ಕೇರಳ | ಸಾಲದ ಹೊರೆ; ಪ್ರಶಸ್ತಿ ವಿಜೇತ ರೈತ ಆತ್ಮಹತ್ಯೆ

Date:

ಸಾಲದ ಹೊರೆಯಿಂದಾಗಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಚೆರುಪುಳದಲ್ಲಿ ನಡೆದಿದೆ. ಅವರು ‘ಉತ್ತಮ ರೈತ ಪ್ರಶಸ್ತಿ’ಯನ್ನು ಪಡೆದಿದ್ದರು.

- Advertisement -

ಮೃತ ರೈತನನ್ನು ಚೆರುಪುಳದಲ್ಲಿರುವ ಇಡವರಂ ಮೂಲದ ಅಂಬಟ್ಟು ಎಲಿಯಾಸ್ ಎಂದು ಹೆಸರಿಸಲಾಗಿದೆ. ಅವರು ತಮ್ಮ ಜಮೀನಿನಲ್ಲಿ ಕೀಟನಾಶಕ ಸೇವಿಸಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಘಿದ್ದು, ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ರೈತ ಅಂಬಟ್ಟು ಅವರು ಹಲವಾರು ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಆರ್ಥಿಕ ಹೊರೆ ಅನುಭವಿಸುತ್ತಿದ್ದರು. ಆದ್ದರಿಂದಲೇ, ಅವರು ಸಾವಿನ ಹಾದಿ ಹಿಡಿದ್ದಾರೆ ಎಂದು ಹೇಳಲಾಗಿದೆ.

ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಸುಮಾರು ನಾಲ್ಕು ದಶಕಗಳಿಂದ ಗುತ್ತಿಗೆ ಪಡೆದ ಭೂಮಿಯಲ್ಲಿ ಅಂಬಟ್ಟು ತರಕಾರಿಗಳನ್ನು ಬೆಳೆಯುತ್ತಿದ್ದರು. ಇತ್ತೀಚೆಗೆ, ಅವರು ಸುಮಾರು 2,500 ಬಾಳೆ ಸಸಿಗಳನ್ನು ನೆಟ್ಟಿದ್ದರು. ಆದರೆ, ಸರಿಯಾದ ಇಳುವರಿ ಬಾರದೆ, ಹಾಕಿದ್ದ ಬಂಡವಾಳವೂ ಕೈಗೂಡಿರಲಿಲ್ಲ ಎಂದು ತಿಳಿದುಬಂದಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...