ರಾಜ್ಯದ ತಲಾ ಆದಾಯ ದಶಕದಲ್ಲಿ ದುಪ್ಪಟ್ಟು: ದೇಶದಲ್ಲೇ ಗರಿಷ್ಠ ಮಟ್ಟದಲ್ಲಿ ಕರ್ನಾಟಕ

Date:

2024-25ರ ಹಣಕಾಸು ವರ್ಷದಲ್ಲಿ ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ತಲಾ ಆದಾಯವನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದಲ್ಲಿ ತಲಾದಾಯ ಪ್ರಮಾಣವು 2 ಲಕ್ಷ ರೂಪಾಯಿ ದಾಟಿದೆ. ಒಂದು ದಶಕದಲ್ಲಿ ರಾಜ್ಯದ ತಲಾ ಆದಾಯ ದುಪ್ಪಟ್ಟಾಗಿದೆ ಎಂದು ಲೋಕಸಭೆಯಲ್ಲಿ ಹಣಕಾಸು ಸಚಿವಾಲಯ ಮಂಡಿಸಿದ ಅಂಕಿಅಂಶಗಳು ತಿಳಿಸಿವೆ.

- Advertisement -

2024–25ರಲ್ಲಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ತಲಾ ಆದಾಯದ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ. ತಮಿಳುನಾಡು ತಲಾ ಆದಾಯ 1,96,309 ರೂಪಾಯಿ ಆಗಿದ್ದು, ಎರಡನೇ ಸ್ಥಾನದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಮುಂದಿನ 5 ವರ್ಷಗಳಲ್ಲಿ ಭಾರತದ ತಲಾ ಆದಾಯವು 2,000 ಡಾಲರ್‌ಗಳಷ್ಟು ಹೆಚ್ಚುತ್ತದೆ: ನಿರ್ಮಲಾ ಸೀತಾರಾಮನ್

ರಾಜ್ಯದ ತಲಾ ನಿವ್ವಳ ಆಂತರಿಕ ಉತ್ಪಾದನೆ(ಎನ್‌ಎಸ್‌ಡಿಪಿ) 2,04,605 ರೂಪಾಯಿಗೆ ತಲುಪಿದ್ದು, 2014–15ರಲ್ಲಿದ್ದ ಎನ್‌ಎಸ್‌ಡಿಪಿಗಿಂತ(1,05,697 ರೂಪಾಯಿ) ಶೇಕಡ 93.6ರಷ್ಟು ಬೆಳವಣಿಗೆ ದಾಖಲಾಗಿದೆ. ಇದೇ ಅವಧಿಯಲ್ಲಿ ದೇಶದ ನಿವ್ವಳ ರಾಷ್ಟ್ರೀಯ ಆದಾಯ (ಎನ್‌ಎನ್‌ಐ) 1,14,710 ರೂಪಾಯಿಯಿದೆ. ಅಂದರೆ ಒಂದು ದಶಕದ ಹಿಂದೆಯಿದ್ದ 72,805 ರೂಪಾಯಿಯಿಂದ ಶೇಕಡ 57.6ರಷ್ಟು ಬೆಳವಣಿಗೆಯಾಗಿದೆ.

ಕಳೆದ ದಶಕದಲ್ಲಿ ಕರ್ನಾಟಕದ ಆದಾಯವು ಬಹುತೇಕ ದುಪ್ಪಟ್ಟಾಗಿದೆ. ಹೆಚ್ಚಿನ ಪ್ರಮುಖ ರಾಜ್ಯಗಳಿಗಿಂತ ಉತ್ತಮ ಪ್ರದರ್ಶನ ನೀಡಿದೆ. 2013–14ರಲ್ಲಿ ರಾಜ್ಯದ ತಲಾ ಆದಾಯವು 1,01,858 ರೂ.ಗಳಾಗಿದ್ದವು, 2023–24ರ ವೇಳೆಗೆ ರಾಜ್ಯದ ತಲಾ ಆದಾಯ ಶೇ. 88.5ರಷ್ಟು(1,91,970 ರೂಪಾಯಿ) ಏರಿಕೆ ಕಂಡಿದೆ. 2024–25ರಲ್ಲಿ 2,04,605 ರೂಪಾಯಿಗೆ ತಲುಪಿದ್ದು ವರ್ಷದಿಂದ ವರ್ಷಕ್ಕೆ ಶೇಕಡ 6.6ರಷ್ಟು ಬೆಳವಣಿಗೆ ದಾಖಲಾಗಿದೆ.

ಇನ್ನು ಒಂದು ದಶಕದ ಆರ್ಥಿಕ ಬೆಳವಣಿಗೆ ನೋಡಿದಾಗ ಕರ್ನಾಟಕ ಶೇಕಡ 93.6ರಷ್ಟು ತಲಾ ಆದಾಯ ಏರಿಕೆಯೊಂದಿಗೆ ಎರಡನೇ ಸ್ಥಾನದಲ್ಲಿದೆ. ಶೇಕಡ 96.7ರಷ್ಟು ಏರಿಕೆ ಕಂಡಿರುವ ಒಡಿಶಾ ಮೊದಲ ಸ್ಥಾನದಲ್ಲಿದೆ. ಇನ್ನು 2023–24ನೇ ವಿತ್ತೀಯ ವರ್ಷದಲ್ಲಿ ಮಿಜೋರಾಂ ಶೇ.125.4ರಷ್ಟು ಬೆಳವಣಿಗೆ ದಾಖಲಿಸಿದೆ. ನಂತರದ ಸ್ಥಾನದಲ್ಲಿ, ಕ್ರಮವಾಗಿ ಗುಜರಾತ್ (ಶೇ.90.7), ಗೋವಾ(ಶೇ.89.9), ಕರ್ನಾಟಕ (ಶೇ.88.5), ತೆಲಂಗಾಣ (ಶೇ.84.3) ಮತ್ತು ಒಡಿಶಾ(ಶೇ.83.4) ಇದೆ.

ಇದನ್ನು ಓದಿದ್ದೀರಾ? ಮಾತು ಉಳಿಸಿಕೊಳ್ಳದ ಮೋದಿ; ಒಂದು ಯುಎಸ್‌ ಡಾಲರ್‌ಗೆ ಭಾರತದ 84 ರೂಪಾಯಿ!

ಕರ್ನಾಟಕ ಮತ್ತು ಕೆಲವು ರಾಜ್ಯಗಳ ತಲಾ ಆದಾಯ ಉತ್ತಮ ಬೆಳವಣಿಗೆ ಕಂಡಿದ್ದರೂ ಕೆಲವು ರಾಜ್ಯಗಳು ಹಿಂದುಳಿದಿದೆ. ಪಂಜಾಬ್‌ನ ತಲಾ ಆದಾಯ ದಶಕದಲ್ಲಿ ಶೇ.41.3ರಷ್ಟು ಮಾತ್ರ ಬೆಳವಣಿಗೆ ಕಂಡಿದೆ. ಉತ್ತರಾಖಂಡ ಮತ್ತು ಪುದುಚೇರಿ ಕ್ರಮವಾಗಿ ಶೇ.33.5, ಶೇ.32.8ರಷ್ಟು ಬೆಳವಣಿಗೆ ದಾಖಲಿಸಿದೆ.

ಎಲ್ಲ ರಾಜ್ಯಗಳ ಅಂಕಿಅಂಶ ವರದಿಯಾಗಿಲ್ಲ

ಆದರೆ 2024–25ರ ಸಾಲಿನ ತಲಾ ಆದಾಯಕ್ಕೆ ಸಂಬಂಧಿಸಿದ ಎಲ್ಲ ರಾಜ್ಯಗಳ ವರದಿಯಾಗಿಲ್ಲ. ಅರುಣಾಚಲ ಪ್ರದೇಶ, ಗೋವಾ, ಗುಜರಾತ್, ಜಾರ್ಖಂಡ್, ಕೇರಳ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಉತ್ತರ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಚಂಡೀಗಢ, ದೆಹಲಿ ಮತ್ತು ಲಡಾಖ್ ಸೇರಿದಂತೆ ಹಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ತಲಾ ಆದಾಯದ ಅಂಕಿಅಂಶ ಲಭ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...