ನ್ಯಾ. ಸ್ವರ್ಣಕಾಂತ ಶರ್ಮಾ ಮುಂದೆ ವಿಚಾರಣೆಗೆ ಹಾಜರಾಗಲ್ಲವೆಂದ ಕೇಜ್ರಿವಾಲ್‌

Date:

ಮಾಜಿ ಮುಖ್ಯಮಂತ್ರಿ, ಆಪ್‌ ನ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ದೆಹಲಿ ಅಬಕಾರಿ ಹಗರಣ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಅವರ ಮುಂದೆ ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಆಮ್ ಆದ್ಮ ಪಕ್ಷ (ಎಎಪಿ) ತಿಳಿಸಿದೆ.


ಸ್ವರ್ಣಕಾಂತ ಶರ್ಮಾ ಅವರಿಗೆ ಈ ಸಂಬಂಧಿಸಿದಂತೆ ಕೇಜ್ರವಾಲ್ ಪತ್ರ ಬರೆದಿದ್ದಾರೆ. ‘ನ್ಯಾಯಮೂರ್ತಿ ಸ್ವರ್ಣಕಾಂತ ಅವರಿಂದ ನ್ಯಾಯದೊರಕುವ ಭರವಸೆ ಇಲ್ಲ. ಆ ಕಾರಣದಿಂದ ನಾನು ಮಹಾತ್ಮ ಗಾಂಧಿಯವರ ಸತ್ಯಾಗ್ರಹದ ಮಾರ್ಗವನ್ನು ಅನುಸರಿಸಲು ನಿರ್ಧರಿಸಿದ್ದೇನೆ’ ‘ನನ್ನ ಆತ್ಮಸಾಕ್ಷಿಯ ಧ್ವನಿಯನ್ನು ಆಲಿಸುವ ಈ ನಿರ್ಧಾರ ಕೈಕೊಂಡಿದ್ದೇನೆ’ ಎಂದು ಕೇಜ್ರಿವಾಲ್‌ ಸ್ಪಷ್ಟ ಪಡಿಸಿದ್ದಾರೆ. 

ಎಎಪಿ ಮುಖ್ಯಸ್ಥ ಅರವಿಂದ ಕೇಜ್ರವಾಲ್ ಹಾಗೂ ಇತರರು ದೆಹಲಿ ಅಬಕಾರಿ ಹಗರಣ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ತಿರಸ್ಕರಿಸಿದ್ದರು. ಈ ನಿರ್ಧಾರವನ್ನು ಪ್ರಶ್ನಿಸಿ  ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಕೇಜ್ರಿವಾಲ್‌ ತಿಳಿಸಿದ್ದಾರೆ.


ಇನ್ನು, ಸಿಬಿಐ (CBI) ಪರ ವಾದ ಮಂಡಿಸುತ್ತಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಪಾತ್ರವನ್ನು ಉಲ್ಲೇಖಿಸಿದ್ದಾರೆ. ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮಕ್ಕಳು ಕೇಂದ್ರ ಸರ್ಕಾರದ ಪ್ಯಾನಲ್ ಕೌನ್ಸೆಲ್‌ಗಳಾಗಿದ್ದಾರೆ (ಸರ್ಕಾರಿ ವಕೀಲರು). ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಸರ್ಕಾರಿ ವಕೀಲರಿಗೆ (ನ್ಯಾಯಾಧೀಶರ ಮಕ್ಕಳಿಗೆ) ಪ್ರಕರಣಗಳನ್ನು ಹಂಚಿಕೆ ಮಾಡುತ್ತಿದ್ದಾರೆ, ಇದು ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೇಸರಿ ಶಾಲು ಹೊದಿಸಿಕೊಂಡ ರಾಘವ ಚಡ್ಡಾ | ಮಹಾರಾಷ್ಟ್ರ ಮಾದರಿಯ ಆಪರೇಷನ್ ಗೆ ಬಿಜೆಪಿ…

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...