ಕಾಶ್ಮೀರ ವಿಚಾರ: ಕಾಂಗ್ರೆಸ್‌ನಲ್ಲಿ ತೀವ್ರ ಆಕ್ರೋಶ ಸೃಷ್ಟಿಸಿದ ಶಶಿ ತರೂರ್ ಹೇಳಿಕೆ

Date:

ಕಾಂಗ್ರೆಸ್‌ನ ಹಿರಿಯ ಸಂಸದ ಶಶಿ ತರೂರ್ ಅವರು ಇತ್ತೀಚೆಗೆ ಕಾಶ್ಮೀರಕ್ಕೆ ಭೇಟಿ ನೀಡಿದ್ದರು, ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿ ಮಾಡಿದ್ದರು. ಇದಾದ ನಂತರ, ಅವರು ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯು ‘ಸಹಜ ಸ್ಥಿತಿಯತ್ತ ಪ್ರಗತಿ’ ಕಾಣುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆಗೆ ತಮ್ಮದೇ ಪಕ್ಷದ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನೊಳಗೆ ಭಾರೀ ಅಸಮಾಧಾನ ಭುಗಿಲೆದ್ದಿದೆ.

- Advertisement -

ತರೂರ್ ಅವರ ಹೇಳಿಕೆಯನ್ನು ಜಮ್ಮು-ಕಾಶ್ಮೀರದ ಕಾಂಗ್ರೆಸ್ ಮುಖ್ಯ ವಕ್ತಾರ ರವೀಂದರ್ ಶರ್ಮಾ ಖಂಡಿಸಿದ್ದಾರೆ. “ತರೂರ್ ಅವರು ಕೇವಲ ರಾಜಭವನದ ಸಭೆಗೆ ಸೀಮಿತವಾಗಿದ್ದಾರೆ. ಕಾಶ್ಮೀರ ಕಣಿವೆಯ ಸಾಮಾನ್ಯ ಜನರನ್ನು ಭೇಟಿ ಮಾಡಿ ಅಲ್ಲಿನ ನಿಜವಾದ ವಾಸ್ತವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಅವರು ಸಮಯ ಮೀಸಲಿಡಬೇಕಿತ್ತು” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಲೆಫ್ಟಿನೆಂಟ್ ಗವರ್ನರ್ ಭೇಟಿಯ ಬಳಿಕ ‘ಎಕ್ಸ್‌’ನಲ್ಲಿ ಟ್ವೀಟ್ ಮಾಡಿದ್ದ ತರೂರ್, “ಶ್ರೀನಗರದಲ್ಲಿದ್ದೇನೆ! ಇಂದು ಲೋಕಭವನದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಅತ್ಯುತ್ತಮ ಸಭೆ ನಡೆಸುವ ಅವಕಾಶ ಸಿಕ್ಕಿತು. ನಾವು ಜಮ್ಮು-ಕಾಶ್ಮೀರದ ಪರಿಸ್ಥಿತಿ ಮತ್ತು ಅದು ಸಹಜ ಸ್ಥಿತಿಯತ್ತ ಸಾಗುತ್ತಿರುವ ಪ್ರಗತಿಯ ಬಗ್ಗೆ ಚರ್ಚಿಸಿದೆವು. ಇನ್ನೂ ಅನೇಕ ಸವಾಲುಗಳು ಬಾಕಿ ಇವೆ. ಮಾಡಬೇಕಾದ ಕೆಲಸಗಳು ಸಾಕಷ್ಟಿವೆ, ಆದರೆ ಈ ಸಭೆಯ ನಂತರ ಇತ್ತೀಚಿನ ದಿನಗಳಿಗಿಂತ ಕಾಶ್ಮೀರ ಪ್ರಗತಿಯ ಕುರಿತು ನನ್ನಲ್ಲಿ ಹೆಚ್ಚಿನ ಸಕಾರಾತ್ಮಕ ಭಾವನೆ ಮೂಡಿದೆ” ಎಂದು ಬರೆದುಕೊಂಡಿದ್ದಾರೆ.

ತರೂರ್ ಅವರ ಈ ಹೇಳಿಕೆಯು ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಮುಜುಗರ ಉಂಟು ಮಾಡಿದೆ ಎಂದು ಹೇಳಲಾಗಿದೆ. ಜಮ್ಮು-ಕಾಶ್ಮೀರಕ್ಕೆ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ರಾಜ್ಯವನ್ನು ವಿಭಜಿಸಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿದ ಬಳಿಕ ರಾಜ್ಯದ ಪರಿಸ್ಥಿತಿ ಹದಗೆಟ್ಟಿದೆ. ಅಲ್ಲಿ ಶಾಂತಿ ಹಾಗೂ ಸಹಜ ಸ್ಥಿತಿಯನ್ನು ಮರುಸ್ಥಾಪಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ತರೂರ್ ಅವರು ಅಲ್ಲಿ ‘ಪ್ರಗತಿಯ ಉತ್ತೇಜನವಿದೆ’ ಎಂದು ಶ್ಲಾಘಿಸಿರುವುದು ಪಕ್ಷದ ಅಧಿಕೃತ ರಾಜಕೀಯ ನಿಲುವಿಗೆ ಸಂಪೂರ್ಣ ವಿರುದ್ಧವಾಗಿದೆ.

ಕಾಂಗ್ರೆಸ್ ಒಳಗಿನ ಈ ಭಿನ್ನಾಭಿಪ್ರಾಯವನ್ನು ಬಳಸಿಕೊಂಡು ಕಾಂಗ್ರೆಸ್‌ಅನ್ನು ಬಿಜೆಪಿ ಟೀಕಿಸಿದೆ. ಬಿಜೆಪಿ ವಕ್ತಾರ ಅಭಿಜೀತ್ ಜಸ್ರೋಟಿಯಾ ಅವರು, “ಇಲ್ಲಿನ ವ್ಯಂಗ್ಯವನ್ನು ಯಾರು ಬೇಕಾದರೂ ಗಮನಿಸಬಹುದು. ಕೇಂದ್ರ ಸರ್ಕಾರದ ಕಾಶ್ಮೀರ ನೀತಿಯನ್ನು ಕಾಂಗ್ರೆಸ್ ನಿರಂತರವಾಗಿ ಟೀಕಿಸುತ್ತಿದ್ದರೂ, ವಾಸ್ತವದ ಅಂಕಿ-ಅಂಶಗಳು ಬೇರೆಯದೇ ಚಿತ್ರಣವನ್ನು ನೀಡುತ್ತಿವೆ. ಆರ್ಟಿಕಲ್ 370 ರದ್ದಾದ ನಂತರ ಕಲ್ಲು ತೂರಾಟದ ಘಟನೆಗಳು ಸಂಪೂರ್ಣವಾಗಿ ಕೊನೆಗೊಂಡಿವೆ. ಕಳೆದ 18 ತಿಂಗಳುಗಳಲ್ಲಿ ಒಬ್ಬನೇ ಒಬ್ಬ ಕಾಶ್ಮೀರಿ ಯುವಕ ಭಯೋತ್ಪಾದನಾ ಸಂಘಟನೆಗಳನ್ನು ಸೇರಿಲ್ಲವೆಂದು ಅಧಿಕೃತ ಅಂಕಿ-ಅಂಶಗಳೇ ಹೇಳುತ್ತಿವೆ,” ಎಂದು ಲೇವಡಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...