​’ದಿ ಕೇರಳ ಸ್ಟೋರಿ 2′ ಪ್ರಮಾಣೀಕರಣ ವಿವಾದ: ನಾಳೆ ನಾವೇ ಚಿತ್ರ ವೀಕ್ಷಿಸುತ್ತೇವೆ ಎಂದ ಕೇರಳ ಹೈಕೋರ್ಟ್

Date:

‘ದಿ ಕೇರಳ ಸ್ಟೋರಿ 2’ ಚಿತ್ರದ ಪ್ರಮಾಣೀಕರಣ ವಿವಾದ ಮತ್ತು ರಾಜ್ಯವನ್ನು ನಕಾರಾತ್ಮಕವಾಗಿ ಬಿಂಬಿಸಲಾಗಿದೆ ಎಂಬ ಆರೋಪಗಳ ನಡುವೆ, ಬುಧವಾರ (ಫೆ. 25) ನಾವೇ ಖುದ್ದಾಗಿ ಈ ಚಿತ್ರವನ್ನು ವೀಕ್ಷಿಸುವುದಾಗಿ ಕೇರಳ ಹೈಕೋರ್ಟ್ ಮಂಗಳವಾರ ತಿಳಿಸಿದೆ.

- Advertisement -

​ಚಿತ್ರದ ಬಿಡುಗಡೆ ಹಾಗೂ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರಿದ್ದ ಪೀಠ, “ಸಾಮಾನ್ಯವಾಗಿ ಕಲಾತ್ಮಕ ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ನ್ಯಾಯಾಲಯಗಳು ಹಸ್ತಕ್ಷೇಪ ಮಾಡಲು ಹಿಂಜರಿಯುತ್ತವೆ. ಆದರೆ, ಚಿತ್ರದ ಶೀರ್ಷಿಕೆಯಲ್ಲಿ ರಾಜ್ಯದ ಹೆಸರನ್ನು ಬಳಸಿರುವುದರಿಂದ ಕೇರಳದ ಜನರ ಕಳವಳವನ್ನು ನಿರ್ಲಕ್ಷಿಸುವಂತಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ...

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ ದೇಶದ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ. ಆದರೀಗ, 2027ರ ಉತ್ತರ ಪ್ರದೇಶ ವಿಧಾನಸಭಾ...

ಬಂಡವಾಳಶಾಹಿಯ ನಾಲ್ಕು ಕಟ್ಟುಕಥೆಗಳು ಮತ್ತು ನಮ್ಮ ಬದುಕಿನ ಬೆಲೆ

ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಒಮ್ಮೆ ಗಮನಿಸಿ ನೋಡಿ. ಒಂದು ಕಡೆ, 2025ರ ಒಂದೇ ವರ್ಷದಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ 500 ವ್ಯಕ್ತಿಗಳ ಸಂಪತ್ತು ಸುಮಾರು 2.2 ಟ್ರಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗಿದೆ. ಇನ್ನೊಂದು ಕಡೆ,...

​”ಕೇರಳದಲ್ಲಿ ಜನರು ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಆದರೆ, ಈ ಘಟನೆಗಳು ಇಡೀ ಕೇರಳದಲ್ಲಿ ನಡೆಯುತ್ತಿವೆ ಎಂಬಂತೆ ನೀವು ಬಿಂಬಿಸಿದ್ದೀರಿ. ಇದು ತಪ್ಪು ಸಂದೇಶ ರವಾನಿಸುವುದಲ್ಲದೆ, ಜನರ ಭಾವನೆಗಳನ್ನು ಕೆರಳಿಸುವ ಸಾಧ್ಯತೆಯಿದೆ. ಇಲ್ಲಿ ಸೆನ್ಸಾರ್ ಮಂಡಳಿಯ ಪಾತ್ರ ಪ್ರಮುಖವಾಗುತ್ತದೆ. ನೀವು ಈ ಬಗ್ಗೆ ಗಮನ ಹರಿಸಿದ್ದೀರಾ?” ಎಂದು ನ್ಯಾಯಾಲಯವು ಸೆನ್ಸಾರ್ ಮಂಡಳಿಯನ್ನು (CBFC) ಪ್ರಶ್ನಿಸಿದೆ.

​ನಾಳೆ ಚಿತ್ರ ಪ್ರದರ್ಶನಕ್ಕೆ ಸೂಚನೆ

ಮುಂದಿನ ಆದೇಶ ನೀಡುವ ಮುನ್ನ ಚಿತ್ರವನ್ನು ವೀಕ್ಷಿಸುವುದಾಗಿ ನ್ಯಾಯಾಲಯ ಸ್ಪಷ್ಟಪಡಿಸಿದೆ. “ನಾನು ಸಾಮಾನ್ಯವಾಗಿ ಯಾವುದೇ ಸಿನಿಮಾದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಅದು ಕಲಾತ್ಮಕ ಸ್ವಾತಂತ್ರ್ಯ. ಆದರೆ, ಇದು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ನೀವು ಹೇಳುತ್ತಿದ್ದೀರಿ ಮತ್ತು ಚಿತ್ರಕ್ಕೆ ‘ಕೇರಳ’ ಎಂಬ ಹೆಸರನ್ನೂ ನೀಡಿದ್ದೀರಿ. ಇದು ಕೋಮು ಉದ್ವಿಗ್ನತೆಯನ್ನು ಸೃಷ್ಟಿಸುವ ಸಾಧ್ಯತೆಯಿದೆ. ಹೀಗಾಗಿ ನಾನು ನಾಳೆ ಸಿನಿಮಾ ನೋಡುತ್ತೇನೆ. ನಾಳೆ ಚಿತ್ರದ ಪ್ರದರ್ಶನವನ್ನು ಏರ್ಪಡಿಸಿ” ಎಂದು ನ್ಯಾಯಮೂರ್ತಿಗಳು ಸೂಚಿಸಿದರು. ಚಿತ್ರ ಪ್ರದರ್ಶನದ ಸಮಯ ಮತ್ತು ಸ್ಥಳದ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ನಿರ್ಮಾಪಕರಿಗೆ ನಿರ್ದೇಶಿಸಲಾಗಿದೆ.

ಇದನ್ನು ಓದಿದ್ದೀರಾ? ಕಳಚಿಬಿದ್ದ ಅಜೇಯತೆಯ ಕಿರೀಟ: ಟೀಂ ಇಂಡಿಯಾ ಸೆಮಿಫೈನಲ್‌ ಹಾದಿ ಇನ್ನೂ ದುರ್ಗಮ

ವಿಚಾರಣೆ ವೇಳೆ, “ಕೇರಳವು ಜಾತ್ಯತೀತತೆಯ ನಾಡು” ಮತ್ತು “ಇಲ್ಲಿ ಎಲ್ಲರೂ ಸಾಮರಸ್ಯದಿಂದ ಬದುಕುತ್ತಿದ್ದಾರೆ” ಎಂದು ಹೈಕೋರ್ಟ್ ಉಲ್ಲೇಖಿಸಿತು. ಸಮಾಜದ ಕೆಲವು ವರ್ಗಗಳು ವ್ಯಕ್ತಪಡಿಸಿದ ಆತಂಕಗಳನ್ನು ಪರಿಗಣಿಸಬೇಕು, ಅದರಲ್ಲೂ ‘ನೈಜ ಘಟನೆಗಳ ಆಧಾರಿತ’ ಎಂದು ಹೇಳಿಕೊಳ್ಳುವ ಚಿತ್ರಗಳ ವಿಚಾರದಲ್ಲಿ ಎಚ್ಚರ ವಹಿಸಬೇಕು ಎಂದು ಪುನರುಚ್ಚರಿಸಿತು. ಇದೇ ವೇಳೆ, ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ‘ಹಾಲ್’ (2025) ಚಿತ್ರದ ಕೆಲವು ದೃಶ್ಯಗಳನ್ನು ಕತ್ತರಿಸಲಾಗಿದ್ದ ಹಿಂದಿನ ಉದಾಹರಣೆಯನ್ನು ನ್ಯಾಯಾಲಯ ಸ್ಮರಿಸಿತು.

​ಯಾವುದೇ ಧರ್ಮ ಅಥವಾ ಪಂಗಡಕ್ಕೆ ಧಕ್ಕೆ ತರುವಂತಹ ದೃಶ್ಯಗಳು ಚಿತ್ರದಲ್ಲಿಲ್ಲ. ಚಿತ್ರವು ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡಿಲ್ಲ ಎಂದು ನಿರ್ಮಾಪಕರ ಪರ ವಕೀಲರು ವಾದಿಸಿದರು.

​ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರು, “ಚಿತ್ರದಲ್ಲಿ ಯುವತಿಯರ ಗುಂಪೊಂದನ್ನು ‘ಲವ್ ಜಿಹಾದ್ ಬಲಿಪಶುಗಳು’ ಎಂಬ ಹಣೆಪಟ್ಟಿಯೊಂದಿಗೆ ತೋರಿಸಲಾಗಿದೆ. ಆದರೆ, ಚಿತ್ರದಲ್ಲಿ ಬರುವ ಒಬ್ಬನೇ ಒಬ್ಬ ಸಂತ್ರಸ್ತೆ ಕೇರಳದವರಲ್ಲ. ಹೀಗಿದ್ದರೂ, ಚಿತ್ರಕ್ಕೆ ‘ದಿ ಕೇರಳ ಸ್ಟೋರಿ 2’ ಎಂದು ಹೆಸರಿಡಲಾಗಿದ್ದು, ಇದು ಉದ್ದೇಶಪೂರ್ವಕವಾಗಿ ಕೇರಳ ಸಮಾಜವನ್ನು ಕೆಟ್ಟದಾಗಿ ಬಿಂಬಿಸುವ ಯತ್ನವಾಗಿದೆ” ಎಂದು ವಾದ ಮಂಡಿಸಿದರು.

​ನ್ಯಾಯಾಲಯವು ಬುಧವಾರ ಚಿತ್ರ ವೀಕ್ಷಿಸಿದ ಬಳಿಕ ಮುಂದಿನ ನಿರ್ದೇಶನಗಳನ್ನು ನೀಡುವ ನಿರೀಕ್ಷೆಯಿದೆ. ಈ ಚಿತ್ರವನ್ನು ಕಾಮಾಖ್ಯ ನಾರಾಯಣ್ ಸಿಂಗ್ ನಿರ್ದೇಶಿಸಿದ್ದು, ವಿಪುಲ್ ಅಮೃತ್‌ಲಾಲ್ ಶಾ ನಿರ್ಮಾಣ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಕೀಯ ಅಥವಾ ವೈಯಕ್ತಿಕ ಲಾಭಕ್ಕಾಗಿ ಸಂಸ್ಥೆಗಳ ಮೇಲೆ ದಾಳಿ ಸಲ್ಲದು: ಮುಖ್ಯ ನ್ಯಾ. ಸೂರ್ಯಕಾಂತ್

ಸಾಂವಿಧಾನಿಕ ಪ್ರಕ್ರಿಯೆಗಳಿಗೆ ಪ್ರತಿಯೊಬ್ಬರೂ ಗೌರವ ನೀಡಬೇಕು ಮತ್ತು ಯಾವುದೇ ನಿರ್ದಿಷ್ಟ ಸಂದರ್ಭದಲ್ಲಿ...

ನೇಪಾಳ ಭೀಕರ ಪ್ರವಾಹಕ್ಕೆ 3 ತಿಂಗಳು: ನಾಪತ್ತೆಯಾಗಿದ್ದ 213 ಭಾರತೀಯರನ್ನು ಮೃತರೆಂದು ಘೋಷಿಸಲು ಪ್ರಕ್ರಿಯೆ ಆರಂಭ

ಕಳೆದ ಆಗಸ್ಟ್ ತಿಂಗಳಲ್ಲಿ ನೇಪಾಳದ ತ್ರಿಶೂಲಿ-ಭೋಟೆ ಕೋಶಿ ನದಿ ಪ್ರದೇಶದಲ್ಲಿ ಸಂಭವಿಸಿದ...

ನಿಕೋಬಾರ್ ಅರಣ್ಯ ಹಕ್ಕು ವಿವಾದ: ಪ್ರಮಾಣಪತ್ರ ಸಲ್ಲಿಸಲು ಕೇಂದ್ರಕ್ಕೆ ಡಿ.10ರವರೆಗೆ ಗಡುವು

ಗ್ರೇಟ್ ನಿಕೋಬಾರ್ ಯೋಜನೆಗಾಗಿ 166 ಚದರ ಕಿಲೋಮೀಟರ್ ಅರಣ್ಯ ಭೂಮಿಯನ್ನು ವರ್ಗಾಯಿಸಲು...

ಬಂಡವಾಳಶಾಹಿಯ ನಾಲ್ಕು ಕಟ್ಟುಕಥೆಗಳು ಮತ್ತು ನಮ್ಮ ಬದುಕಿನ ಬೆಲೆ

ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಒಮ್ಮೆ ಗಮನಿಸಿ ನೋಡಿ. ಒಂದು ಕಡೆ, 2025ರ...