆಡೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಕಪ್ಪು ದಿನ ಪ್ರತಿಭಟನೆ ನಡೆದಿದೆ. ಈ ಪ್ರತಿಭಟನೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಮಹುವಾ ಮೊಯಿತ್ರಾ, ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ ಸೇರಿದಂತೆ ಪ್ರಮುಖ ವಿಪಕ್ಷ ಸಂಸದರು ಭಾಗವಹಿಸಿದ್ದರು. ಅಧಿವೇಶನದ ಮೊದಲ ಎರಡು ದಿನಗಳೂ (ಸೋಮವಾರ ಮತ್ತು ಮಂಗಳವಾರ) ಇದೇ ವಿಚಾರಗಳ ಕುರಿತು ಉಂಟಾದ ಗದ್ದಲದಿಂದಾಗಿ ಯಾವುದೇ ಗಮನಾರ್ಹ ಕಲಾಪಗಳು ನಡೆಯದೆ ಲೋಕಸಭೆ ಮತ್ತು ರಾಜ್ಯಸಭೆ ದಿನವಿಡೀ ಮುಂದೂಡಲ್ಪಟ್ಟಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...