ಕೇರಳ | ಚೂಡಿದಾರ್ ಧರಿಸಿ ಬಂದ ಮುಖ್ಯಶಿಕ್ಷಕಿಗೆ ಗೇಟ್ ಬಂದ್ ಮಾಡಿದ ಶಾಲಾಡಳಿತ

Date:

ಸೀರೆಯ ಬದಲಿಗೆ ಚೂಡಿದಾರ್ ಧರಿಸಿ ಶಾಲೆಗೆ ಬಂದರು ಎಂಬ ಕಾರಣಕ್ಕಾಗಿ ಅನುದಾನಿತ ಶಾಲೆಯೊಂದರ ಮುಖ್ಯಶಿಕ್ಷಕಿಯನ್ನು ಶಾಲಾ ಆವರಣದೊಳಗೆ ಪ್ರವೇಶಿಸದಂತೆ ತಡೆಯಲಾದ ಘಟನೆ ಕೇರಳದ ಕೊಟ್ಟಾರಕ್ಕರದಲ್ಲಿ ನಡೆದಿದೆ.

- Advertisement -

ಈ ಘಟನೆ ಶಿಕ್ಷಕರ ಸಂಘಟನೆಗಳ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದು, ಅಂತಿಮವಾಗಿ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

​ಕೊಟ್ಟಾರಕ್ಕರ ಸಮೀಪದ ನೆಡುವತ್ತೂರಿನ ಇವಿಎಚ್‌ಎಸ್‌ಎಸ್ ಶಾಲೆಯಲ್ಲಿ ಬೆಳಿಗ್ಗೆ 8.45ರ ಸುಮಾರಿಗೆ ಈ ಘಟನೆ ನಡೆದಿದೆ. ಶಾಲೆಯ ಮುಖ್ಯಶಿಕ್ಷಕಿ ಸಿಂಧು ಎಸ್. ನಾಯರ್ ಅವರನ್ನು ಶಾಲಾ ಮ್ಯಾನೇಜರ್ ಕೆ. ಸುರೇಶ್ ಕುಮಾರ್ ಅವರ ಸೂಚನೆಯ ಮೇರೆಗೆ ಗೇಟ್ ಬಳಿಯೇ ತಡೆಹಿಡಿಯಲಾಯಿತು. ಶಿಕ್ಷಕಿಯರು ಚೂಡಿದಾರ್ ಧರಿಸಲು ಅವಕಾಶ ನೀಡಿ ಸರ್ಕಾರಿ ಆದೇಶವಿದ್ದರೂ, ಮ್ಯಾನೇಜರ್ ಮಾತ್ರ ಶಾಲೆಗೆ ಸೀರೆಯನ್ನೇ ಉಟ್ಟು ಬರಬೇಕೆಂದು ಪಟ್ಟು ಹಿಡಿದಿದ್ದರು ಎನ್ನಲಾಗಿದೆ.

ಮುಖ್ಯಶಿಕ್ಷಕಿ ಸಿಂಧು ಅವರು ಶಾಲೆಯ ಬಿಸಿಯೂಟ ಯೋಜನೆಗೆ ಅಗತ್ಯವಿರುವ ಮೊಟ್ಟೆ ಹಾಗೂ ಇತರೆ ಸಾಮಗ್ರಿಗಳನ್ನು ಆಟೋರಿಕ್ಷಾದಲ್ಲಿ ತಂದಿದ್ದರು. ಅವರು ಚೂಡಿದಾರ್ ಧರಿಸಿದ್ದನ್ನು ಗಮನಿಸಿದ ಭದ್ರತಾ ಸಿಬ್ಬಂದಿ, ಮ್ಯಾನೇಜರ್ ಆದೇಶದಂತೆ ಗೇಟ್ ತೆಗೆಯಲು ನಿರಾಕರಿಸಿದರು. ಇದನ್ನು ಪ್ರತಿಭಟಿಸಿ ಸಿಂಧು ಅವರು ಶಾಲಾ ಗೇಟ್ ಮುಂಭಾಗದಲ್ಲೇ ಸಾಮಗ್ರಿಗಳೊಂದಿಗೆ ಕುಳಿತು ಧರಣಿ ನಡೆಸಿದರು. ವಿದ್ಯಾರ್ಥಿಗಳು ಮತ್ತು ಇತರೆ ಸಿಬ್ಬಂದಿ ಬಂದರೂ ಅವರಿಗೆ ಪ್ರವೇಶ ನಿರಾಕರಿಸಲಾಗಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇಸ್ರೇಲ್ ಸಂಗದಲ್ಲಿ ‘ಶಿಕಾರಿ’- ಪ್ಯಾಲೆಸ್ತೀನ್ ಜೊತೆ ‘ಪರಾರಿ’; ಕಪಟ ನಾಟಕವಲ್ಲವೇ ಮೋದೀಜಿ?

​ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಅಜಿತ್ ಕುಮಾರ್ ಹಾಗೂ ಪೊಲೀಸರು ಮಧ್ಯಪ್ರವೇಶಿಸಿ ಮಾತುಕತೆ ನಡೆಸಿದರು. ನಂತರ ಪೊಲೀಸರ ಭದ್ರತೆಯಲ್ಲಿ ಮುಖ್ಯಶಿಕ್ಷಕಿಯನ್ನು ಶಾಲಾ ಕಚೇರಿಗೆ ಕರೆದೊಯ್ಯಲಾಯಿತು.

ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಮಾನಿಸಿದ ಆರೋಪದಡಿ ಮ್ಯಾನೇಜರ್ ಸುರೇಶ್ ಕುಮಾರ್ ಮತ್ತು ಹಂಗಾಮಿ ಭದ್ರತಾ ಸಿಬ್ಬಂದಿ ಶಶಾಂಕನ್ ವಿರುದ್ಧ ಸಿಂಧು ಅವರು ಕೊಟ್ಟಾರಕ್ಕರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳಿಗೂ ದೂರು ನೀಡುವುದಾಗಿ ತಿಳಿಸಿದ್ದಾರೆ. ಸದ್ಯಕ್ಕೆ ಲಿಖಿತ ದೂರು ಬಂದ ನಂತರ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಕಚೇರಿ ತಿಳಿಸಿದೆ.
​
ಮ್ಯಾನೇಜರ್ ತಮಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಸಿಂಧು ಆರೋಪಿಸಿದ್ದಾರೆ. ​ಎರಡು ತಿಂಗಳ ಹಿಂದೆ ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುವಾಗಲೂ ಇದೇ ರೀತಿ ಗೇಟ್ ಬಳಿ ತಡೆಯಲಾಗಿತ್ತು. ​ಕ್ಷುಲ್ಲಕ ಕಾರಣಗಳಿಗೆ ಪದೇ ಪದೇ ಮೆಮೋ ನೀಡಲಾಗುತ್ತಿದೆ.

​ಈ ಹಿಂದೆ ಮಹಿಳಾ ಸಿಬ್ಬಂದಿಯೊಬ್ಬರ ಜತೆ ಅನುಚಿತವಾಗಿ ವರ್ತಿಸಿದ ಪ್ರಕರಣದಲ್ಲಿ ಮ್ಯಾನೇಜರ್‌ಗೆ ನ್ಯಾಯಾಲಯ ದಂಡ ವಿಧಿಸಿತ್ತು ಎಂದು ಅವರು ಉಲ್ಲೇಖಿಸಿದ್ದಾರೆ.

​ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿದ್ದಂತೆಯೇ, ಶಿಕ್ಷಕರ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಮ್ಯಾನೇಜರ್ ಕ್ರಮವನ್ನು ‘ಕಾನೂನುಬಾಹಿರ ಮತ್ತು ತಾರತಮ್ಯದ ನಡೆ’ ಎಂದು ಖಂಡಿಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...