ಕಾಸರಗೋಡು | ಸಂಗೀತ ಕಾರ್ಯಕ್ರಮದಲ್ಲಿ ನೂಕುನುಗ್ಗಲು; 15 ಮಂದಿ ಗಂಭೀರ

Date:

ಸಂಗೀತ ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಕನಿಷ್ಠ 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಪಟ್ಟಣದಲ್ಲಿ ನಡೆದಿದೆ. ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿ ಜನಸಂದಣಿ ಸೇರಿಸಿದ್ದರಿಂದ ನೂಕುನುಗ್ಗಲು ಉಂಟಾಗಿದೆ ಎಂದು ವರದಿಯಾಗಿದೆ.

- Advertisement -

ನಗರದ ನುಳ್ಳಿಪ್ಪಾಡಿ ಪ್ರದೇಶದಲ್ಲಿ ‘ಕಾಸರಗೋಡು ಫ್ಲೀ ಯುವಜನ’ ಸಂಘಟನೆಯು ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಹನಾನ್ ಷಾ ಅವರ ಗಾಯನ ಇದ್ದಿದ್ದರಿಂದ, ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಪರಿಣಾಮ, ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಗಾಯಾಳುಗಳನ್ನು ಹಲವು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಹಲವರು ಮಹಿಳೆಯರು ಮತ್ತು ಮಕ್ಕಳು ಎಂದು ತಿಳಿದುಬಂದಿದೆ

ಕಾರ್ಯಕ್ರಮದಲ್ಲಿ ಭಾಗಿಯಾಗಲು ಟಿಕೆಟ್‌ ವ್ಯವಸ್ಥೆ ಇತ್ತು. ಆದಾಗ್ಯೂ, ಟಿಕೆಟ್ ಪಡೆಯದವರೂ ಕಾರ್ಯಕ್ರಮಕ್ಕೆ ಬಂದಿದ್ದರು. ಟಿಕೆಟ್‌ ಇಲ್ಲದವರೂ ಮೈದಾನಕ್ಕೆ ನುಗ್ಗಲು ಯತ್ನಿಸಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ.

ಜನರ ಗುಂಪನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಕಾರ್ಯಕ್ರಮವೂ ಕೆಲಕಾಲ ಅಸ್ತವ್ಯಸ್ತಗೊಂಡು, ಸ್ಥಗಿತಗೊಂಡಿತ್ತು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಹಾರ್ ಜೈಲಿನಲ್ಲಿ ಸಿಜೆಪಿ ನಾಯಕರಿಗೆ ಹೈ ಸೆಕ್ಯುರಿಟಿ; ಇತರ ಕೈದಿಗಳಿಂದ ಪ್ರತ್ಯೇಕ ವಾಸ

ಅನುಮತಿಯಿಲ್ಲದೆ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ...

ಒಂದೇ ಕುಟುಂಬದ ಐವರು ಶವವಾಗಿ ಪತ್ತೆ; ವಿಷಾಹಾರ ಸೇವಿಸಿದ ಶಂಕೆ

ಒಂದೇ ಕುಟುಂಬದ ಐವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ...

‘ಮಹಿಳೆಯರನ್ನು ಗೌರವಿಸುವ ಯುವಜನತೆಯ ಮುಂದೆ ಬಿಜೆಪಿಯ ನಿಜಬಣ್ಣ ಬಯಲಾಗಿದೆ’: ಪ್ರಕಾಶ್ ರಾಜ್

ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಯುವಜನತೆಯನ್ನು ಶ್ಲಾಘಿಸಿರುವ ನಟ...

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...