ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

Date:

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ ದೃಶ್ಯಗಳಿದ್ದರೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.

- Advertisement -

ನ್ಯಾಯಮೂರ್ತಿಗಳಾದ ಎ ಮೊಹಮದ್ ಮುಸ್ತಕ್ಯೂ ಹಾಗೂ ಎಂ ಎ ಅಬ್ದುಲ್ ಹಕೀಮ್ ನೇತೃತ್ವದ ಪೀಠವು ನಿಯಮಾವಳಿಗಳನ್ನು ಉಲ್ಲಂಘಿಸುವ ರೀತಿಯಲ್ಲಿ ಸಮಸ್ಯೆಯು ಗಂಭಿರವಾಗಿದೆ ಎಂದರೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯು ಬಿಗ್‌ಬಾಸ್‌ ಕಾರ್ಯಕ್ರಮವನ್ನು ನಿಲ್ಲಿಸುವುದು ಸೂಕ್ತ ಎಂದು ನಿರ್ದೇಶಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಿಸುವ ಮಲಯಾಳಂ ನಟ ಮೋಹನ್ ಲಾಲ್, ನಿರ್ಮಾಣ ಸಂಸ್ಥೆ ಎಂಡಿಮೊಲ್‌ ಶೈನ್‌ ಇಂಡಿಯಾ ಹಾಗೂ ಪ್ರಸಾರ ಮಾಡುವ ವಿದ್ಯುನ್ಮಾನ ಮಾಧ್ಯಮಗಳಾದ ಏಷ್ಯಾನೆಟ್ ಹಾಗೂ ಡಿಸ್ನಿ ಸ್ಟಾರ್‌ ಸಂಸ್ಥೆಗಳಿಗೆ ನೋಟಿಸ್‌ ನೀಡಲಾಯಿತು.

ಮಲಯಾಳಂ ಬಿಗ್‌ಬಾಸ್‌ನಲ್ಲಿ ಸ್ಪರ್ಧಿಯಾಗಿರುವ ಹಸೀಬ್‌ ಎಸ್‌ಕೆ ಅವರಿಗೂ ಕೂಡ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತು. ಈ ಸ್ಪರ್ಧಿಯು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಪರ್ಧಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಬಿಗ್‌ಬಾಸ್‌ ಮಲಯಾಳಂ 6ನೇ ಆವೃತ್ತಿಯಲ್ಲಿ ಹಲ್ಲೆ ನಡೆಯುವಂತಹ ಘಟನೆಗಳು ಸಂಭವಿಸುತ್ತಿರುವುದರಿಂದ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರ್ಟ್‌ಗೆ ಮನವಿ ಮಾಡಿದರು.

ನಟ ಮೋಹನ್‌ ಲಾಲ್ ಕೂಡ ಸ್ಪರ್ಧಿಗಳೊಂದಿಗೆ ಸಂವಾದ ನಡೆಸಿದ ರೀತಿಯೂ ಕೂಡ ಘಟನೆಯ ಗಂಭೀರತೆಯನ್ನು ಎತ್ತಿ ತೋರಿಸಿದೆ. ಹಲ್ಲೆ ನಡೆಯುವ ಘಟನೆಯು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವುದಲ್ಲದೆ ಕೇಂದ್ರ ಮಾಹಿತಿ ಪ್ರಸಾರ ನಿಯಮಗಳನ್ನು ಕೂಡ ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಕೋರ್ಟ್‌ಗೆ ಮನವರಿಕೆ ಮಾಡಿದರು.

ಅರ್ಜಿದಾರರ ಮನವಿಯನ್ನು ಆಲಿಸಿದ ಕೋರ್ಟ್ ಪ್ರಕರಣವು ಗಂಭೀರ ಆತಂಕವನ್ನು ಉಂಟುಮಾಡಿದೆ ಎಂದು ಅಭಿಪ್ರಾಯಪಟ್ಟಿತ್ತಲ್ಲದೆ ಕೇಂದ್ರವು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ನಿರ್ದೇಶಿಸಿ ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...