ನ್ಯಾಯಮೂರ್ತಿ ಯಶವಂತ್ ವರ್ಮಾ ಅರ್ಜಿ ವಜಾ: ಸಂಸದೀಯ ಸಮಿತಿ ತನಿಖೆಗೆ ಸುಪ್ರೀಂ ಅಸ್ತು

Date:

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು, ತಮ್ಮ ವಿರುದ್ಧದ ಲೋಕಸಭಾ ಸ್ಪೀಕರ್ ನೇಮಕದ ಸಂಸದೀಯ ಸಮಿತಿಯ ತನಿಖೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ನ್ಯಾಯಮೂರ್ತಿಗಳ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡಿದೆ.

- Advertisement -

​ನ್ಯಾಯಮೂರ್ತಿಗಳ ಪದಚ್ಯುತಿಗೆ ಕೋರಿದ್ದ ನಿರ್ಣಯವನ್ನು ರಾಜ್ಯಸಭಾ ಉಪಸಭಾಪತಿಯವರು ತಿರಸ್ಕರಿಸಿದ್ದರೂ, ಲೋಕಸಭಾ ಸ್ಪೀಕರ್ ತನಿಖಾ ಸಮಿತಿಯನ್ನು ರಚಿಸಿರುವುದು ಸಿಂಧುವಲ್ಲ ಎಂದು ನ್ಯಾ. ವರ್ಮಾ ಪ್ರಶ್ನಿಸಿದ್ದರು. ಆದರೆ, ಈ ವಾದವನ್ನು ಸುಪ್ರೀಂ ಕೋರ್ಟ್ ಮನ್ನಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

​ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಎಸ್.ಸಿ. ಶರ್ಮಾ ಅವರಿದ್ದ ಪೀಠವು, ಈ ಅರ್ಜಿಯ ಮೇಲಿನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿರುವ ಪೀಠವು, ಸಂಸದೀಯ ಸಮಿತಿಯು ತನ್ನ ತನಿಖೆಯನ್ನು ಮುಂದುವರಿಸಬಹುದು ಎಂದು ತಿಳಿಸಿದೆ.

ಇದನ್ನು ಒದಿದ್ದೀರಾ? ​ಈ ದಿನ ಸಂಪಾದಕೀಯ | ಬರಪೀಡಿತ ಜಿಲ್ಲೆಯ ಜನರ ಜಲಾಗ್ರಹದ ಕೂಗು ಕೇಳಿಸುವುದೇ ಸರ್ಕಾರಕ್ಕೆ?

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಅಗ್ನಿ ಅನಾಹುತ ಸಂಭವಿಸಿದ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧದ ವಾಗ್ದಂಡನೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿತ್ತು. ಈ ಆರೋಪಗಳ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು 2025ರ ಆಗಸ್ಟ್‌ನಲ್ಲಿ ತ್ರಿಸದಸ್ಯ ಸಮಿತಿಯನ್ನು ನೇಮಕ ಮಾಡಿದ್ದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಣಿಂದರ್ ಮೋಹನ್ ಮತ್ತು ಹಿರಿಯ ವಕೀಲ ಬಿ.ವಿ. ಆಚಾರ್ಯ ಅವರು ಈ ತನಿಖಾ ಸಮಿತಿಯ ಸದಸ್ಯರಾಗಿದ್ದಾರೆ.

​ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿದ್ದ ನ್ಯಾ. ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಬೆಂಕಿ ನಂದಿಸುವ ಸಂದರ್ಭದಲ್ಲಿ ಮನೆಯೊಳಗೆ ಸುಮಾರು 1.5 ಅಡಿ ಎತ್ತರದಷ್ಟು ನಗದು ಕಂತೆಗಳು ಪತ್ತೆಯಾಗಿದ್ದವು ಎಂದು ವರದಿಯಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಅಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ನ್ಯಾ. ವರ್ಮಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ್ದರು.
​

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾನ್ಯ ಶಿಸ್ತುಕ್ರಮವನ್ನು ‘ಆತ್ಮಹತ್ಯೆಗೆ ಪ್ರಚೋದನೆ’ ಎನ್ನಲಾಗದು: ಮದ್ರಾಸ್ ಹೈಕೋರ್ಟ್

ರಜೆ ಅರ್ಜಿಯನ್ನು ತಿರಸ್ಕರಿಸುವುದು, ಕರ್ತವ್ಯಕ್ಕೆ ಗೈರುಹಾಜರಿ ಎಂದು ದಾಖಲಿಸುವುದು ಹಾಗೂ ಶಿಸ್ತುಕ್ರಮ...

ಸ್ಥಳೀಯ ಸಂಸ್ಥೆಗಳ ಚುನಾವಣೆ ನಾಮಪತ್ರ ಸಲ್ಲಿಕೆ ಗಡುವು ಪರಿಶೀಲಿಸಿ; ಆಂಧ್ರ ಪ್ರದೇಶ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ!

ಆಂಧ್ರಪ್ರದೇಶದಲ್ಲಿ ಮುಂಬರಲಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ...

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನ ಸುಪ್ರೀಂ ತಡೆ

ಕೊಚ್ಚಿನ್ ಮಿನರಲ್ಸ್ ಅಂಡ್ ರುಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಮತ್ತು ಎಕ್ಸಾಲಾಜಿಕ್ ಕಂಪನಿ...