ಜೆಎನ್‌ಯುವಿನಲ್ಲಿ ಎಬಿವಿಪಿ ಕ್ಲೀನ್‌ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್!

Date:

ದೆಹಲಿಯ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಭರ್ಜರಿ ಗೆಲುವು ಸಾಧಿಸಿದೆ. ಆದರೆ ಸುವರ್ಣ ನ್ಯೂಸ್ ಮಾತ್ರ ಜೆಎನ್‌ಯುವಿನಲ್ಲಿ ಎಬಿವಿಪಿ ಕ್ಲೀನ್‌ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದೆ. ಇದನ್ನೇ ಹಿಂಬಾಳಿಸಿದ ಕರಾವಳಿಯ ಪತ್ರಿಕೆ ಜಯಕಿರಣ ಕೂಡಾ ಜೆಎನ್‌ಯು ಚುನಾವಣೆಯಲ್ಲಿ ಎಬಿವಿಪಿ ಕ್ಲೀನ್ ಸ್ವೀಪ್ ಎಂದು ಪ್ರಕಟಿಸಿದೆ.

- Advertisement -

ಮಾರ್ಚ್ 24ರಂದು ಸಂಜೆ 6:54 ಗಂಟೆಗೆ ಸುವರ್ಣ ನ್ಯೂಸ್ “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಎಬಿವಿಪಿ ಕ್ಲೀನ್ ಸ್ವೀಪ್, ಅಧ್ಯಕ್ಷ ಸೇರಿ ನಾಲ್ಕೂ ಸ್ಥಾನದಲ್ಲಿ ಗೆಲುವು!” ಎಂದು ನಕಲಿ ಸುದ್ದಿ ಪ್ರಕಟಿಸಿತ್ತು. ಆದರೆ ಬಳಿಕ ತಡರಾತ್ರಿ 12:48ರ ಸಮಯದಲ್ಲಿ ಈ ಸುದ್ದಿಯನ್ನು ಸಂಪೂರ್ಣವಾಗಿ ಬದಲಾಯಿಸಿದ್ದು “ಜೆಎನ್‌ಯುನಲ್ಲಿ ಚುನಾವಣೆಯಲ್ಲಿ ಲೆಫ್ಟ್ ವಿದ್ಯಾರ್ಥಿ ಘಟಕ ಕ್ಲೀನ್ ಸ್ವೀಪ್, ಎಬಿವಿಪಿಗೆ ಹಿನ್ನಡೆ!” ಎಂದು ಶೀರ್ಷಿಕೆ ಬದಲಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಜೆಎನ್‌ಯು

ಆರಂಭದಲ್ಲಿ ನಕಲಿ ಸುದ್ದಿ ಮಾಡಿದ್ದ ಸುವರ್ಣ ನ್ಯೂಸ್, “ಜೆಎನ್‌ಯು ವಿದ್ಯಾರ್ಥಿ ಘಟಕದ ಫಲಿತಾಂಶ ಹೊರಬಿದ್ದಿದೆ. ಎಡಪಂಥ ವಿಚಾರಧಾರೆಗಳಿಂದಲೇ ಸುದ್ದಿಯಾಗುತ್ತಿದ್ದ ಜವಾಹರ್‌ಲಾಲ್ ನೆಹರೂ ಯೂನಿವರ್ಸಿಟಿಯಲ್ಲಿ ಇದೀಗ ಎಬಿವಿಪಿ ಹೊಸ ಅಧ್ಯಾಯ ಬರೆದಿದೆ. ಜೆಎನ್‌ಯು ವಿದ್ಯಾರ್ಥಿ ಘಟಕದ ಅಧ್ಯಕ್ಷ ಸ್ಥಾನ ಎಬಿವಿಪಿ ಪಾಲಾಗಿದೆ. ಇದರ ಜೊತೆಗೆ ನಾಲ್ಕೂ ಸ್ಥಾನ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಗೆಲುವು ದಾಖಲಿಸಿದೆ” ಎಂದು ಬರೆದುಕೊಂಡಿತ್ತು. ಈ ಸುದ್ದಿಯನ್ನು ಬಿಜೆಪಿ, ಆರ್‌ಎಸ್‌ಎಸ್ ಬೆಂಬಲಿಗರು ಹಂಚಿಕೊಂಡು, ಹರ್ಷ ವ್ಯಕ್ತಪಡಿಸಿದ್ದರು.

ಚಚ 1
ಬದಲಾವಣೆ ಮಾಡಿರುವ ಸುದ್ದಿಯ ಶೀರ್ಷಿಕೆ

 

ಸುವರ್ಣ ನ್ಯೂಸ್ ಪ್ರಕಟಿಸಿದ್ದ ಸುದ್ದಿಯನ್ನೇ ಅನುಸರಿಸಿದ ಕರಾವಳಿಯ ಸಂಜೆ ದಿನಪತ್ರಿಕೆ ‘ಜಯಕಿರಣ’ ಕೂಡ ಅದನ್ನೇ ಸೋಮವಾರ ಬೆಳಗ್ಗೆ ಮುಖಪುಟದಲ್ಲಿ ಪ್ರಕಟಿಸಿದೆ.

ಜಕ
ಜಯಕಿರಣ ಪತ್ರಿಕೆಯ ಮಾ.25ರ ಮುಖಪುಟ

4 ವರ್ಷಗಳ ಬಳಿಕ ಜವಾಹರ್‌ಲಾಲ್ ನೆಹರೂ ವಿದ್ಯಾರ್ಥಿ ಘಟಕ ಚುನಾವಣೆ ನಡೆದಿದ್ದು ಶೇಕಡ 73ರಷ್ಟು ಮತದಾನವಾಗಿದೆ. 12 ವರ್ಷಗಳಲ್ಲೇ ಗರಿಷ್ಠ ಮತದಾನ ದಾಖಲಾಗಿದ್ದು 7,700 ವಿದ್ಯಾರ್ಥಿಗಳು ತಮ್ಮ ಹಕ್ಕು ಚಲಾಯಿಸಿದ್ದರು. ಎಡ-ವಿದ್ಯಾರ್ಥಿ ಸಂಘಟನೆಗಳು ಒಕ್ಕೂಟ (AISA, SFI, DSF ಮತ್ತು AISF) ಮತ್ತು BAPSA ವಿದ್ಯಾರ್ಥಿ ಸಂಘಟನೆ ವಿಜಯಶಾಲಿಯಾಗಿವೆ.

ಇದನ್ನು ಓದಿದ್ದೀರಾ?  ಜೆಎನ್‌ಯು| ಮೂರು ದಶಕಗಳ ಬಳಿಕ ದಲಿತ ವಿದ್ಯಾರ್ಥಿಗೆ ಅಧ್ಯಕ್ಷಗಿರಿ

ಸುಮಾರು 30 ವರ್ಷಗಳ ಬಳಿಕ ಜೆಎನ್‌ಯುನಲ್ಲಿ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿದ್ದಾರೆ. 1996-97ರಲ್ಲಿ ದಲಿತ ಮುಖಂಡ ಬಾಟಿ ಲಾಲ್ ಬೈರ್ವಾ ಜೆಎನ್‌ಯುನಲ್ಲಿ ಅಧ್ಯಕ್ಷರಾಗಿದ್ದು, ಅದಾದ ಬಳಿಕ ಈ ವರ್ಷದ (2024) ಚುನಾವಣೆಯಲ್ಲಿ ಧನಂಜಯ್ ಎಡ ವಿದ್ಯಾರ್ಥಿ ಸಂಘಟನೆಗಳನ್ನು ಪ್ರತಿನಿಧಿಸಿ ಚುನಾವಣೆ ಗೆದ್ದು ಅಧ್ಯಕ್ಷಗಿರಿಯನ್ನು ಪಡೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...