ಕೇರಳ ಮೂಲದ ಹಿಂದೂ ಸಂಸ್ಥೆಯಾದ ಶ್ರೀ ನಾರಾಯಣ ಮಾನವ ಧರ್ಮಂ ಟ್ರಸ್ಟ್, ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ದೇಶದಲ್ಲಿರುವ ಮುಸ್ಲಿಂ ಸಮುದಾಯದ ಅಸ್ತಿತ್ವಕ್ಕೆ ಕಾನೂನು ಬೆದರಿಕೆಯಾಗಿದೆ ಎಂದು ವಾದಿಸಿದೆ.
“ಎಲ್ಲಾ ವ್ಯಕ್ತಿಗಳು ಮತ್ತು ಸಮುದಾಯಗಳ ಯೋಗಕ್ಷೇಮದ ಪರಸ್ಪರ ಅವಲಂಬನೆ ಬಗ್ಗೆ ಶ್ರೀ ನಾರಾಯಣ ಗುರುಗಳು ಭೋದಿಸಿದ್ದಾರೆ. ಹಾಗಿರುವಾ ದೇಶದ ಮುಸ್ಲಿಂ ಸಮುದಾಯದ ಮೇಲೆ ಮತ್ತು ನಮ್ಮ ದೇಶದಲ್ಲಿ ಸಾಮಾಜಿಕ ನ್ಯಾಯದ ಮೇಲೆ ಒಟ್ಟಾರೆಯಾಗಿ ಪ್ರಭಾವ ಬೀರುವ ಪ್ರಶ್ನಾರ್ಹ ಕಾಯ್ದೆಯ ವಿನಾಶಕಾರಿ ಪರಿಣಾಮವನ್ನು ‘ಶ್ರೀ ನಾರಾಯಣ ಮಾನವ ಧರ್ಮಂ ಟ್ರಸ್ಟ್’ ನೋಡಿಯೂ ಏನೂ ಮಾಡದೆ ಸುಮ್ಮನಿರಲು ಸಾಧ್ಯವಿಲ್ಲ” ಎಂದು ಹೇಳಿದೆ.
ಇದನ್ನು ಓದಿದ್ದೀರಾ? ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ
ಇನ್ನು ಸುಪ್ರೀಂ ಕೋರ್ಟ್ ಇಂದು ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ. ಈಗಾಗಲೇ ವಕ್ಫ್ ವಿರುದ್ಧವಾಗಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ.
ಇವೆಲ್ಲವುದರ ನಡುವೆ ವಕ್ಫ್ (ತಿದ್ದುಪಡಿ) ಕಾಯ್ದೆ ಮುಸ್ಲಿಮರ ನಂಬಿಕೆ ಮತ್ತು ಆರಾಧನೆಯ ವಿಷಯಗಳ ಬಗ್ಗೆ ಯಾವುದೇ ಬದಲಾವಣೆಯನ್ನು ಹೊಂದಿಲ್ಲ. ಅವರ ಅಗತ್ಯ ಧಾರ್ಮಿಕ ಆಚರಣೆಗಳನ್ನು ಗೌರವಿಸುತ್ತದೆ ಎಂದು ಸರ್ಕಾರ ಹೇಳಿದೆ. ಹಾಗೆಯೇ ಕಾಯ್ದೆಯ ವಿರುದ್ಧದ ಅರ್ಜಿಗಳನ್ನು ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದೆ.
