ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

Date:

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು ನಾಮಪತ್ರದೊಂದಿಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಮಂಜೇಶ್ವರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕ ಕೆ. ಸುರೇಂದ್ರನ್ ಕೂಡಾ ಅಫಿಡವಿಟ್ ಸಲ್ಲಿಸಿದ್ದು, ಅವರ ವಿರುದ್ಧ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ತಿಳಿದುಬಂದಿದೆ.

- Advertisement -

ಸುರೇಂದ್ರನ್ ವಿರುದ್ಧದ 242 ಪ್ರಕರಣಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳಲ್ಲಿ ಭಾಗಿಯಾದಾಗ ದಾಖಲಾದ ಪ್ರಕರಣಗಳಾಗಿದೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ. 28 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಹೊಂದಿದ್ದಾರೆ. ಒಂಬತ್ತು ಲಕ್ಷ ರೂ.ಗಿಂತ ಹೆಚ್ಚಿನ ಸಾಲವನ್ನು ಹೊಂದಿದ್ದಾರೆ ಎಂದು ಘೋಷಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಕ್ರೈಸ್ತ ಸಮುದಾಯದ ಮತಗಳು ‘ಗೇಮ್‌ ಚೇಂಜರ್’ ಆಗಬಹುದೇ?

ಕಾಂಜಿರಪಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೇಂದ್ರ ರಾಜ್ಯ ಸಚಿವ ಜಾರ್ಜ್ ಕುರಿಯನ್ ವಿರುದ್ದ ಕೇವಲ ಒಂದು ಕ್ರಿಮಿನಲ್ ಪ್ರಕರಣವಿದೆ. 2014ರಲ್ಲಿ ತಿರುವನಂತಪುರದಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂದರ್ಭದಲ್ಲಿ ದಾಖಲಾದ ಪ್ರಕರಣವಿದು ಎನ್ನಲಾಗಿದೆ. ಕುರಿಯನ್ ತಮ್ಮ ಅಫಿಡವಿಟ್‌ನಲ್ಲಿ 1.74 ಕೋಟಿ ರೂ.ಗಳಿಗೂ ಹೆಚ್ಚು ಚರ ಮತ್ತು ಸ್ಥಿರ ಆಸ್ತಿಗಳನ್ನು ಹೊಂದಿರುವುದಾಗಿ, ಎರಡು ಲಕ್ಷ ರೂ.ಗಳಷ್ಟು ಸಾಲ ಇರುವುದಾಗಿ ಘೋಷಿಸಿದ್ದಾರೆ.

ಕಜಕೂಟಂ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ವಿರುದ್ಧ ಎಂಟು ಕ್ರಿಮಿನಲ್ ಪ್ರಕರಣಗಳಿವೆ. 20 ಲಕ್ಷ ರೂ.ಗಳಿಗೂ ಹೆಚ್ಚು ಮೌಲ್ಯದ ಚರಾಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ತಮ್ಮ ಬಳಿ ಯಾವುದೇ ಸ್ಥಿರ ಆಸ್ತಿ ಇಲ್ಲ ಎಂದು ಅಫಿಡವಿಟ್‌ ಮೂಲಕ ಹೇಳಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ ಚುನಾವಣೆಗೂ ಮುನ್ನ ಪಕ್ಷಗಳ ಸಂಕಟ: ಬಂಡಾಯ- ಪಕ್ಷಾಂತರ- ಉಚ್ಚಾಟನೆ ಸಂಕಷ್ಟ

ಪಾಲಕ್ಕಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ನಾಯಕಿ ಶೋಭಾ ಸುರೇಂದ್ರನ್ ವಿರುದ್ಧ 35 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಅವುಗಳಲ್ಲಿ ಹೆಚ್ಚಿನವು ವಿವಿಧ ಪ್ರತಿಭಟನೆಗಳಲ್ಲಿ ಹಾಜರಾಗಿದ್ದಾಗ ದಾಖಲಾಗಿರುವಂತದ್ದು ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಶೋಭಾ ತಮ್ಮ ಅಫಿಡವಿಟ್‌ನಲ್ಲಿ 1.94 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಚರಾಸ್ತಿ ಮತ್ತು ಸ್ಥಿರ ಆಸ್ತಿಯನ್ನು ಘೋಷಿಸಿದ್ದಾರೆ.

ವಟ್ಟಿಯೂರ್ಕಾವು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಕೌನ್ಸಿಲರ್ ಮತ್ತು ಮಾಜಿ ಡಿಜಿಪಿ ಆರ್. ಶ್ರೀಲೇಖಾ ಅವರು ತಮ್ಮ ಅಫಿಡವಿಟ್‌ನಲ್ಲಿ ಐದು ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಚರಾಸ್ತಿ ಮತ್ತು ಸ್ಥಿರ ಆಸ್ತಿಯನ್ನು ಘೋಷಿಸಿದ್ದಾರೆ. ಶ್ರೀಲೇಖಾ ವಿರುದ್ಧ ಪೋಕ್ಸೊ ಪ್ರಕರಣದ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸಿದ್ದಕ್ಕೆ ಒಂದು ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....