52ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ. ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ

Date:

ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು (ಮೇ 14) ದೇಶದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೇ 13ರಂದು ಸಂಜೀವ್ ಖನ್ನಾ ಅವರು ನಿವೃತ್ತಿ ಹೊಂದಿದ್ದು ಇಂದಿನಿಂದ ಗವಾಯಿ ಸಿಜೆಐ ಆಗಲಿದ್ದಾರೆ.

- Advertisement -

ಅವರ ನೇಮಕಾತಿಯನ್ನು ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಎಂದೇ ಪರಿಗಣಿಸಬಹುದು. ನಿವೃತ್ತ ಸಿಜೆಐ ಕೆ ಜಿ ಬಾಲಕೃಷ್ಣನ್ ನಂತರ ಸುಪ್ರೀಂ ಕೋರ್ಟ್‌ನ ಉನ್ನತ ಸ್ಥಾನವನ್ನು ತಲುಪಿದ ಪರಿಶಿಷ್ಟ ಜಾತಿ ಸಮುದಾಯದ ಎರಡನೇ ವ್ಯಕ್ತಿ ನ್ಯಾಯಮೂರ್ತಿ ಗವಾಯಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಸಂವಿಧಾನ ‘ಭೀಮಸ್ಮೃತಿ’ ಎನ್ನುವ ಸಿಜೆಐ- ತಳಸ್ತರದ ಅಸಹಾಯಕರ ನ್ಯಾಯ ಪ್ರತಿಪಾದಕ

ನ್ಯಾಯಮೂರ್ತಿ ಗವಾಯಿ ಅವರು ಹಲವು ರಾಜ್ಯಗಳ ರಾಜ್ಯಪಾಲರಾಗಿದ್ದ ಪ್ರಸಿದ್ಧ ರಾಜಕಾರಣಿ ಆರ್ ಎಸ್ ಗವಾಯಿ ಅವರ ಪುತ್ರ. 1960ರ ನವೆಂಬರ್ 24ರಂದು ಅಮರಾವತಿಯಲ್ಲಿ ಜನಿಸಿದ ನ್ಯಾಯಮೂರ್ತಿ ಗವಾಯಿ ಅವರ ಬಾಲ್ಯದ ಬಹುಪಾಲು ಅಮರಾವತಿಯ ಫ್ರೆಝರ್‌ಪುರದ ಸ್ಲಮ್‌ನಲ್ಲಿ ಕಳೆಯಿತು.

Advertisements

ನಾಗ್ಪುರ ವಿಶ್ವವಿದ್ಯಾಲಯದಲ್ಲಿ ಬಿಎ ಎಲ್‌ಎಲ್‌ಬಿ ಪದವಿಯನ್ನು ಪೂರ್ಣಗೊಳಿಸಿದರು. ಅದಾದ ನಂತರ 1985ರ ಮಾರ್ಚ್ 16ರಂದು ವೃತ್ತಿ ಜೀವನ ಆರಂಭಿಸಿದರು. ಮಹಾರಾಷ್ಟ್ರದ ಮಾಜಿ ಅಡ್ವೊಕೇಟ್ ಜನರಲ್ ಮತ್ತು ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದ ದಿವಂಗತ ರಾಜಾ ಎಸ್ ಭೋಂಸ್ಲೆ ಅವರೊಂದಿಗೆ 1987ರವರೆಗೆ ಕಾರ್ಯನಿರ್ವಹಿಸಿ ತಮ್ಮ ಕಾನೂನು ವೃತ್ತಿಜೀವನಕ್ಕೆ ಅಡಿಪಾಯ ಹಾಕಿಕೊಂಡರು.

ಅದಾದ ಬಳಿಕ 1987ರಿಂದ 1990ರವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ ಸ್ವತಂತ್ರ ವಕೀಲಿ ವೃತ್ತಿ ನಡೆಸಿದರು. 1990ರ ನಂತರ ಅವರು ಮುಖ್ಯವಾಗಿ ಬಾಂಬೆ ಹೈಕೋರ್ಟ್‌ನ ನಾಗ್ಪುರ ನ್ಯಾಯಪೀಠದಲ್ಲಿ ಅಭ್ಯಾಸ ಮಾಡಿದರು. 2023ರ ನವೆಂಬರ್ 14ರಂದು ನ್ಯಾಯಮೂರ್ತಿ ಗವಾಯಿ ಅವರನ್ನು ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿ ನೇಮಿಸಲಾಯಿತು. 2005ರ ನವೆಂಬರ್ 12ರಂದು ಹೈಕೋರ್ಟ್‌ನ ಕಾಯಂ ನ್ಯಾಯಮೂರ್ತಿಯಾದರು.

ಹೈಕೋರ್ಟ್ ನ್ಯಾಯಮೂರ್ತಿಯಾಗಿ ಗವಾಯಿ ಅವರು ನಾಗ್ಪುರ, ಔರಂಗಾಬಾದ್ ಮತ್ತು ಪಣಜಿಯ ನ್ಯಾಯಪೀಠಗಳ ನೇತೃತ್ವ ವಹಿಸಿದ್ದರು. 2019ರ ಮೇ 24ರಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು. 2025ರ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ. ಅವರ ಅಧಿಕಾರಾವಧಿ ಕೇವಲ ಆರು ತಿಂಗಳು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...