‘ಕೇರಳ’ವನ್ನು ‘ಕೇರಳಂ’ ಎಂದು ಹೆಸರು ಬದಲಾಯಿಸಲು ಕೇಂದ್ರಕ್ಕೆ ಒತ್ತಾಯಿಸುವ ನಿರ್ಣಯ ಅಂಗೀಕಾರ

Date:

ರಾಜ್ಯದ ಅಧಿಕೃತ ಹೆಸರನ್ನು ‘ಕೇರಳ’ದಿಂದ ‘ಕೇರಳಂ’ ಎಂದು ಎಲ್ಲ ಭಾಷೆಗಳಲ್ಲಿ ಬದಲಾಯಿಸುವಂತೆ ಕೇಂದ್ರಕ್ಕೆ ಮನವಿ ಮಾಡುವ ನಿರ್ಣಯವನ್ನು ಕೇರಳ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿತು.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸದನದಲ್ಲಿ ನಿರ್ಣಯವನ್ನು ಮಂಡಿಸಿದರು ಮತ್ತು ಸರ್ವ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದರು.

ನಿರ್ಣಯ ಮಂಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ”ಮಲಯಾಳಂನಲ್ಲಿ ನಮ್ಮ ರಾಜ್ಯದ ಹೆಸರು ಕೇರಳಂ. ನವೆಂಬರ್ 1, 1956 ರಂದು ದೇಶದಲ್ಲಿ ಭಾಷಾವಾರು ರೀತಿಯಲ್ಲಿ ರಾಜ್ಯಗಳನ್ನು ರಚಿಸಲಾಯಿತು. ಅದೇ ದಿನ ಕೇರಳದ ರಚನೆಯ ದಿನ. ಎಲ್ಲ ಮಲಯಾಳಂ ಮಾತನಾಡುವ ಜನರಿಗೆ ಅಖಂಡ ಕೇರಳ ರಾಜ್ಯವನ್ನು ರಚಿಸುವುದು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬೇಡಿಕೆಯಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಈ ಸುದ್ದಿ ಓದಿದ್ದೀರಾ? ಪಶ್ಚಿಮ ಬಂಗಾಳ: ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ ಬಂಗಾಳಿ ಎರಡನೇ ಕಡ್ಡಾಯ ಭಾಷೆ

ಆದರೆ ಸಂವಿಧಾನದ ಮೊದಲ ಶೆಡ್ಯೂಲ್ ಅಡಿಯಲ್ಲಿ ನಮ್ಮ ರಾಜ್ಯದ ಹೆಸರನ್ನು ಕೇರಳ ಎಂದು ದಾಖಲಿಸಲಾಗಿದೆ. ಸಂವಿಧಾನದ ಎಂಟನೇ ಶೆಡ್ಯೂಲ್ ಅಡಿಯಲ್ಲಿ ಎಲ್ಲ ಅಧಿಕೃತ ಭಾಷೆಗಳಲ್ಲಿ ರಾಜ್ಯದ ಅಧಿಕೃತ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಅಗತ್ಯ ತಿದ್ದುಪಡಿಗಳನ್ನು ಮಾಡಲು ವಿಧಾನಸಭೆಯು ಕೇಂದ್ರ ಸರ್ಕಾರವನ್ನು ಸರ್ವಾನುಮತದಿಂದ ವಿನಂತಿಸುತ್ತದೆ” ಎಂದು ಅವರು ಹೇಳಿದರು.

“ರಾಜ್ಯದ ಹೆಸರನ್ನು ಕೇರಳ ಎಂದು ಬದಲಾಯಿಸಲು ಸಂವಿಧಾನದ 3 ನೇ ಪರಿಚ್ಛೇದದ ಅಡಿಯಲ್ಲಿ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈ ಸಭೆಯು ಕೇಂದ್ರ ಸರ್ಕಾರವನ್ನು ಸರ್ವಾನುಮತದಿಂದ ವಿನಂತಿಸುತ್ತಿದೆ. ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಉಲ್ಲೇಖಿಸಲಾದ ಎಲ್ಲ ಭಾಷೆಗಳಲ್ಲಿ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸಬೇಕೆಂದು ವಿಧಾನಸಭೆಯು ವಿನಂತಿಸುತ್ತದೆ ”ಎಂದು ಮುಖ್ಯಮಂತ್ರಿ ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಕಾಡೆ ಮಲಗುತ್ತಾ ಅಂಬಾನಿಯ ಜಿಯೋ?

5 ಸಾವಿರ ಕೋಟಿ ಖರ್ಚು ಮಾಡಿ ಮಗನ ಮದುವೆ ಮಾಡಿದ್ದ ಮುಖೇಶ್...

ಬಿಷ್ಣೋಯ್ ಎನ್‌ಕೌಂಟರ್‌ಗೆ 1,11,11,111 ರೂ. ಬಹುಮಾನ: ಕರ್ಣಿ ಸೇನೆ

ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆಯ ರುವಾರಿ ಬಂಧಿತ ಗ್ಯಾಂಗ್‌ಸ್ಟರ್ ಲಾರೆನ್ಸ್‌...

ಜಾರ್ಖಂಡ್ ಚುನಾವಣೆ | ಬಿಜೆಪಿಗೆ ಸೀಟು ಹಂಚಿಕೆ ಬಿಕ್ಕಟ್ಟು; ಮತ್ತೆ ಗೆಲ್ಲುವುದೇ ‘ಇಂಡಿಯಾ’?

ಜಾರ್ಖಂಡ್‌ ವಿಧಾನಸಭೆಗೆ ನವೆಂಬರ್ 13 ಮತ್ತು 20 ರಂದು ಮತದಾನ ನಡೆಯಲಿದೆ....