ಕೋಮುವಾದಿ ಹೇಳಿಕೆ: ಬಿಜೆಪಿ ಅಭ್ಯರ್ಥಿ ವಿರುದ್ಧದ ದೂರು ಪರಿಗಣಿಸಲು ಇಸಿಐಗೆ ಕೇರಳ ಹೈಕೋರ್ಟ್ ಸೂಚನೆ

Date:

ಕೇರಳ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಬಿ ಗೋಪಾಲಕೃಷ್ಣನ್ ವಿರುದ್ಧ ಸಲ್ಲಿಸಲಾದ ದೂರನ್ನು ಪರಿಗಣಿಸುವಂತೆ ಕೇರಳ ಹೈಕೋರ್ಟ್ ಶುಕ್ರವಾರ (ಮಾರ್ಚ್ 27) ಭಾರತದ ಮುಖ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ.

- Advertisement -

ಗೋಪಾಲಕೃಷ್ಣನ್ ಕೋಮುವಾದಿ ಭಾಷಣದ ವಿರುದ್ಧ ಕೇರಳ ವಿದ್ಯಾರ್ಥಿ ಒಕ್ಕೂಟದ (ಕೆಎಸ್‌ಯು) ನಾಯಕ ಗೋಕುಲ್ ಸಲ್ಲಿಸಿದ ರಿಟ್ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದೆ. ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಎರಡು ತಿಂಗಳಲ್ಲಿ ಈ ಸಂಬಂಧ ತನಿಖೆ ಪೂರ್ಣಗೊಳಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಇದನ್ನು ಓದಿದ್ದೀರಾ? ಕೇರಳ | ಕೋಮು ವಿಭಜನೆ ಪ್ರಚೋದಿಸುವ ಭಾಷಣ; ಬಿಜೆಪಿ ಅಭ್ಯರ್ಥಿ ವಿರುದ್ಧ ದೂರು ದಾಖಲು

“ಗುರುವಾಯೂರಿನಲ್ಲಿ ಐದು ದಶಕಗಳಿಗೂ ಅಧಿಕ ಕಾಲದಿಂದ ಹಿಂದೂ ಶಾಸಕರನ್ನು ಆಯ್ಕೆ ಮಾಡಲಾಗಿಲ್ಲ” ಎಂದು ಗೋಪಾಲಕೃಷ್ಣನ್ ಭಾಷಣದ ವೇಳೆ ಹೇಳಿದ್ದಾರೆ. ಹಾಗೆಯೇ ಎಡ ಪ್ರಜಾಸತ್ತಾತ್ಮಕ ರಂಗ ಮತ್ತು ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ ಎರಡೂ ಕ್ಷೇತ್ರದಲ್ಲಿ ಹಿಂದೂ ಸಮುದಾಯದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದನ್ನು ಪ್ರಜ್ಞಾಪೂರ್ವಕವಾಗಿ ತಪ್ಪಿಸಿದೆ ಎಂದು ಆರೋಪಿಸಿದ್ದಾರೆ.

ಇನ್ನು ಗುರುವಾಯೂರಪ್ಪನ ಭೂಮಿಯನ್ನು ಮರಳಿ ಪಡೆಯುವ ಜವಾಬ್ದಾರಿ ನಮ್ಮದು ಎಂದು ಘೋಷಿಸಿಕೊಂಡರು. ದೇವರ ನಾಡನ್ನು ಹೆಸರಿಸದ ಶಕ್ತಿಗಳು ವರ್ಷಗಳಿಂದ ನಿಯಂತ್ರಿಸುತ್ತಿದೆ ಎಂದರು. ಪ್ರಚಾರದ ವೇಳೆ ಧರ್ಮವನ್ನು ನಡುವೆ ತಂದಿದ್ದಕ್ಕೆ ಸದ್ಯ ಇತರೆ ಪಕ್ಷಗಳ ವಾಗ್ದಾಳಿಗೆ ಬಿಜೆಪಿ ಗುರಿಯಾಗಿದೆ. ಹಾಗೆಯೇ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ.

ಗುರುವಾಯೂರು ದೇವಸ್ಥಾನ ಪೊಲೀಸ್ ಠಾಣೆಯಲ್ಲಿ ಗೋಪಾಲಕೃಷ್ಣನ್ ವಿರುದ್ಧ 2023ರ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 192 ಮತ್ತು 1952 ಮತ್ತು 1988ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125 ರ ಅಡಿಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಎಫ್ಐಆರ್ ಈಗಾಗಲೇ ದಾಖಲಾಗಿದೆ ಮತ್ತು ವಿಡಿಯೋವನ್ನು ಸಾಮಾಜಿಕ ಜಾಲತಾಣದಿಂದ ತೆಗೆದುಹಾಕಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...