ಕೇರಳ | ಹೈಕೋರ್ಟ್ ಮಧ್ಯಪ್ರವೇಶದ ಬಳಿಕವೂ ಕೋಮುದ್ವೇಷದ ಹೇಳಿಕೆ ಪುನರುಚ್ಚರಿಸಿದ ಬಿಜೆಪಿ ಅಭ್ಯರ್ಥಿ

Date:

ಕೇರಳ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಕೋಮುದ್ವೇಷದ ಭಾಷಣ ಮಾಡಿದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಬಿ ಗೋಪಾಲಕೃಷ್ಣನ್ ವಿರುದ್ಧ ದೂರು ದಾಖಲಿಸುವಂತೆ ಕೇರಳ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೆಶಿಸಿತ್ತು. ಹೈಕೋರ್ಟ್ ಮಧ್ಯಪ್ರವೇಶಿಸಿದ್ದರೂ ಬಿಜೆಪಿ ಅಭ್ಯರ್ಥಿ ಮತ್ತೆ ಅದೇ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.

- Advertisement -

ಈ ಹಿಂದೆ “ಗುರುವಾಯೂರಿನಲ್ಲಿ ಐದು ದಶಕಗಳಿಗೂ ಅಧಿಕ ಕಾಲದಿಂದ ಹಿಂದೂ ಶಾಸಕರನ್ನು ಆಯ್ಕೆ ಮಾಡಲಾಗಿಲ್ಲ” ಎಂದು ಗೋಪಾಲಕೃಷ್ಣನ್ ಭಾಷಣದ ವೇಳೆ ಹೇಳಿದ್ದರು. ಇದೀಗ ಮತ್ತೆ ಮುಸ್ಲಿಂ ಶಾಸಕರು ಪದೇ ಪದೇ ಆಯ್ಕೆಯಾಗುವುದನ್ನು ಪ್ರಶ್ನಿಸಿದ್ದಾರೆ. ಇದೀಗ ಚುನಾವಣಾ ಪ್ರಚಾರದ ಭಾಗವಾಗಿ ಹೋರ್ಡಿಂಗ್‌ನಲ್ಲಿ 1977ರಿಂದ ಕ್ಷೇತ್ರವನ್ನು ಪ್ರತಿನಿಧಿಸುವ ಎಲ್ಲ ಶಾಸಕರ ಪಟ್ಟಿಯನ್ನು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಕೋಮುವಾದಿ ಹೇಳಿಕೆ: ಬಿಜೆಪಿ ಅಭ್ಯರ್ಥಿ ವಿರುದ್ಧದ ದೂರು ಪರಿಗಣಿಸಲು ಇಸಿಐಗೆ ಕೇರಳ ಹೈಕೋರ್ಟ್ ಸೂಚನೆ

“ನೀವು ನೋಡುತ್ತಿಲ್ಲವೇ?” ಎಂಬ ಶೀರ್ಷಿಕೆಯಡಿಯಲ್ಲಿ ಈ ಪಟ್ಟಿ ಮಾಡಲಾಗಿದೆ. ಪೋಸ್ಟರ್‌ನಲ್ಲಿ ಎನ್‌ಡಿಎ ಚುನಾವಣಾ ಚಿಹ್ನೆಯ ಜೊತೆಗೆ ’50 ವರ್ಷಗಳ ನಿರ್ಲಕ್ಷ್ಯ. ಇದು ಬದಲಾಗಬೇಕು! ಮತ್ತು ಇದನ್ನು ಬದಲಾಯಿಸಲು ವಕೀಲ ಬಿ. ಗೋಪಾಲಕೃಷ್ಣನ್ ಆಯ್ಕೆಯಾಗಬೇಕು’ ಎಂದೂ ಹಾಕಲಾಗಿದೆ.

ಸದ್ಯ ಹೋರ್ಡಿಂಗ್‌ಗಳು ಧರ್ಮವನ್ನು ಸ್ಪಷ್ಟವಾಗಿ ಉಲ್ಲೇಖಿಸದಿದ್ದರೂ, ಪ್ರಚಾರವು ಹಿಂದಿನ ಪ್ರತಿನಿಧಿಗಳ ಧಾರ್ಮಿಕ ಗುರುತನ್ನು ಸೂಕ್ಷ್ಮವಾಗಿ ಎತ್ತಿ ತೋರಿಸುವಂತೆ ಮಾಡಲಾಗುತ್ತಿದೆ. ಕೋಮುದ್ವೇಷ ಹಬ್ಬಿಸಿ ಗೆಲ್ಲಲು ಪ್ರಯತ್ನಿಸಲಾಗುತ್ತಿದೆ ಎಂಬುದು ಸದ್ಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗೋಪಾಲಕೃಷ್ಣನ್ ಅವರ ಹೇಳಿಕೆಗಳನ್ನು ಇಸ್ಲಾಮೋಫೋಬಿಕ್ ಎಂದು ವ್ಯಾಪಕವಾಗಿ ಟೀಕಿಸಲಾಗಿದೆ.

ಗುರುವಾಯೂರು ದೇವಸ್ಥಾನ ಪೊಲೀಸ್ ಠಾಣೆಯಲ್ಲಿ ಗೋಪಾಲಕೃಷ್ಣನ್ ವಿರುದ್ಧ 2023ರ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 192 ಮತ್ತು 1952 ಮತ್ತು 1988ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125 ರ ಅಡಿಯಲ್ಲಿ ಎಫ್ಐಆರ್ ಈಗಾಗಲೇ ದಾಖಲಾಗಿದೆ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕಲಾಗಿದೆ. ಹಾಗೆಯೇ ಗೋಪಾಲಕೃಷ್ಣನ್ ವಿರುದ್ಧ ಸಲ್ಲಿಸಲಾದ ದೂರನ್ನು ಪರಿಗಣಿಸುವಂತೆ ಕೇರಳ ಹೈಕೋರ್ಟ್ ಮಾರ್ಚ್ 27ರಂದು ಭಾರತದ ಮುಖ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ. ಅದಾದ ಬಳಿಕವೂ ಬಿಜೆಪಿ ಅಭ್ಯರ್ಥಿ ಮತ್ತೆ ಅದೇ ಕೋಮು ಪ್ರಚಾರವನ್ನು ಮುಂದುವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...