ಕೇರಳ ಮುಖ್ಯಮಂತ್ರಿ ತೆರಳುತ್ತಿದ್ದ ಕಾರು – ಬೆಂಗಾವಲು ವಾಹನಗಳ ಮಧ್ಯೆ ಸರಣಿ ಅಪಘಾತ

Date:

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಯಾಣಿಸುತ್ತಿದ್ದ ವಾಹನವೂ ಸೇರಿದಂತೆ ಅವರ ಬೆಂಗಾವಲು ವಾಹನಗಳು ಸರಣಿ ಅಪಘಾತಕ್ಕೀಡಾಗಿರುವ ಘಟನೆ ಕೇರಳದ ತಿರುವನಂತಪುರಂ ಬಳಿ ಸೋಮವಾರ ಸಂಜೆ ನಡೆದಿದೆ.

- Advertisement -

ಘಟನೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಪಾಯದಿಂದ ಪಾರಾಗಿದ್ದಾರೆ. ಅಲ್ಲದೆ, ಭದ್ರತಾ ಸಿಬ್ಬಂದಿಗಳಿಗೂ ಯಾವುದೇ ಅಪಾಯವಾಗಿಲ್ಲ. ಆದರೆ, ವಾಹನಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪಿಣರಾಯಿ ವಿಜಯನ್ ಅವರು ಕೊಟ್ಟಾಯಂನಿಂದ ತಿರುವನಂತಪುರಂಗೆ ತೆರಳುತ್ತಿದ್ದರು. ಈ ವೇಳೆ, ಸ್ಕೂ ಟಿಯಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಬಲಕ್ಕೆ ತಮ್ಮ ವಾಹನವನ್ನು ತಿರುಗಿಸಿದ್ದಾರೆ. ದಿಡೀರನೇ ಅಡ್ಡ ಬಂದ ಮಹಿಳೆಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಪಿಣರಾಯಿ ವಿಜಯನ್ ಅವರ ಬೆಂಗಾವಲು ವಾಹನದ ಚಾಲಕ ಬ್ರೇಕ್‌ ಹಾಕಿದ್ದು, ಹಿಂದಿನಿಂದ ಬಂದ ವಾಹನಗಳು ಪರಸ್ಪರ ಡಿಕ್ಕಿಯಾಗಿವೆ. ಎಲ್ಲ ವಾಹನಗಳ ಚಾಲಕರೂ ಘಟನೆಯನ್ನು ಅರಿತು ಬ್ರೇಕ್ ಹಾಕಿದ್ದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆಯಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಘಟನೆಯ ಬಳಿಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬೇರೆ ವಾಹನದಲ್ಲಿ ತಿರುವನಂತಪುರಂಗೆ ತೆರಳಿದರು. ಘಟನೆಯ ದೃಶ್ಯ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...