ಉತ್ತರ ಪ್ರದೇಶದ ಕನ್ವರ್ ಯಾತ್ರೆಯಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ: ಸುಪ್ರೀಂನಲ್ಲಿ ಅರ್ಜಿ

Date:

ಕನ್ವರ್‌ ಯಾತ್ರೆ ಯುದ್ದಕ್ಕೂ ಇರುವ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

- Advertisement -

ನ್ಯಾಯಮೂರ್ತಿ ಹೃಷಿಕೇಶ್‌ ರಾಯ್‌ ನೇತೃತ್ವದ ಪೀಠ ಜುಲೈ 22 ರಂದು(ಸೋಮವಾರ) ಈ ಅರ್ಜಿಯನ್ನು ವಿಚಾರಣೆಗೊಳಪಡಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮುಜಾಫರ್‌ನಗರದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕೆಂದು ಆದೇಶಿಸಲಾಗಿತ್ತು. ನಂತರದಲ್ಲಿ ಉತ್ತರ ಪ್ರದೇಶ ಸರ್ಕಾರ ಜು.19ರಂದು ಈ ವಿವಾದಾತ್ಮಕ ಆದೇಶವನ್ನು ರಾಜ್ಯದಾದ್ಯಂತ ವಿಸ್ತರಿಸಿತು.

ಉತ್ತರಾಖಂಡ್‌ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಕೂಡ ಇದೇ ರೀತಿಯ ಸೂಚನೆಗಳನ್ನು ರಾಜ್ಯದಲ್ಲಿ ಹೊರಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಕನ್ವರ್ ಯಾತ್ರೆ ಬಳಿಕ ರೈತರ ಬೃಹತ್ ಪ್ರತಿಭಟನೆ; ಕೇಂದ್ರಕ್ಕೆ ರಾಕೇಶ್ ಟಿಕಾಯತ್ ಎಚ್ಚರಿಕೆ

ಉತ್ತರ ಭಾರತದ ಪ್ರಖ್ಯಾತ ಕನ್ವರ್ ಯಾತ್ರೆ ಆರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ ಜಾರಿಗೆ ತಂದಿರುವ ”ನಾಮಫಲಕ ಪ್ರದರ್ಶನ” ನಿಯಮವನ್ನು ಇದೀಗ ಮಧ್ಯ ಪ್ರದೇಶದಲ್ಲೂ ಜಾರಿಗೆ ತರಲಾಗಿದೆ.

ಮಧ್ಯ ಪ್ರದೇಶದ ಪುರಾತನ ನಗರ ಬಿಜೆಪಿ ಆಡಳಿತವಿರುವ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಗಳನ್ನು ಕನ್ವರ್ ಯಾತ್ರೆಯ ಮಾರ್ಗದುದ್ದಕ್ಕೂ ತಿನಿಸುಗಳ ಮಾರಾಟ ಮಾಡುವ ತಮ್ಮ ಅಂಗಡಿಗಳ ಹೊರಗೆ ಪ್ರದರ್ಶಿಸುವಂತೆ ಸೂಚಿಸಿದೆ.

ಅಲ್ಲದೆ ಈ ನಿಯಮ ಉಲ್ಲಂಘಿಸುವವರರ ವಿರುದ್ಧ ಮೊದಲ ಬಾರಿಗೆ 2,000 ರೂಪಾಯಿ ದಂಡ ಮತ್ತು ಎರಡನೇ ಬಾರಿಗೆ ಈ ಆದೇಶವನ್ನು ಉಲ್ಲಂಘಿಸಿದರೆ 5,000 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ ಎಂದು ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಶನಿವಾರ ಹೇಳಿದ್ದರು.

ಬಿಜೆಪಿ ರಾಜ್ಯಗಳ ಆದೇಶದ ವಿರುದ್ಧ ವಿಪಕ್ಷ ನಾಯಕರು ದೇಶಾದ್ಯಂತ ಆಕ್ರೋಶ ವ್ಯಕ್ತಪಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...