ಮತದಾನ ಮಾಡಿ ಫಲಿತಾಂಶಕ್ಕಾಗಿ 25 ದಿನ ಕಾಯಬೇಕು ಕೇರಳ, ಅಸ್ಸಾಂ, ಪುದುಚೇರಿ ಜನತೆ!

Date:

ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಮಾರ್ಚ್ 15ರಂದು ಚುನಾವಣಾ ಆಯೋಗ ಘೋಷಿಸಿದೆ. ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ, ಆದರೆ ಮೇ 4ರಂದು ಮತಎಣಿಕೆ ನಡೆಯಲಿದೆ. ಅಂದರೆ ಮತದಾನ ಮಾಡಿ ಫಲಿತಾಂಶಕ್ಕಾಗಿ ಬರೋಬ್ಬರಿ 25 ದಿನಗಳು ಕಾಯಬೇಕಾಗಿದೆ!

- Advertisement -

ಫಲಿತಾಂಶಕ್ಕಾಗಿ ಅಷ್ಟೊಂದು ದಿನ ಕಾಯಬೇಕಾಗಿರುವುದು ಸದ್ಯ ತೀವ್ರ ಚರ್ಚೆಗೆ ಕಾರಣವಾಗಿದೆ. ಮತದಾರರು ಮತ್ತು ರಾಜಕೀಯ ಪಕ್ಷಗಳಲ್ಲಿ ಹಲವು ಅನುಮಾನ ಮತ್ತು ಆತಂಕಗಳನ್ನು ಹುಟ್ಟುಹಾಕಿದೆ. ಸಾಮಾನ್ಯವಾಗಿ ಮತದಾನ ಮುಗಿದ 3ರಿಂದ 5 ದಿನಗಳಲ್ಲಿ ಫಲಿತಾಂಶ ಹೊರಬರುವುದು ವಾಡಿಕೆ. ಆದರೆ ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಮತಯಂತ್ರಗಳು (EVM) ಸ್ಟ್ರಾಂಗ್ ರೂಮ್‌ಗಳಲ್ಲಿ ಸುಮಾರು ಮೂರು ವಾರಗಳಿಗಿಂತ ಹೆಚ್ಚು ಕಾಲ ಇರಲಿರುವುದು ಸುರಕ್ಷತೆಯ ಆತಂಕವನ್ನು ಸೃಷ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

‘ಮತದಾನದ ವಂಚನೆ’ ನಡೆಯಬಹುದು ಎಂಬುದು ವಿರೋಧ ಪಕ್ಷಗಳು ಮತ್ತು ಸಾರ್ವಜನಿಕರಲ್ಲಿ ಪ್ರಮುಖವಾಗಿ ಕಾಡುತ್ತಿರುವ ಭಯ. ಅಷ್ಟು ಮಾತ್ರವಲ್ಲದೆ 25 ದಿನಗಳ ಕಾಲ ಮತಯಂತ್ರಗಳನ್ನು ಭದ್ರವಾಗಿಡುವುದು ಸವಾಲಿನ ಕೆಲಸ. ಇಷ್ಟೊಂದು ದಿನಗಳ ಕಾಲ ಕಾವಲಿನ ವೇಳೆ ಸ್ವಲ್ಪ ಗಮನ ತಪ್ಪಿದರೂ ಮತಯಂತ್ರಗಳನ್ನು ಇರಿಸಿರುವ ಸ್ಟ್ರಾಂಗ್ ರೂಮ್‌ಗಳಿಗೆ ಅನಧಿಕೃತ ಪ್ರವೇಶ ಅಥವಾ ಯಂತ್ರಗಳ ಅದಲು-ಬದಲು ನಡೆಯಬಹುದು ಎಂಬ ಶಂಕೆಯೂ ಇದೆ. ಅಷ್ಟಕ್ಕೂ EVM ಹ್ಯಾಕಿಂಗ್ ಮಾಡಲು ಇಷ್ಟೊಂದು ದಿನಗಳು ಸಾಕಲ್ಲವೇ?

ಇಷ್ಟು ದೀರ್ಘ ಅವಧಿಯಲ್ಲಿ ಸ್ಟ್ರಾಂಗ್ ರೂಮ್‌ಗಳ ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕೆಲಸ ಮಾಡುತ್ತವೆಯೇ? ವಿದ್ಯುತ್ ವ್ಯತ್ಯಯದ ನೆಪದಲ್ಲಿ ಏನಾದರೂ ಅಕ್ರಮ ನಡೆಯಬಹುದೇ? ಎಂಬ ಪ್ರಶ್ನೆಗಳೂ ಎದ್ದಿವೆ. ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಚುನಾವಣೆ ಹಲವು ಹಂತಗಳಲ್ಲಿ ನಡೆಯುವುದರಿಂದ, ಎಲ್ಲಾ ಹಂತಗಳ ಮತ ಎಣಿಕೆಯನ್ನು ಒಂದೇ ದಿನ ಇರಿಸಲಾಗಿದೆ. ಆದರೆ, ಕೇರಳದಲ್ಲಿ ಏಪ್ರಿಲ್ 9ಕ್ಕೆ ಮತದಾನ ಮುಗಿಯುವುದರಿಂದ, ಇಷ್ಟು ದಿನಗಳ ಕಾಲ ಕಾಯುವುದು ಅನಗತ್ಯ ಎಂಬುದು ವಿಪಕ್ಷಗಳ ವಾದ. ಅಷ್ಟು ಮಾತ್ರವಲ್ಲದೆ ಮತಯಂತ್ರಗಳನ್ನು ಕಾಯಲು ಸಾವಿರಾರು ಭದ್ರತಾ ಸಿಬ್ಬಂದಿಯನ್ನು ತಿಂಗಳ ಕಾಲ ಬಳಸಿಕೊಳ್ಳುವುದು ಆಡಳಿತಾತ್ಮಕವಾಗಿ ಹೊರೆಯಲ್ಲವೇ?

ಇನ್ನು ಕೇರಳದಲ್ಲಿ 2021ರ ಚುನಾವಣೆಯಲ್ಲೂ ಇದೇ ರೀತಿಯ ಸುದೀರ್ಘ ಅಂತರವಿತ್ತು. ಆಗಲೂ ಕೇರಳದಲ್ಲಿ ಏಪ್ರಿಲ್ 6ಕ್ಕೆ ಮತದಾನ ಮುಗಿದು ಮೇ 2ರಂದು ಫಲಿತಾಂಶ ಬಂದಿತ್ತು. ಈ ವಿಳಂಬವು “ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧ” ಎಂದು ವಿಪಕ್ಷಗಳು ಹೇಳಿದ್ದವು. ಈ ಚುನಾವಣೆ ವೇಳೆಯೂ ಕಳೆದ ಬಾರಿಯಂತೆ ಮತದಾನಕ್ಕೂ ಫಲಿತಾಂಶಕ್ಕೂ ದೀರ್ಘ ಅಂತರವಿದೆ. ಅಷ್ಟಕ್ಕೂ ಜನರಲ್ಲಿರುವ ಅನಿಶ್ಚಿತತೆ ಮತ್ತು ವಂಚನೆಯ ಆತಂಕವನ್ನು ದೂರಮಾಡುವ ಜವಾಬ್ದಾರಿಯನ್ನು ಚುನಾವಣಾ ಆಯೋಗ ಹೊರುತ್ತದೆಯೇ?

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...