ರಾಜಸ್ಥಾನ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆಯ ಹಂತಕರ ಬಂಧನ

Date:

ರಾಜಸ್ಥಾನ ರಾಜ್ಯದ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಶೂಟರ್‌ಗಳು ಮತ್ತು ಒಬ್ಬ ಸಹಚರನನ್ನು ದೆಹಲಿ ಕ್ರೈಂ ಬ್ರಾಂಚ್ ಮತ್ತು ರಾಜಸ್ಥಾನ ಪೊಲೀಸರು ತಡರಾತ್ರಿ ಜಂಟಿ ಕಾರ್ಯಾಚರಣೆಯಲ್ಲಿ ಚಂಡೀಗಢದಲ್ಲಿ ಬಂಧಿಸಿದ್ದಾರೆ.

ಇಬ್ಬರು ಶೂಟರ್‌ಗಳಾದ ರೋಹಿತ್ ರಾಥೋಡ್ ಮತ್ತು ನಿತಿನ್ ಫೌಜಿ ಮತ್ತು ಉಧಮ್ ಎಂಬ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದಾಗ್ಯೂ, ಗೊಗಮೆಡಿ ಹತ್ಯೆಯಲ್ಲಿ ಉಧಮ್ ಪಾತ್ರವನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ದೆಹಲಿ ಪೊಲೀಸರು ರೋಹಿತ್ ಮತ್ತು ಉಧಮ್ ಅವರನ್ನು ಬಂಧಿಸಿ ದೆಹಲಿಗೆ ಕರೆತಂದಿದ್ದಾರೆ. ನಿತಿನ್ ಫೌಜಿ ರಾಜಸ್ಥಾನ ಪೊಲೀಸರ ವಶದಲ್ಲಿ ಉಳಿದಿದ್ದಾನೆ. ಈ ಹಿಂದೆ, ಈ ಮೂವರ ಬಂಧನದ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಪೊಲೀಸರು ಘೋಷಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೊಲೀಸರ ಪ್ರಕಾರ, ಕೊಲೆಯ ನಂತರ ಆರೋಪಿಗಳು ತಮ್ಮ ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟು ರಾಜಸ್ಥಾನದಿಂದ ಹರಿಯಾಣದ ಹಿಸಾರ್ ತಲುಪಿದ್ದಾರೆ. ನಂತರ ಹಿಮಾಚಲ ಪ್ರದೇಶದ ಮನಾಲಿಗೆ ಹೋದರು. ನಂತರ, ಅವರು ಚಂಡೀಗಢಕ್ಕೆ ತೆರಳಿದ್ದಾಗ ಅಲ್ಲಿ ಬಂಧಿಸಲಾಯಿತು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ | ಅಂದು ಗನ್ ಹಿಡಿದಿದ್ದ ನಕ್ಸಲೈಟ್, ಇಂದು ಕ್ಯಾಬಿನೆಟ್ ಮಿನಿಸ್ಟರ್; ಸೀತಕ್ಕನ ರೋಚಕ ಪಯಣ

ಆರೋಪಿಗಳ ಮೊಬೈಲ್ ಫೋನ್ ಸ್ಥಳಗಳನ್ನು ಅನುಸರಿಸಿ ಪೊಲೀಸರು ಶೂಟರ್‌ಗಳನ್ನು ಪತ್ತೆಹಚ್ಚಿದ್ದಾರೆ ಎಂದು ರಾಜಸ್ಥಾನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರಾಗಿರುವ ದಿನೇಶ್ ಎಂ ಎನ್ ಅವರು ತಡರಾತ್ರಿಯ ಕಾರ್ಯಾಚರಣೆ ಬಗ್ಗೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಹತ್ಯೆಯ ಆರೋಪಿಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ, ಹೆಚ್ಚುವರಿ ಮಹಾನಿರ್ದೇಶಕ (ಅಪರಾಧ) ದಿನೇಶ್ ಎಂಎನ್ ಅವರು ಈ ಮೊದಲು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.

“ಆರೋಪಿಗಳ ವಿಚಾರಣೆ ಈಗಾಗಲೇ ಪ್ರಾರಂಭವಾಗಿದೆ. ನಾಳೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಎಡಿಜಿ ದಿನೇಶ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌...

ಮಧ್ಯಪ್ರದೇಶ| ಎರಡು ದಿನಗಳ ಹಿಂದೆ ಬೋರ್‌ವೆಲ್‌ಗೆ ಬಿದ್ದ 6 ವರ್ಷದ ಬಾಲಕ ಮೃತ್ಯು

ಮಧ್ಯಪ್ರದೇಶದ ರೇವಾ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಎರಡು ದಿನಗಳ ಹಿಂದೆ ತೆರೆದ...

ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವದ ಬಗ್ಗೆ ಏ.18ರಂದು ಸುಪ್ರೀಂ ತೀರ್ಪು

ಚುನಾವಣಾ ಬಾಂಡ್‌ ಗಳ ಯೋಜನೆಯ ಸಿಂಧುತ್ವದ ಬಗ್ಗೆ ಪ್ರಶ್ನಿಸಿದ್ದ ಅರ್ಜಿಗಳ ಒಂದು...

ಲೋಕಸಭೆ ಚುನಾವಣೆ | ಪ್ರಣಾಳಿಕೆ: ಬಿಜೆಪಿ ‘ಸಂಕಲ್ಪ ಪತ್ರ’ V/s ಕಾಂಗ್ರೆಸ್‌ ‘ನ್ಯಾಯ ಪತ್ರ’; 10 ಪ್ರಮುಖ ಅಂಶಗಳು

ಮೂರನೇ ಬಾರಿಗೆ ಅಧಿಕಾರ ಹಿಡಿಯುತ್ತೇವೆಂದು ಅಬ್ಬರದ ಭಾಷಣ ಮಾಡುತ್ತಿರುವ ಬಿಜೆಪಿ, ಮುಂಬರು...