ಕೇರಳ ಮಾಜಿ ಸಿಎಂ ಕರುಣಾಕರನ್ ಪುತ್ರಿ ಬಿಜೆಪಿಗೆ ಸೇರ್ಪಡೆ

Date:

ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿ ದಿವಗಂತ ಕೆ ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಲೋಕಸಭಾ ಚುನಾವಣೆ ಕೆಲವು ದಿನಗಳು ಇರುವ ಮುನ್ನವೆ ಬಿಜೆಪಿಗೆ ಸೇರಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಕೇರಳ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್‌, “ಇಂದು ಕೇರಳದ ಮುಖ್ಯ ಗೌರವಾನ್ವಿತ ಕಾಂಗ್ರೆಸ್ ನಾಯಕರಾದ ಮಾಜಿ ಮುಖ್ಯಮಂತ್ರಿ ಕರುಣಾಕರನ್ ಅವರ ಪುತ್ರಿ ಹಾಗೂ ಕಾಂಗ್ರೆಸ್ ಸಂಸದ ಕೆ ಮುರುಳೀಥರನ್ ಅವರ ಸಹೋದರಿ ಪದ್ಮಜಾ ವೇಣು ಗೋಪಾಲ್ ಅವರನ್ನು ಕೇರಳದ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಅವರ ಉಪಸ್ಥಿತಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಕ್ಕೂ ಮುನ್ನ ಪದ್ಮಜಾ ಅವರ ಸಹೋದರ ಕಾಂಗ್ರೆಸ್ ಸಂಸದ ಕೆ ಮುರಳೀಥರನ್ ಅವರು ಮಾತನಾಡಿ, ಆಕೆಯ ನಿರ್ಧಾರ ವಿಶ್ವಾಸದ್ರೋಹವಾಗಿದೆ. ಇದರಿಂದ ಬಿಜೆಪಿಗೆ ಒಂದಿಷ್ಟು ಉಪಯೋಗವಾಗುವುದಿಲ್ಲ. ಕರುಣಾಕರನ್‌ ಅವರು ಕೋಮುವಾದಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಂಡಿರಲಿಲ್ಲ. ಇಂತಹ ಕುಟುಂಬದ ಸದಸ್ಯರೊಬ್ಬರು ಬಿಜೆಪಿ ಸೇರ್ಪಡೆಗೊಂಡಿರುವುದರಿಂದ ಜಾತ್ಯಾತೀತ ಮನೋಭಾವ ಹೊಂದಿರುವ ಜನರ ಭಾವನೆಗಳಿಗೆ ನೋವಾಗಿದೆ” ಎಂದು ಹೇಳಿದ್ದಾರೆ.

ಕೇರಳ ಕಾಂಗ್ರೆಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲ 20 ಸ್ಥಾನ ಗೆಲ್ಲಲು ಶ್ರಮಿಸಲಿದೆ. ಕಾಂಗ್ರೆಸ್ ಪಕ್ಷ ಆಕೆಗೆ ಯಾವಾಗಲು ಹೆಚ್ಚಿನ ಪ್ರಾಮುಖ್ಯತೆ ನೀಡಿತ್ತು. ಬಿಜೆಪಿ ಆಕೆಯ ಸೇರ್ಪಡೆಯಿಂದ ಯಾವುದೇ ಪ್ರಯೋಜನ ಪಡೆಯುವುದಿಲ್ಲ” ಎಂದು ಮುರುಳೀಥರನ್ ತಿಳಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕೇರಳದಿಂದ ರಾಹುಲ್‌ ಗಾಂಧಿ ಸೇರಿ 15 ಕಾಂಗ್ರೆಸ್ ಸದಸ್ಯರು ಗೆಲುವು ಸಾಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವಡ್ ಯಾತ್ರೆ ವಿವಾದ | ಸುಪ್ರೀಂ ಕೋರ್ಟ್ ಕದ ತಟ್ಟಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಕಾವಡ್ ಯಾತ್ರೆಯ ಮಾರ್ಗದಲ್ಲಿರುವ ತಿನಿಸುಗಳ ಸ್ಟಾಲ್‌ಗಳ ಮಾಲೀಕರು ಸ್ಟಾಲ್‌ನಲ್ಲಿ ತಮ್ಮ ಹೆಸರನ್ನು...

ಉಮರ್ ಖಲೀದ್ ಜಾಮೀನು ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ದೆಹಲಿ ಗಲಭೆಗಳ ಪಿತೂರಿ ಪ್ರಕರಣಗಳ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...