ನಗದು ಸಿಕ್ಕ ಪ್ರಕರಣ: ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ವಿಚಾರಣೆಗೆ ಮೂವರ ಸದಸ್ಯರ ಸಮಿತಿ

Date:

ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ ವರ್ಮ ಅವರ ವಿರುದ್ಧ ನಗದು ಪತ್ತೆ ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೂವರು ಸದಸ್ಯರ ಸಮಿತಿಯೊಂದನ್ನು ರಚಿಸಿದ್ದಾರೆ.

- Advertisement -

ಅಗ್ನಿ ಅವಘಡದ ನಂತರ ನ್ಯಾಯಮೂರ್ತಿ ವರ್ಮ ಅವರ ಅಧಿಕೃತ ನಿವಾಸದಲ್ಲಿ ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ ಎಂದು ವರದಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ಕೆ ಉಪಾಧ್ಯಾಯ ಅವರಿಂದ ವರದಿ ಪಡೆದ ನಂತರ ಸಿಜೆಐ ಖನ್ನಾ ಅವರು ಆಂತರಿಕ ವಿಚಾರಣೆಗೆ ಸಮಿತಿ ರಚಿಸಿ ಆದೇಶ ಹೊರಡಿಸಿದರು. ನ್ಯಾಯಮೂರ್ತಿ ವರ್ಮ ಅವರಿಗೆ ನ್ಯಾಯಾಂಗಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಈಗ ವಹಿಸಬಾರದು ಎಂದು ಸಿಜೆಐ ಅವರು ನ್ಯಾಯಮೂರ್ತಿ ಉಪಾಧ್ಯಾಯ ಅವರಿಗೆ ಸೂಚಿಸಿದ್ದಾರೆ.

ವಿಚಾರಣಾ ಸಮಿತಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿ ಎಸ್ ಸಂಧಾವಾಲಿಯಾ, ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಅನು ಶಿವರಾಮನ್ ಅವರು ಇದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೆ ಶಾಸನಸಭೆಯಿಂದ ಅಪಮಾನ; ನೈತಿಕ ಹೊಣೆ ಯಾರದ್ದು?

‘ನ್ಯಾಯಮೂರ್ತಿ ಉಪಾಧ್ಯಾಯ ಅವರು ಸಲ್ಲಿಸಿದ ವರದಿ, ನ್ಯಾಯಮೂರ್ತಿ ವರ್ಮ ಅವರ ಪ್ರತಿಕ್ರಿಯೆ ಮತ್ತು ಇತರ ದಾಖಲೆಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತಿದೆ’ ಎಂದು ಸುಪ್ರೀಂ ಕೋರ್ಟ್‌ನ ಪ್ರಕಟಣೆ ತಿಳಿಸಿದೆ.

ನ್ಯಾಯಮೂರ್ತಿ ವರ್ಮ ಅವರ ಅಧಿಕೃತ ನಿವಾಸದಲ್ಲಿ ಮಾರ್ಚ್‌ 14ರ ರಾತ್ರಿ ಬೆಂಕಿ ಹೊತ್ತಿಕೊಂಡಾಗ, ಅದನ್ನು ಆರಿಸಲು ಅಗ್ನಿಶಾಮಕ ಸಿಬ್ಬಂದಿ ಅಲ್ಲಿಗೆ ಧಾವಿಸಿದರು. ಆಗ ನಿವಾಸದಲ್ಲಿ ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ ಎನ್ನಲಾಗಿದೆ.

ಆದರೆ, ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ ಎಂಬ ಹೇಳಿಕೆಗಳನ್ನು ದೆಹಲಿ ನ್ಯಾಯಮೂರ್ತಿ ಯಶವಂತ ವರ್ಮ ಅವರು ಅಲ್ಲಗಳೆದಿದ್ದು, ಇದು ಸಂಪೂರ್ಣ ಅಸಂಬದ್ಧ ಹಾಗೂ ನಂಬಲಾಗದು. ಹಣ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಸೇರಿಲ್ಲ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...