ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆ ಮಲಯಾಳಂ – ಕಡ್ಡಾಯ: ಸಿಎಂ ಸಿದ್ದರಾಮಯ್ಯ ಖಂಡನೆ

Date:

ಕೇರಳದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸಲು ಕೇರಳ ಸರ್ಕಾರ ಮುಂದಾಗಿದೆ. ‘ಮಲೆಯಾಳಿ ಭಾಷಾ ಮಸೂದೆ-2025’ಯನ್ನು ಪ್ರಸ್ತಾಪಿಸಿದೆ. ಈ ಮಸೂದೆಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವೆಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ‌ ವಿಜಯನ್ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. “ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವುದು ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ದಾಳಿಯಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

“ಸರ್ಕಾರದ ನೀತಿಯಿಂದ ಕೇರಳದ ಗಡಿಜಿಲ್ಲೆಗಳಲ್ಲಿ, ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯಲ್ಲಿ ಶಿಕ್ಷಣ ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡಲಿದೆ. ಇಂತಹ ನಡೆಯನ್ನು ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ” ಎಂದಿದ್ದಾರೆ.

“ಕಾಸರಗೋಡು ಆಡಳಿತಾತ್ಮಕವಾಗಿ ಕೇರಳಕ್ಕೆ ಸೇರಿದ್ದರೂ, ಭಾವನಾತ್ಮಕವಾಗಿ ಕರ್ನಾಟಕಕ್ಕೆ ಸೇರಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ, ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲೆಯಾಳಿ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂದೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದಿಂದ ‘ಮತ ಕಳ್ಳತನ’ದ ನಂತರ ‘ಹಕ್ಕುಗಳ ಕಳ್ಳತನ’ ಶುರು: ರಾಹುಲ್ ಗಾಂಧಿ ಆಕ್ರೋಶ

ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಆಧಾರ್...

​’ಶಾಲೆಗಳ ಅಭಿವೃದ್ಧಿ ನೆಪದಲ್ಲಿ ಕಾರ್ಪೊರೇಟ್‌ಗಳಿಗೆ ಮಣೆ’: ರಾಜ್ಯ ಸರ್ಕಾರದ ವಿರುದ್ಧ ಎಸ್‌ಐಒ ಆಕ್ರೋಶ

'ಶಾಲಾ ಅಭಿವೃದ್ಧಿ'ಯ ಆಕರ್ಷಕ ನೆಪವೊಡ್ಡಿ ರಾಜ್ಯದ ಸರ್ಕಾರಿ ಶಾಲೆಗಳನ್ನು ಖಾಸಗಿ ಕಾರ್ಪೊರೇಟ್...

2013ರ ಅತ್ಯಾಚಾರ ಪ್ರಕರಣ: ಪತ್ರಕರ್ತ ತರುಣ್ ತೇಜ್‌ಪಾಲ್‌ ಶಿಕ್ಷೆ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ

2013ರಲ್ಲಿ ಕಿರಿಯ ಸಹೋದ್ಯೋಗಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, 'ತೆಹಲ್ಕಾ'...

ಅಡ್ಡಂಡ ಕಾರ್ಯಪ್ಪರ ‘ಗಾಂಧಿ ಹತ್ಯೆಯ ಸತ್ಯ’ ನಾಟಕ, ಪುಸ್ತಕ ನಿಷೇಧಕ್ಕೆ ಆಗ್ರಹ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ ಕಾರ್ಯಪ್ಪ ಅವರು ರಚಿಸಿರುವ...