ಕೇರಳ | ಕಳೆದ 2 ವರ್ಷಗಳಲ್ಲಿ 519 ಮಂದಿ ಮಾನವ ಕಳ್ಳಸಾಗಣೆಗೆ ಬಲಿ

Date:

Advertisements

ಕಳೆದ ಎರಡು ವರ್ಷಗಳಲ್ಲಿ ಕೇರಳದಲ್ಲಿ 519 ಜನರು ಮಾನವ ಕಳ್ಳಸಾಗಾಣಿಕೆಗೆ ಬಲಿಯಾಗಿದ್ದಾರೆ. ಅವರಲ್ಲಿ 236 ಮಕ್ಕಳು, 234 ಮಹಿಳೆಯರು ಹಾಗೂ 49 ಪುರುಷರು ಎಂದು ಪೊಲೀಸ್ ಅಂಕಿಅಂಶಗಳು ವಿವರಿಸಿವೆ.

2022 ಮತ್ತು 2023ರ ಪೊಲೀಸ್ ಮಾನವ ಕಳ್ಳಸಾಗಣೆ ವಿರೋಧಿ ಘಟಕದ ಅಧಿಕೃತ ಅಂಕಿಅಂಶಗಳ ಪ್ರಕಾರ, ಕೇರಳದಲ್ಲಿ ಎರಡು ವರ್ಷಗಳಲ್ಲಿ 257 ಮಾನವ ಕಳ್ಳಸಾಗಣೆ ಪ್ರಕರಣಗಳು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ಕಾಸರಗೋಡಿನಲ್ಲಿ ಅತಿ ಹೆಚ್ಚು 75 ಪ್ರಕರಣಗಳು ದಾಖಲಾಗಿವೆ.

2022ರಲ್ಲಿ 152 ಪ್ರಕರಣಗಳು ದಾಖಲಾಗಿದ್ದರೆ, 2023ರಲ್ಲಿ 105 ಪ್ರಕರಣಗಳು ದಾಖಲಾಗಿವೆ. 2022ರಲ್ಲಿ 149 ಮಹಿಳೆಯರು ಮತ್ತು 143 ಮಕ್ಕಳು ಹಾಗೂ 2023ರಲ್ಲಿ 85 ಮಹಿಳೆಯರು ಮತ್ತು 93 ಮಕ್ಕಳು ಮಾನವ ಕಳ್ಳಸಾಗಾಣಿಕೆಗೆ ಬಲಿಯಾಗಿದ್ದಾರೆ.

Advertisements

ಅದರಲ್ಲೂ, ಕಾಸರಗೋಡು ಜಿಲ್ಲೆಯಲ್ಲೇ ಅತೀ ಹೆಚ್ಚು 137 ಜನರು (22 ಪುರುಷರು, 53 ಮಹಿಳೆಯರು ಮತ್ತು 62 ಮಕ್ಕಳು) ಎರಡು ವರ್ಷಗಳಲ್ಲಿ ಕಳ್ಳಸಾಗಣೆಗೆ ಬಲಿಯಾಗಿದ್ದಾರೆ. ಎರಡು ವರ್ಷಗಳ ಅಂಕಿಅಂಶಗಳ ಪ್ರಕಾರ, 49 ಪ್ರಕರಣಗಳೊಂದಿಗೆ ಇಡುಕ್ಕಿ ಎರಡನೇ ಸ್ಥಾನದಲ್ಲಿದ್ದರೆ, 45 ಪ್ರಕರಣಗಳೊಂದಿಗೆ ಎರ್ನಾಕುಲಂ ಮೂರನೇ ಸ್ಥಾನದಲ್ಲಿದೆ.

“ಈ ಪ್ರಕರಣಗಳು ಇತರ ದೇಶಗಳಿಗೆ ಜನರನ್ನು ಕಳ್ಳಸಾಗಣೆ ಮಾಡುವುದಕ್ಕೆ ಸಂಬಂಧಿಸಿಲ್ಲ. ಪೋಷಕರ ಒಪ್ಪಿಗೆಯಿಲ್ಲದೆ ಅಪ್ರಾಪ್ತರನ್ನು ಕರೆದೊಯ್ಯುವ ಅಪಹರಣ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳನ್ನು ಮಾನವ ಕಳ್ಳಸಾಗಣೆ ವಿಭಾಗದ ಅಡಿಯಲ್ಲಿ ಪೊಲೀಸರು ದಾಖಲಿಸಿದ್ದಾರೆ” ಎಂದು ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥ ಪಿ ಬಿಜೋಯ್ ಹೇಳಿದರು.

“ಇನ್ನು ಪತ್ತೆ ಆಗದಿರುವ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆಯನ್ನು ಪಟ್ಟಿಗೆ ಸೇರಿಸಿದರೆ, ಕಳ್ಳಸಾಗಾಣಿಕೆ ಪ್ರಕರಣಗಳ ಸಂಖ್ಯೆ ಹೆಚ್ಚಲಿದೆ”ಎಂದು ನಿವೃತ್ತ ಡಿಜಿಪಿ ಹಾಗೂ ವಿಶ್ವಸಂಸ್ಥೆಯ ಡ್ರಗ್ಸ್ ಆ್ಯಂಡ್ ಕ್ರೈಂ (ಯುಎನ್‌ಒಡಿಸಿ) ಕಚೇರಿಯ ಮಾಜಿ ಮಾನವ ಕಳ್ಳಸಾಗಣೆ ತಡೆ ಯೋಜನೆಯ ಸಂಯೋಜಕ ಪಿ ಎಂ ನಾಯರ್ ಹೇಳಿದ್ದಾರೆ.

ಕಳೆದ ಎರಡು ವರ್ಷಗಳಲ್ಲಿ ಮಾನವ ಕಳ್ಳಸಾಗಣೆ ಪ್ರಕರಣಗಳಲ್ಲಿ 46 ಮಹಿಳೆಯರು ಸೇರಿದಂತೆ 415 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2022ರಲ್ಲಿ 295 ಮಂದಿಯನ್ನು ಬಂಧಿಸಿದ್ದರೆ, 2023ರಲ್ಲಿ 116 ಮಂದಿಯನ್ನು ಬಂಧಿಸಲಾಗಿದೆ. ಕಾಸರಗೋಡಿನಲ್ಲಿ ಎರಡು ವರ್ಷಗಳಲ್ಲಿ 106 ಮಂದಿಯನ್ನು ಬಂಧಿಸಲಾಗಿದ್ದು, ಇವರಲ್ಲಿ ಐವರು ಮಹಿಳೆಯರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

Download Eedina App Android / iOS

X