ಕಾವಡ್ ಯಾತ್ರೆ ವಿವಾದ | ಸುಪ್ರೀಂ ಕೋರ್ಟ್ ಕದ ತಟ್ಟಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

Date:

Advertisements

ಕಾವಡ್ ಯಾತ್ರೆಯ ಮಾರ್ಗದಲ್ಲಿರುವ ತಿನಿಸುಗಳ ಸ್ಟಾಲ್‌ಗಳ ಮಾಲೀಕರು ಸ್ಟಾಲ್‌ನಲ್ಲಿ ತಮ್ಮ ಹೆಸರನ್ನು ಪ್ರದರ್ಶಿಸಬೇಕು ಎಂಬ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳ ಆದೇಶದ ವಿರುದ್ಧವಾಗಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಇಂತಹ ಆದೇಶಗಳು ಸಮುದಾಯಗಳ ನಡುವಿನ ವೈಷಮ್ಯವನ್ನು ಉಲ್ಬಣಗೊಳಿಸುತ್ತವೆ ಎಂದು ಅಭಿಪ್ರಾಯಿಸಿರುವ ಮಹುವಾ ಮೊಯಿತ್ರಾ ಉಭಯ ರಾಜ್ಯ ಸರ್ಕಾರಗಳು ಹೊರಡಿಸಿದ ಆದೇಶಗಳಿಗೆ ತಡೆಯಾಜ್ಞೆ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿಯನ್ನು ಇನ್ನೂ ವಿಚಾರಣೆಗೆ ತೆಗೆದುಕೊಂಡಿಲ್ಲ.

ಯಾತ್ರಾರ್ಥಿಗಳ ಆಹಾರಕ್ರಮದ ಆಯ್ಕೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಮಾಲೀಕರ ಹೆಸರುಗಳನ್ನು ಮತ್ತು ಅವರ ಸಿಬ್ಬಂದಿಯ ಹೆಸರನ್ನು ಬಹಿರಂಗಪಡಿಸುವಂತೆ ಒತ್ತಾಯಿಸಲಾಗುತ್ತಿದೆ ಎಂಬ ಸರ್ಕಾರಗಳ ವಾದವು ಬರೀ ನೆಪವಾಗಿದೆ. ಇದು ನೇರವಾಗಿ ಧಾರ್ಮಿಕ ಗುರುತನ್ನ ಬಹಿರಂಗಪಡಿಸುವ ಉದ್ದೇಶವಾಗಿದೆ ಎಂದು ಟಿಎಂಸಿ ನಾಯಕಿ ವಾದಿಸಿದ್ದಾರೆ.

Advertisements

ಮುಸ್ಲಿಂ ಅಂಗಡಿ ಮಾಲೀಕರು ಮತ್ತು ಕಾರ್ಮಿಕರ ಮೇಲೆ ಸಾಮಾಜಿಕವಾಗಿ ಜಾರಿಗೊಳಿಸಲಾದ ಆರ್ಥಿಕ ಬಹಿಷ್ಕಾರವನ್ನು ಸೃಷ್ಟಿಸಲು ಮತ್ತು ಅವರ ಜೀವನೋಪಾಯವನ್ನು ಕಳೆದುಕೊಳ್ಳುವಂತೆ ಮಾಡಲು ಈ ಆದೇಶವನ್ನು ನೀಡಲಾಗಿದೆ ಎಂದು ಅರ್ಜಿಯಲ್ಲಿ ಸಂಸದೆ ಆರೋಪಿಸಿದ್ದಾರೆ.

ಸೋಮವಾರ ಶ್ರಾವಣ ತಿಂಗಳ ಆರಂಭವಾಗಲಿದ್ದು ಇಂದೇ ಕಾವಡ್ ಯಾತ್ರೆಯು ಆರಂಭವಾಗಲಿದೆ. ಹಲವಾರು ರಾಜ್ಯಗಳಲ್ಲಿ ಈ ಯಾತ್ರೆಗೆ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ಸಮಯದಲ್ಲಿ ಲಕ್ಷಾಂತರ ಶಿವ ಭಕ್ತರು ಹರಿದ್ವಾರದಲ್ಲಿ ಗಂಗಾನದಿಯಿಂದ ಪವಿತ್ರ ನೀರನ್ನು ತಮ್ಮ ಮನೆಗಳಿಗೆ ಕೊಂಡೊಯ್ಯುತ್ತಾರೆ. ಜುಲೈ 22ರಿಂದ ಆಗಸ್ಟ್ 19ರವರೆಗೆ, ಶಿವನ ಆರಾಧನೆ ಮಾಡಲಾಗುತ್ತದೆ.

ಇದನ್ನು ಓದಿದ್ದೀರಾ?  ಕಾವಡ್ ಯಾತ್ರೆ ವೇಳೆ ಅಂಗಡಿ ಮಾಲೀಕರ ಹೆಸರುಳ್ಳ ಫಲಕ ಹಾಕಲು ಆದೇಶ; ‘ಸಂವಿಧಾನದ ಮೇಲಿನ ದಾಳಿ’ ಎಂದ ಪ್ರಿಯಾಂಕಾ

ಈ ಕಾವಡ್ ಯಾತ್ರೆ ನಡೆಯುವ ಮಾರ್ಗದಲ್ಲಿರುವ ಎಲ್ಲಾ ಅಂಗಡಿಗಳ ಮಾಲೀಕರ ಹೆಸರನ್ನು ಪ್ರದರ್ಶಿಸಲು ಮುಜಫರ್‌ನಗರ ಪೊಲೀಸರು ಆದೇಶ ನೀಡಿದ ಕೆಲವು ದಿನಗಳ ನಂತರ, ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ರಾಜ್ಯಾದ್ಯಂತ ಈ ವಿವಾದಾತ್ಮಕ ಆದೇಶವನ್ನು ವಿಸ್ತರಿಸಿದೆ. ಈ ಆದೇಶಕ್ಕೆ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕಾವಡ್ ಯಾತ್ರೆಯಲ್ಲಿ ಜನರಿಗೆ ಆಹಾರದ ಆಯ್ಕೆಯನ್ನು ಮಾಡಲು ಸುಲಭವಾಗಬೇಕಾದರೆ ಸಸ್ಯಾಹಾರಿ, ಮಾಂಸಹಾರಿ, ಹಲಾಲ್, ಜಟ್ಕಾ ಈ ರೀತಿ ಆಹಾರ ಪದ್ಧತಿಯ ಉಲ್ಲೇಖ ಮಾಡಬಹುದು. ಅದರ ಬದಲಾಗಿ ಮಾಲೀಕರ, ಕೆಲಸಗಾರರ ಹೆಸರು ಹಾಕುವುದು ಮುಸ್ಲಿಮರ ವಿರುದ್ಧ ಸಾಮಾಜಿಕ ಆರ್ಥಿಕ ಬಹಿಷ್ಕಾರ ನಡೆಸುವ ಹುನ್ನಾರ ಎಂದು ವಿಪಕ್ಷಗಳು ಹೇಳಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X