ರಾಜಸ್ಥಾನ ಉಪ ಚುನಾವಣೆ: ಬಿಜೆಪಿ ಮಂತ್ರಿಯನ್ನು ಸೋಲಿಸಿದ ಕಾಂಗ್ರೆಸ್ ಅಭ್ಯರ್ಥಿ

Date:

ರಾಜಸ್ಥಾನದ ಕರಾನ್‌ಪುರ್‌ ಕ್ಷೇತ್ರಕ್ಕೆ ನಡೆದ ವಿಧಾನಸಬಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಭಾರಿ ಅಂತರದ ಮತಗಳಿಂದ ಜಯ ಸಾಧಿಸಿದೆ.

- Advertisement -

ಶ್ರೀಗಂಗಾನಗರ್ ಜಿಲ್ಲೆಯ ಕರಾನ್‌ಪುರ್‌ ಕ್ಷೇತ್ರಕ್ಕೆ ಶುಕ್ರವಾರ ಜ.5 ರಂದು ಮತದಾನ ನಡೆದಿತ್ತು. ಇಂದು ನಡೆದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೂಪೇಂದರ್ ಸಿಂಗ್ ಬಿಜೆಪಿಯ ಸುರೇಂದರ್ ಪಾಲ್ ಸಿಂಗ್‌ ಅವರನ್ನು 12,570 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸುರೇಂದರ್ ಪಾಲ್ ಇತ್ತೀಚಿಗಷ್ಟೆ ರಚನೆಗೊಂಡ ರಾಜಸ್ಥಾನ ಬಿಜೆಪಿ ಸರ್ಕಾರದ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಚುನಾವಣೆ ಘೋಷಣೆಯಾದ ನಂತರ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್‌ನ ಅಭ್ಯರ್ಥಿ ಗುರುಮೀತ್ ಸಿಂಗ್ ಮೃತಪಟ್ಟ ಕಾರಣ ಕರಾನ್‌ಪುರ್ ಕ್ಷೇತ್ರದ ಮತದಾನವನ್ನು ಚುನಾವಣಾ ಆಯೋಗ ಮುಂದೂಡಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಈ ಕ್ಷೇತ್ರಕ್ಕೆ ಗುರುಮೀತ್ ಸಿಂಗ್ ಅವರೇ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಶ್ರೀಗಂಗಾನಗರ್ ಜಿಲ್ಲೆಯಲ್ಲಿ ಒಟ್ಟು ಐದು ಕ್ಷೇತ್ರಗಳಿದ್ದು, ಡಿಸೆಂಬರ್ 5 ರಂದು ನಡೆದ ಫಲಿತಾಂಶದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದವು. ಕರಾನ್‌ಪುರ್‌ ಕ್ಷೇತ್ರ ಕೈ ಅಭ್ಯರ್ಥಿ ಗೆಲುವು ಗಳಿಸಿರುವುದರಿಂದ ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದೆ.

ಕೈ ಅಭ್ಯರ್ಥಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಈ ಚುನಾವಣೆಯು ಹಲವು ಸಂದೇಶಗಳನ್ನು ನೀಡಿದೆ. ಬಿಜೆಪಿಯ ಅಹಂನಿಂದ ಅಲ್ಲಿನ ನಾಯಕರು ಹೇಗೆ ನೈತಿಕತೆಯನ್ನು ತೊರೆದಿದ್ದಾರೆ ಎಂಬುದನ್ನು ತೋರಿಸುತ್ತದೆ. ಇದು ಜನರು ಬಿಜೆಪಿಗೆ ನೀಡಿದ ಕಪಾಳ ಮೋಕ್ಷವಾಗಿದೆ ಎಂದು ತಿಳಿಸಿದ್ದಾರೆ.

ನವೆಂಬರ್‌ 25 ರಂದು 199 ಕ್ಷೇತ್ರಗಳಿಗೆ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 115 ಗಳಿಸಿ ಅಧಿಕಾರ ಹಿಡಿದರೆ, ಕೈ ಪಕ್ಷ 69 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಇಂದಿನ ಗೆಲುವಿನೊಂದಿಗೆ ಕಾಂಗ್ರೆಸಿನ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...