ಕರೂರು ಕಾಲ್ತುಳಿತ | ಯಾವುದೇ ರಾಜಕೀಯ ಹೇಳಿಕೆ ನೀಡಲ್ಲ: ತಮಿಳು ಸಿಎಂ ಸ್ಟಾಲಿನ್

Date:

ಕರೂರಿನಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣದ ಬಗ್ಗೆ ಯಾವುದೇ ರಾಜಕೀಯ ಹೇಳಿಕೆ ನೀಡುವುದಿಲ್ಲ. ತನಿಖಾ ಆಯೋಗ ಪ್ರಕರಣದ ತನಿಖೆ ನಡೆಸಲಿದೆ. ತನಿಖಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟಾಲಿನ್, “ಕರೂರು ಕಾಲ್ತುಳಿತ ಪ್ರಕರಣದ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಅರುಣಾ ಜಗದೀಶನ್ ನೇತೃತ್ವದ ತನಿಖಾ ಆಯೋಗ ರಚಿಸಲಾಗಿದೆ. ಆಯೋಗವು ತನಿಖೆ ನಡೆಸಲಿದೆ. ಪ್ರಕರಣ ಸಂಬಂಧ ಯಾವುದೇ ರಾಜಕೀಯ ಹೇಳಿಕೆ ನೀಡಲು ನಾನು ಇಚ್ಚಿಸುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸ್ಟಾಲಿನ್ ಅವರು ಘಟನೆ ನಡೆದ ಶನಿವಾರ ರಾತ್ರಿಯೇ ಕರೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಮೃತರ ಕುಟುಂಬಸ್ಥರಿಗೂ ಸಾಂತ್ವನ ಹೇಳಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬೌದ್ಧರು, ಮುಸ್ಲಿಮರನ್ನು ಒಂದು ಮಾಡಿದೆ ಅಸ್ಮಿತೆಯ ಹೋರಾಟ: ಬಿಜೆಪಿ ಕುತಂತ್ರಕ್ಕಿಲ್ಲ ಆಸ್ಪದ

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ಪಕ್ಷದ ನಾಯಕ, ನಟ ವಿಜಯ್, “ಘಟನೆಯಿಂದ ನನ್ನ ಹೃದಯ ಚೂರಾಗಿದೆ. ದುಃಖದಿಂದ ನರಳುತ್ತಿದ್ದೇನೆ. ಘಟನೆಯು ನಿಜಕ್ಕೂ ನಮಗೆ ತುಂಬಲಾಗದ ನಷ್ಟ ಉಂಟುಮಾಡಿದೆ. ಸಾಂತ್ವನದ ಮಾತುಗಳು ಪ್ರೀತಿಪಾತ್ರರ ನಷ್ಟವನ್ನು ಭರಿಸಲಾರದು. ಇಂತಹ ಸಂದರ್ಭಗಳಲ್ಲಿ ನಾನು ನಿಮ್ಮೊಂದಿಗೆ ನಿಲ್ಲುವುದು ನನ್ನ ಕರ್ತವ್ಯ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಕ್ಕೆ ನಿಮ್ಮ ಕುಟುಂಬದ ಸದಸ್ಯನಾಗಿ 20 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ನೀಡಲು ನಾನು ಉದ್ದೇಶಿಸಿದ್ದೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...