ಡಿಎಂಕೆ ನೇತೃತ್ವದ ಮೈತ್ರಿಗೆ ಸೇರ್ಪಡೆಗೊಂಡ ಕಮಲ್ ಹಾಸನ್ ಪಕ್ಷ

Date:

Advertisements

ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಜಾತ್ಯತಿತ ಪ್ರಗತಿಪರ ಒಕ್ಕೂಟದ ಮೈತ್ರಿಗೆ ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮೇಯಮ್ ಪಕ್ಷ ಸೇರ್ಪಡೆಗೊಂಡಿದೆ.

ಮೈತ್ರಿ ಹಿನ್ನೆಲೆಯಲ್ಲಿ ಎಂಎನ್ಎಂ ಪಕ್ಷ 2025ರ ಚುನಾವಣೆಯಲ್ಲಿ ಒಂದು ರಾಜ್ಯಸಭಾ ಸ್ಥಾನ ಪಡೆಯಲಿದೆ.

“ದೇಶದ ಸಲುವಾಗಿ ಯಾವುದೇ ಹುದ್ದೆಯ ಪರಿಗಣನೆ ಇಲ್ಲದೆ ಡಿಎಂಕೆ ನೇತೃತ್ವದ ಪಕ್ಷಕ್ಕೆ ಸೇರ್ಪಡೆಗೊಳ್ಳಲಾಗಿದೆ” ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

Advertisements

ಕಾಂಗ್ರೆಸ್ ಮುಖಂಡರು ಶೀಘ್ರದಲ್ಲೇ ಡಿಎಂಕೆ ನಾಯಕರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆಯಲ್ಲಿನ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ʼಮಹಿಳಾ ದಿನʼ ಅರ್ಥಪೂರ್ಣವಾಗೋದು ಆಕೆಗೆ ಘನತೆಯಿಂದ ಬದುಕಲು ಬಿಟ್ಟಾಗ ಮಾತ್ರ

ಎಂಎನ್‌ಎಂ ಪಕ್ಷವು ಲೋಕಸಭೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ಪಕ್ಷವು ಪ್ರಚಾರ ಹಾಗೂ ಬೆಂಬಲ ಕೈಗೊಳ್ಳುತ್ತದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣಾಚಲಂ ತಿಳಿಸಿದ್ದಾರೆ.

‘ಇಂಡಿಯಾ’ ಒಕ್ಕೂಟದ ಭಾಗವಾಗಿರುವ ಡಿಎಂಕೆ ಪಕ್ಷ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನೊಂದಿಗೆ ಮಾತುಕತೆ ನಡೆಸುತ್ತಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆಯು ಸಿಪಿಐ, ಸಿಪಿಎಂ ಹಾಗೂ ವಿಸಿಕೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ತಮಿಳುನಾಡಿನ 39 ಸ್ಥಾನಗಳ ಪೈಕಿ ಅಮೋಘ 38 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಅಲ್ಲಿನ ಪ್ರತಿಪಕ್ಷ ಎಐಎಡಿಎಂಕೆ ಒಂದು ಸ್ಥಾನಕ್ಕೆ ಮಾತ್ರ ತೃಪ್ತಿಪಟ್ಟುಕೊಂಡಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಣ್ಣಾಮಲೈ ಕೈಯಿಂದ ಪ್ರಶಸ್ತಿ ಪಡೆಯಲು ವಿದ್ಯಾರ್ಥಿ ನಕಾರ

ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ...

ಆಸ್ಪತ್ರೆ ನಿರ್ಮಾಣ ಹಗರಣ: ಎಎಪಿಯ ಸೌರಭ್ ಭಾರದ್ವಾಜ್ ನಿವಾಸದ ಮೇಲೆ ಇಡಿ ದಾಳಿ

ದೆಹಲಿ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ಆಸ್ಪತ್ರೆಗಳ ನಿರ್ಮಾಣದಲ್ಲಿ ಹಗರಣ ನಡೆದಿದೆ ಎಂಬ...

ನಟ ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

ಸಹ ನಟಿಯ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಮಿಡಿ...

VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ....

Download Eedina App Android / iOS

X