ಪುಸ್ತಕ, ಶುಗರ್ ಸೆನ್ಸರ್, ಔಷಧಿ; ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್‌ಗೆ ಸಿಗುವ ಸೌಲಭ್ಯಗಳಿವು

Date:

ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದ್ದು, ಅಲ್ಲಿ ಅವರಿಗೆ ಪುಸ್ತಕ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಲು ದೆಹಲಿ ಕೋರ್ಟ್ ಅವಕಾಶ ನೀಡಿದೆ.

- Advertisement -

ವಿಶೇಷ ಡಯೆಟ್‌ಗೆ ಕೋರ್ಟ್ ಅನುಮತಿಸಿದ್ದು, ಅರವಿಂದ್ ಕೇಜ್ರಿವಾಲ್ ಅವರು ಮನೆಯಲ್ಲಿ ತಯಾರಿಸಿದ ಊಟ ಸೇವಿಸಲು, ಮಿನರಲ್ ಬಾಟಲಿ ನೀರು ಪಡೆಯಬಹುದಾಗಿದೆ. ಜೊತೆಗೆ ದೇಹದಲ್ಲಿ ಸಕ್ಕರೆ ಪ್ರಮಾಣ ಏರುಪೇರಾದಾಗ ಸಿಹಿ (toffees) ಪಡೆಯಲು ಅವಕಾಶ ನೀಡಲಾಗಿದೆ. ಜೊತೆಗೆ ಪತ್ನಿ ಸುನೀತಾ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿ ಭೇಟಿಯಾಗಲು ಅವಕಾಶವಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇನ್ನು ಅರವಿಂದ್ ಕೇಜ್ರಿವಾಲ್ ಅವರ ಆರೋಗ್ಯವನ್ನು ಪರಿಶೀಲಿಸುತ್ತಿರಲು ತಿಳಿಸಲಾಗಿದೆ. ಕೇಜ್ರಿವಾಲ್ ಮಧುಮೇಹ ಹೊಂದಿರುವ ಕಾರಣ ಶುಗರ್ ಸೆನ್ಸರ್ ಸೌಲಭ್ಯ ನಿಡಲಾಗಿದೆ. ಕೇಜ್ರಿವಾಲ್ ಅವರು ತಮ್ಮ ಕನ್ನಡಕ ಮತ್ತು ತಮ್ಮ ಧಾರ್ಮಿಕ ಲಾಕೆಟ್ ಧರಿಸಲು ಅವಕಾಶವಿದೆ. ಇನ್ನು ಕೆಲವು ಪುಸ್ತಕಗಳನ್ನು ನೀಡುವಂತೆ ಕೇಜ್ರಿವಾಲ್ ಕೋರ್ಟ್ ಮುಂದೆ ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ?   ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ

ಅದರಂತೆ ಕೋರ್ಟ್ ಭಗವದ್ಗೀತೆ, ರಾಮಾಯಣ, ಪತ್ರಕರ್ತೆ ನೀರ್ಜಾ ಚೌಧರಿ ಬರೆದ ಹೌ ಪ್ರೈಮ್ ಮಿನಿಸ್ಟರ್ಸ್ ಡಿಸೈಡ್ (How Prime Ministers Decide) ಪುಸ್ತಕ ನೀಡಲು ಜೈಲಿನ ಅಧಿಕಾರಿಗಳಿಗೆ ತಿಳಿಸಿದೆ. ಜೊತೆಗೆ ಇತರೆ ಪುಸ್ತಕ, ನೋಟ್‌ಪ್ಯಾಡ್‌, ಪೆನ್‌ ನೀಡಲು ತಿಳಿಸಲಾಗಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ದೆಹಲಿಯ ರೋಸ್ ಅವಿನ್ಯೂ ಕೋರ್ಟ್ 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಇ.ಡಿ ಕಸ್ಟಡಿ ಅವಧಿ ಸೋಮವಾರ ಅಂತ್ಯವಾದ ಕಾರಣ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...