ಪಕ್ಷಾಂತರ ನಿಷೇಧ ಕಾಯ್ದೆಯ ‘ವಿಲೀನ’ ನಿಯಮ ಪ್ರಶ್ನಿಸಿ ಕಪಿಲ್ ಸಿಬಲ್ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್

Date:

ಪಕ್ಷಾಂತರ ನಿಷೇಧ ಕಾಯ್ದೆಯಡಿ (ಹತ್ತನೇ ಶೆಡ್ಯೂಲ್) ಅನರ್ಹತೆಯಿಂದ ಪಾರಾಗಲು ಶಾಸಕರು ರಾಜಕೀಯ ಪಕ್ಷಗಳ ‘ವಿಲೀನ’ದ ಮೊರೆ ಹೋಗುತ್ತಿರುವ ನಿಯಮದ ಸಾಂವಿಧಾನಿಕ ವ್ಯಾಖ್ಯಾನವನ್ನು ಪ್ರಶ್ನಿಸಿ ಹಿರಿಯ ವಕೀಲ ಕಪಿಲ್ ಸಿಬಲ್ ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಜುಲೈ 27) ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

- Advertisement -

ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠವು ಈ ಕುರಿತು ಕಪಿಲ್ ಸಿಬಲ್ ಅವರ ವಾದವನ್ನು ಆಲಿಸಿದ ಬಳಿಕ ಕೇಂದ್ರಕ್ಕೆ ನೋಟಿಸ್ ನೀಡಿದೆ. ವಿಚಾರಣೆಯ ಆರಂಭದಲ್ಲಿ ನ್ಯಾಯಮೂರ್ತಿ ನರಸಿಂಹ ಅವರು, ಸಂವಿಧಾನದ 32ನೇ ವಿಧಿಯಡಿ ಈ ಅರ್ಜಿ ಸಲ್ಲಿಸಿರುವುದರ ಬಗ್ಗೆ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಪಕ್ಷಗಳ ವಿಲೀನ ಪ್ರಕ್ರಿಯೆಯಿಂದಾಗಿ ಚುನಾವಣೆಯಲ್ಲಿ ಬಹುಮತ ಪಡೆದ ಪಕ್ಷವು ಅಲ್ಪಮತಕ್ಕೆ ಕುಸಿಯುವಂತಹ ಗಂಭೀರ ಪರಿಣಾಮಗಳು ಪ್ರಜಾಪ್ರಭುತ್ವದ ಮೇಲಾಗುತ್ತಿವೆ ಎಂದು ಸಿಬಲ್ ವಾದ ಮಂಡಿಸಿದರು. ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಗೋವಾ ಪ್ರಕರಣವನ್ನು ಉಲ್ಲೇಖಿಸಿದ ಅವರು, “ಈ ಪ್ರಕ್ರಿಯೆಯ ಮೂಲಕ ಚುನಾವಣಾ ತೀರ್ಪನ್ನೇ ಬದಲಾಯಿಸಬಹುದಾಗಿದೆ. ಬಹುಮತವು ಅಲ್ಪಮತವಾಗಬಹುದು ಮತ್ತು ಅಲ್ಪಮತವು ಬಹುಮತವಾಗಬಹುದು” ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು.

ಕೇಂದ್ರಕ್ಕೆ ನೋಟಿಸ್ ಜಾರಿಗೊಳಿಸುವ ನಡುವೆಯೂ, ಇಂತಹ ವಿಚಾರಗಳನ್ನು ಶಾಸಕಾಂಗವೇ ತೀರ್ಮಾನಿಸಬೇಕು ಎಂದು ನ್ಯಾಯಮೂರ್ತಿ ನರಸಿಂಹ ಅವರು ಅಭಿಪ್ರಾಯಪಟ್ಟರು. “ಈ ಸಮಸ್ಯೆಗಳನ್ನು ಸದನದಲ್ಲಿ ಅಥವಾ ರಾಜಕೀಯ ಪಕ್ಷಗಳ ವೇದಿಕೆಯಲ್ಲಿ ಚರ್ಚಿಸಬೇಕು. 10ನೇ ಶೆಡ್ಯೂಲ್ ಶಾಸಕರ ನಡುವಿನ ಕಾರ್ಯವಿಧಾನವನ್ನು ನಿಯಂತ್ರಿಸುವ ಉದ್ದೇಶ ಹೊಂದಿದೆ. ಆದರೆ ಇದರ ಕಾರ್ಯನಿರ್ವಹಣೆಯಲ್ಲಿ ಹಲವು ಸಮಸ್ಯೆಗಳಿರುವುದನ್ನು ನಾವು ನೋಡುತ್ತಿದ್ದೇವೆ” ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಬಲ್, “ಅಧಿಕಾರದಲ್ಲಿರುವವರು ಈ ವಿಷಯವನ್ನು ಎಂದಿಗೂ ತೀರ್ಮಾನಿಸಲು ಬಿಡುವುದಿಲ್ಲ” ಎಂದು ಪ್ರತ್ಯುತ್ತರ ನೀಡಿದರು.
ಪಕ್ಷಾಂತರ ನಿಷೇಧ ಕಾಯ್ದೆಯ ಕಠಿಣ ನಿಯಮಗಳಿಂದ ಪಾರಾಗಲು ಒಡೆದ ಗುಂಪುಗಳು (Splinter groups) ಇತರ ರಾಜಕೀಯ ಪಕ್ಷಗಳೊಂದಿಗೆ ವಿಲೀನಗೊಳ್ಳಲು ಅವಕಾಶ ನೀಡುವ 10ನೇ ಶೆಡ್ಯೂಲ್‌ನ ವಿಲೀನ ನಿಬಂಧನೆಗಳ ಕುರಿತು ಸಿಬಲ್ ತಮ್ಮ ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿವಸೇನೆ (ಉದ್ಧವ್ ಠಾಕ್ರೆ), ಎಎಪಿ ಹಾಗೂ ಟಿಎಂಸಿ ಶಾಸಕರು ಇತ್ತೀಚೆಗೆ ಬಿಜೆಪಿ ಮತ್ತು ಇತರ ಪಕ್ಷಗಳೊಂದಿಗೆ ವಿಲೀನಗೊಂಡಿರುವ ಹಾಗೂ ರಾಜಕೀಯ ಪಕ್ಷದ ಅನುಮತಿಯಿಲ್ಲದೆ ಶಾಸಕಾಂಗ ವಿಭಾಗವು ವಿಲೀನಗೊಳ್ಳುವುದನ್ನು ಎತ್ತಿಹಿಡಿದಿದ್ದ ಬಾಂಬೆ ಹೈಕೋರ್ಟ್ (ಗೋವಾ ಪೀಠ) ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿರುವ ಅರ್ಜಿಯೂ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ವಿಚಾರವನ್ನು ಸಿಬಲ್ ಪೀಠದ ಗಮನಕ್ಕೆ ತಂದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಸ್ತಪ್ರತಿ ಸಂರಕ್ಷಣೆಗೆ ಪ್ರತ್ಯೇಕ ಇಲಾಖೆ ಸ್ಥಾಪಿಸಿ: ನಾ.ಗೀತಾಚಾರ್ಯ

ರಾಜ್ಯದ ಅಮೂಲ್ಯ ಜ್ಞಾನಸಂಪತ್ತಾಗಿರುವ ಹಸ್ತಪ್ರತಿಗಳ ಸಂರಕ್ಷಣೆ ಹಾಗೂ ನಿರ್ವಹಣೆಗೆ ಸಮಗ್ರ ನೀತಿ...

ಕುಡಚಿ ರೈಲು ಮಾರ್ಗ ಕಾಮಗಾರಿಗೆ ವೇಗ ನೀಡಿ; ರೈಲ್ವೆ ಹೋರಾಟಕ್ಕೆ ರೈತರೂ ಕೈಜೋಡಿಸಿ: ಕುತ್ಬುದ್ದೀನ್ ಖಾಜಿ

ದಶಕಗಳಿಂದ ಕುಂಟುತ್ತ ಸಾಗುತ್ತಿರುವ ಕುಡಚಿ ರೈಲು ಮಾರ್ಗದ ಕಾಮಗಾರಿಯನ್ನು ತ್ವರಿತಗೊಳಿಸಿ, ಯೋಜನೆಯನ್ನು...

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...