ಆಮ್ಲೆಟ್ ತಿನ್ನುತ್ತಿದ್ದ ವೇಳೆ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಬದಿಯಡ್ಕದಲ್ಲಿ ಭಾನುವಾರ ಸಂಜೆ ನಡೆದಿರುವುದು ವರದಿಯಾಗಿದೆ
ಬದಿಯಡ್ಕ ಚುಳ್ಳಿಕ್ಕಾನ ನಿವಾಸಿ, ಪ್ರಸಕ್ತ ಬಾರಡ್ಕದಲ್ಲಿ ವಾಸವಿದ್ದ ವಿನ್ಸೆಂಟ್ ಕ್ರಾಸ್ತಾ(52) ಮೃತಪಟ್ಟವರು.
ಅವರು ಭಾನುವಾರ ಸಂಜೆ ಮನೆ ಸಮೀಪದ ಗೂಡಂಗಡಿಯಿಂದ ಆಮ್ಲೆಟ್ ಸೇವಿಸುತ್ತಿದ್ದಾಗ ಘಟನೆ ನಡೆದಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಆಳಂದ’ ಕ್ಷೇತ್ರದ ಆಕ್ಷೇಪಕ್ಕೆ ಅರೆಬರೆ ಉತ್ತರಕೊಟ್ಟ ಚುನಾವಣಾ ಆಯೋಗ
ಆಮ್ಲೆಟ್ ಗಂಟಲಲ್ಲಿ ಸಿಲುಕಿ ಒದ್ದಾಡುತ್ತಿದ್ದ ವಿನ್ಸೆಂಟ್ ರನ್ನು ತಕ್ಷಣ ಕುಂಬಳೆಯ ಆಸ್ಪತ್ರೆಗೆ ಕರೆದೊಯ್ಯಲಾತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದರು. ಬೇಳ ಕಟ್ಟತ್ತಂಗಡಿ ಎಂಬಲ್ಲಿ ವೆಲ್ಡಿಂಗ್ ಶಾಫ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಿನ್ಸೆಂಟ್ ಕ್ರಾಸ್ತಾ ಅವಿವಾಹಿತರಾಗಿದ್ದರು..
ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿ ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.
