ಕೇರಳ | ಬಸ್‌ನಲ್ಲಿ ಗರ್ಭಿಣಿಗೆ ಹೆರಿಗೆ ನೋವು; ಬಸ್‌ ನೇರವಾಗಿ ಆಸ್ಪತ್ರೆಗೆ ನುಗ್ಗಿಸಿದ ಚಾಲಕ; ವಿಡಿಯೋ ವೈರಲ್

Date:

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗರ್ಭಿಣಿಯೋರ್ವರಿಗೆ ಹೆರಿಗೆ ನೋವು ಕಾಣಿಸಿದ ಹಿನ್ನೆಲೆಯಲ್ಲಿ ಸರ್ಕಾರಿ ಬಸ್‌ ಚಾಲಕನೋರ್ವ ಸಮಯ ಪ್ರಜ್ಞೆ ಮೆರೆದು, ಬಸ್‌ ಅನ್ನು ನೇರವಾಗಿ ಆಸ್ಪತ್ರೆಗೆ ನುಗ್ಗಿಸಿದ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಬಸ್‌ ಅನ್ನು ಆಸ್ಪತ್ರೆಗೆ ನುಗ್ಗಿಸಿದ ಕೂಡಲೇ ವೈದ್ಯರ ತಂಡವು ಮಹಿಳೆಗೆ ಬಸ್‌ನಲ್ಲೇ ಹೆರಿಗೆ ಮಾಡಿಸಿದ್ದಾರೆ.

- Advertisement -

ಈ ಘಟನೆಯು ಕೇರಳದ ತ್ರಿಶೂರ್‌ನಲ್ಲಿ ನಡೆದಿದ್ದು, ಇದರ ಸಿಸಿಟಿವಿ ದೃಶ್ಯವು ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ತ್ರಿಶೂರ್‌ನಲ್ಲಿ 37 ವರ್ಷದ ಮಹಿಳಾ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ತಿರುನವಾಯದಲ್ಲಿನ ನಿವಾಸಿ ಲಿಜೇಶ್ ಎಂಬವರ ಪತ್ನಿ ಸೆರೀನಾ ಅವರು ಬುಧವಾರ ಅಂಗಮಾಲಿಯಿಂದ ತೊಟ್ಟಿಲ್‌ಪಾಲಂಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಪೇರಮಂಗಲಂ ಪೊಲೀಸ್ ಠಾಣೆಯ ಸಮೀಪ ತಲುಪಿದ ನಂತರ ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಇದನ್ನು ಗಮನಿಸಿದ ಇತರೆ ಪ್ರಯಾಣಿಕರು ಕೂಡಲೇ ಚಾಲಕನ ಗಮನಕ್ಕೆ ತಂದಿದ್ದಾರೆ. ಆ ಕೂಡಲೇ ಸಮಯ ಪ್ರಜ್ಞೆ ಮೆರೆದ ಸರ್ಕಾರಿ ಬಸ್  ಚಾಲಕ, ತ್ರಿಶೂರ್‌ನ ಅಮಲಾ ಆಸ್ಪತ್ರೆಯ ಆವರಣಕ್ಕೆ ನುಗ್ಗಿಸಿ, ತುರ್ತು ಚಿಕಿತ್ಸಾ ಘಟಕದ ಬಳಿ ಬಸ್‌ ನಿಲ್ಲಿಸಿದ್ದಾನೆ.

ಬಸ್‌ ಆಸ್ಪತ್ರೆಯೊಳಗೆ ಬಂದ ಕೂಡಲೇ ನಿರ್ವಾಹಕ ಹಾಗೂ ಇತರೆ ಪ್ರಯಾಣಿಕರು ವೈದ್ಯರನ್ನು ಕರೆದಿದ್ದಾರೆ. ಕೂಡಲೇ  ಮಹಿಳೆ ನೋವು ಅನುಭವಿಸುತ್ತಿರುವುದರ ಮಧ್ಯೆ ಹೆರಿಗೆ ಬಹುತೇಕ ಪೂರ್ಣಗೊಂಡಿರುವುದನ್ನು ಮನಗಂಡ ವೈದ್ಯರ ತಂಡ, ನೇರವಾಗಿ ವೈದ್ಯಕೀಯ ಸಲಕರಣೆಗಳೊಂದಿಗೆ ಬಸ್‌ನಲ್ಲೇ ಮಗುವನ್ನು ಹೊರತೆಗೆಯಲು ಸಹಾಯ ಮಾಡಿದರು. ಹೆರಿಗೆಯಾದ ಕೂಡಲೇ ಮಗು ಹಾಗೂ ಬಾಣಂತಿ ಸೆರೀನಾರನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿದ್ದಾರೆ. ಸದ್ಯ ಹೆಣ್ಣು ಮಗು ಹಾಗೂ ತಾಯಿ ಕ್ಷೇಮವಾಗಿರುವುದಾಗಿ ವರದಿಯಾಗಿದೆ.

ಈ ಎಲ್ಲ ಘಟನೆಯ ವಿಡಿಯೋ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಈ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿರುವ ತ್ರಿಶೂರ್‌ನ ಅಮಲಾ ಆಸ್ಪತ್ರೆಯ ವಕ್ತಾರರು, “ಗರ್ಭಿಣಿ ಸೆರೀನಾ ಒಂಭತ್ತನೇ ತಿಂಗಳಿನಲ್ಲಿದ್ದರು. ಆಸ್ಪತ್ರೆಗೆಂದು ಬಸ್‌ನಲ್ಲಿ ಹೋಗುತ್ತಿದ್ದರು. ಮಧ್ಯಾಹ್ನ 12.30ರ ಸುಮಾರಿಗೆ ವೇಳೆಗೆ ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದು ಆಸ್ಪತ್ರೆಯ ಆವರಣಕ್ಕೆ ಬಸ್‌ ನುಗ್ಗಿಸಿದ್ದರು. ಬಸ್‌ನಲ್ಲಿದ್ದಾಗಲೇ ಬಹುತೇಕ ಮಗು ಹೊರಗೆ ಬಂದಿದ್ದರಿಂದ ಅಲ್ಲೇ ನಿಂತು ನಮ್ಮ ವೈದ್ಯರು ಮತ್ತು ನರ್ಸ್‌ಗಳ ತಂಡ ಹೆರಿಗೆ ಮಾಡಿಸಿದೆ. ಇಬ್ಬರೂ ಕೂಡ ಸುರಕ್ಷಿತವಾಗಿದ್ದಾರೆ. ಘಟನೆ ನಡೆದ ಕೂಡಲೇ ಪತಿ ಲಿಜೇಶ್ ಅವರಿಗೆ ಮಾಹಿತಿ ನೀಡಿದೆವು. ಅವರು ಕೂಡ ಆಸ್ಪತ್ರೆಗೆ ಬಂದಿದ್ದಾರೆ. ಮಗುವನ್ನು NICU (ನಿಯೋ-ನಾಟಲ್ ಇಂಟೆನ್ಸಿವ್ ಕೇರ್ ಯುನಿಟ್) ಗೆ ಸ್ಥಳಾಂತರಿಸಿದ್ದೇವೆ. ಸೆರೀನಾ ನಿಗಾದಲ್ಲಿದ್ದಾರೆ. ತಾಯಿ ಮತ್ತು ಮಗುವಿನ ಆರೋಗ್ಯ ಸ್ಥಿರವಾಗಿದೆ” ಎಂದು ತಿಳಿಸಿದ್ದಾರೆ.

ಸಮಯಪ್ರಜ್ಞೆ ಮೆರೆದ ಸರ್ಕಾರಿ ಬಸ್‌ನ ಚಾಲಕ ಹಾಗೂ ಕೂಡಲೇ ಕಾರ್ಯಪ್ರವೃತ್ತರಾಗಿ ಹೆರಿಗೆ ಮಾಡಿಸಿದ ವೈದ್ಯರ ತಂಡಕ್ಕೆ ನೆಟ್ಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...