ಜೂನ್ 4ರಂದು ನಡೆದ ನಡೆದ ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಜಾನ್ ಮೈಕೆಲ್ ಕುನ್ಹಾ ಅವರ ಆಯೋಗವು ವರದಿಯನ್ನು ಸಲ್ಲಿಸಿದೆ. ಎರಡು ಸಂಪುಟಗಳಲ್ಲಿ ವರದಿ ನೀಡಿದೆ ಎಂದು ತಿಳಿದುಬಂದಿದೆ.
ಆರ್‌ಸಿಬಿ ವಿಜಯೋತ್ಸವ ಅಭಿನಂದನಾ ಸಮಾರಂಭ ನಡೆಯುವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ ಉಂಟಾಗಿದ್ದು 11 ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು ಕಾಲ್ತುಳಿತ ದುರಂತ | ಹೈಕೋರ್ಟ್‌ಗೆ ವರದಿ ಸಲ್ಲಿಸಲು ಒಂದು ವಾರ ಕಾಲಾವಕಾಶ ಕೋರಿದ ಸರ್ಕಾರ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ಜೂನ್ 05ರಂದು ಸರ್ಕಾರ ರಚಿಸಿದ್ದು ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿತ್ತು.
ಇದೀಗ ಆಯೋಗ ವರದಿ ಸಲ್ಲಿಸಿದ್ದು, ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಕಾಲ್ತುಳಿತಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಕುನ್ಹಾ ಅವರ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗ ನೀಡಿದೆ. ಎರಡು ಸಂಪುಟಗಳಲ್ಲಿ ವರದಿ ನೀಡಲಾಗಿದ್ದು, ಸಂಪೂರ್ಣವಾಗಿ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.
