ತನ್ನ ಮದುವೆ ನಡುವೆ ಕೇಟರಿಂಗ್ ಸಿಬ್ಬಂದಿಗೆ ಪ್ರಥಮ ಚಿಕಿತ್ಸೆ ನೀಡಿದ ಕೇರಳದ ವೈದ್ಯೆ: ವಿಡಿಯೋ ವೈರಲ್

Date:

ಕೇಟರಿಂಗ್ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡಿರುವುದನ್ನು ತಿಳಿದು ತನ್ನ ಮದುವೆ ನಿಲ್ಲಿಸಿ ಕೇಟರಿಂಗ್ ಸಿಬ್ಬಂದಿಗೆ ನವವಿವಾಹಿತ ವೈದ್ಯೆಯೊಬ್ಬರು ಪ್ರಥಮ ಚಿಕಿತ್ಸೆ ನೀಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವೈರಲ್ ಆಗಿದೆ.

- Advertisement -

ಕಣ್ಣೂರಿನ ಪಾನೂರ್ ಮೂಲದ ಡಾ. ಶಿರಿನ್ ಸುಬೈರ್ ಅವರು ಡಾ. ರಿಜಾಜ್ ಅವರೊಂದಿಗೆ ಮದುವೆ ಆಗಿದ್ದಾರೆ. ಮದುವೆ ಸಮಾರಂಭದಲ್ಲಿ ಕೇಟರಿಂಗ್ ಮಹಿಳೆರು ಅಸ್ವಸ್ಥರಾಗಿದ್ದಾರೆ. ಒಬ್ಬರ ಮೂಗಿನಿಂದ ರಕ್ತಸ್ರಾವವಾದರೆ, ಇನ್ನೊಬ್ಬರು ತಲೆತಿರುಗಿ ಬಿದ್ದಿದ್ದಾರೆ. ಈ ಮಾಹಿತಿ ತಿಳಿದ ಶಿರಿನ್‌ ಕೂಡಲೇ ಪ್ರಥಮ ಚಿಕಿತ್ಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನೂ ಓದಿ: ಚಿಂತಾಮಣಿ | ಕರ್ತವ್ಯನಿರತ ವೈದ್ಯೆಯ ನಿಂದನೆ; ಎಫ್ಐಆರ್ ದಾಖಲು

“ನಾನು ವೈದ್ಯ ಎಂದು ಎಲ್ಲರಿಗೂ ತಿಳಿದಿತ್ತು. ಆದ್ದರಿಂದ ಯಾರೋ ಒಬ್ಬರು ನನ್ನ ಬಳಿ ನೋಡುವಂತೆ ಹೇಳಿದರು. ನಾನು ವೈದ್ಯೆಯಾಗಿ ಏನು ಅಗತ್ಯವಿರುವುದನ್ನು ಮಾಡಬೇಕೋ ಅದನ್ನು ಮಾಡಿದ್ದೇನೆ ಅಷ್ಟೇ” ಎಂದು ಶಿರಿನ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

“ಇಂತಹ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡುವುದು ಮತ್ತು ನಂತರ ಆಸ್ಪತ್ರೆಗೆ ಕರೆದೊಯ್ಯುವುದು ಅತ್ಯಗತ್ಯ, ಇದು ನಮ್ಮ ಕರ್ತವ್ಯ. ಇದು ಖಂಡಿತವಾಗಿಯೂ ದೊಡ್ಡ ವಿಷಯವಲ್ಲ. ಯಾರಾದರೂ ರಸ್ತೆಯಲ್ಲಿ ಕುಸಿದು ಬೀಳುವುದನ್ನು ಅಥವಾ ಮೂರ್ಛೆ ಹೋಗುವುದನ್ನು ನಾವು ನೋಡಿದರೆ, ಪ್ರತಿಕ್ರಿಯಿಸುವುದು ನಮ್ಮ ಕರ್ತವ್ಯ. ಅದು ನಮ್ಮ ಕೆಲಸ. ನಾವು ಎಲ್ಲಿಯಾದರೂ ಈ ಕೆಲಸ ಮಾಡಲೇಬೇಕು. ನಂತರ ಅಸ್ವಸ್ಥರನ್ನು ಆಸ್ಪತ್ರೆಗೆ ಸಾಗಿಸಬೇಕು” ಎಂದು ಶಿರಿನ್ ಹೇಳಿದ್ದಾರೆ.

ಶಿರಿನ್ ಒಟ್ಟಪಾಲಂನ ವಲ್ಲುವನಾಡ್ ಆಸ್ಪತ್ರೆಯಲ್ಲಿ ತುರ್ತು ವೈದ್ಯಕೀಯ ಘಟಕದಲ್ಲಿ ವರ್ಷದ ಎಂಡಿ ವ್ಯಾಸಂಗ ಮಾಡುತ್ತಿದ್ದಾರೆ. ಮೂಗಿನಿಂದ ರಕ್ತಸ್ರಾವವಾಗುತ್ತಿದ್ದ ಮಹಿಳೆಗೆ, ಶಿರಿನ್ ಮುಂದಕ್ಕೆ ಬಾಗಿ ಮೂಗಿನ ಮೃದುವಾದ ಭಾಗವನ್ನು 10 ರಿಂದ 15 ನಿಮಿಷಗಳ ಕಾಲ ಬಟ್ಟೆಯಿಂದ ಹಿಡಿದಿದ್ದು, ಬಾಯಿಯ ಮೂಲಕ ಉಸಿರಾಡುವಂತೆ ಸೂಚಿಸಿದ್ದಾರೆ. ಮೂರ್ಛೆ ಹೋಗುತ್ತಿದ್ದ ಎರಡನೇ ಮಹಿಳೆಯ ಕಾಲುಗಳನ್ನು ಮೇಲಕ್ಕೆತ್ತಿ ಮಲಗಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...