ವ್ಯಕ್ತಿಯೊಬ್ಬರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಆಸ್ಪತ್ರೆಯಲ್ಲಿ ತಪಾಸಣೆಗೆಂದು ತೆರಳಿ 2 ದಿನಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಉಳ್ಳೂರಿನ ರವೀಂದ್ರನ್ ನಾಯರ್ ಎಂಬ 59 ವರ್ಷದ ವ್ಯಕ್ತಿಯೊಬ್ಬರನ್ನು ಎರಡು ದಿನಗಳಿಂದ ಆಸ್ಪತ್ರೆಯ ಲಿಫ್ಟ್‌ನಲ್ಲಿ ಸಿಲುಕಿದ್ದು ಸೋಮವಾರ ಬೆಳಿಗ್ಗೆ ರಕ್ಷಿಸಲಾಗಿದೆ.
ಪೊಲೀಸ್ ವರದಿಗಳ ಪ್ರಕಾರ, ನಾಯರ್ ಆಸ್ಪತ್ರೆಯ ಮೊದಲ ಮಹಡಿಯನ್ನು ತಲುಪಲೆಂದು ಒಪಿ ಬ್ಲಾಕ್‌ನಲ್ಲಿರುವ ಲಿಫ್ಟ್‌ಗೆ ಪ್ರವೇಶಿಸಿದರು. ಆದರೆ ಲಿಫ್ಟ್ ಸರಿಯಾಗಿ ಕಾರ್ಯನಿರ್ವಹಿಸಿಲ್ಲ, ಮೇಲಕ್ಕೆ ಏರುವ ಬದಲು ಲಿಫ್ಟ್ ಕೆಳಗಿಳಿದು ಸ್ಥಗಿತಗೊಂಡಿದೆ. ಜೊತೆಗೆ ಲಿಫ್ಟ್‌ನ ಬಾಗಿಲುಗಳನ್ನು ಕೂಡಾ ತೆರೆಯಲು ನಾಯರ್ ಅವರಿಗೆ ಸಾಧ್ಯವಾಗಲಿದೆ.
ಲಿಫ್ಟ್‌ನಲ್ಲಿ ಸಿಲುಕಿದ ಬಳಿಕ ನಾಯರ್ ಸಹಾಯಕ್ಕಾಗಿ ಕೂಡಾಗಿದ್ದಾರೆ. ಆದರೆ ಹೊರಗಿನಿಂದ ಯಾವ ಪ್ರತಿಕ್ರಿಯೆಯೂ ಕೇಳಿಬಂದಿಲ್ಲ. ಈ ಸಂದರ್ಭದಲ್ಲೇ ನಾಯರ್ ಫೋನ್ ಕೂಡಾ ಸ್ವಿಚ್ ಆಫ್ ಆಗಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.
ಸೋಮವಾರ ಸಾಮಾನ್ಯ ಕೆಲಸದ ಅವಧಿಯಲ್ಲಿ ಲಿಫ್ಟ್ ಬಳಕೆ ಆರಂಭಿಸಿದಾಗ ಲಿಫ್ಟ್‌ನಲ್ಲೇ ವ್ಯಕ್ತಿಯೊಬ್ಬರು ಸಿಲುಕಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಬೆಂಗಳೂರು | ಲಿಫ್ಟ್‌ನಲ್ಲಿ ಸಿಲುಕಿ ಉತ್ತರಪ್ರದೇಶ ಮೂಲದ ಯುವಕ ಸಾವು
ಇನ್ನು ಸಮಯಕ್ಕೆ ಸರಿಯಾಗಿ ರವೀಂದ್ರನ್ ನಾಯರ್ ಮನೆಗೆ ತಲುಪದೆ ಇರುವುದನ್ನು ನೋಡಿದ ಕುಟುಂಬಸ್ಥರು ವೈದ್ಯಕೀಯ ಕಾಲೇಜು ಪೊಲೀಸರಿಗೆ ದೂರು ನೀಡಿದ್ದಾರೆ. ರವೀಂದ್ರನ್ ನಾಯರ್ ಲಿಫ್ಟ್‌ನಲ್ಲಿ ಸಿಲುಕಿದ್ದ ಬಗ್ಗೆ ಮಾಹಿತಿ ತಿಳಿದ ಬಳಿಕ ಕುಟುಂಬವು ಆಸ್ಪತ್ರೆ ಆಡಳಿತದ ನಿರ್ಲಕ್ಷ್ಯಕ್ಕಾಗಿ ಆಸ್ಪತ್ರೆ ವಿರುದ್ಧ ದೂರು ದಾಖಲಿಸಲು ಮುಂದಾಗಿದೆ. ಲಿಫ್ಟ್ ಬಳಕೆಯಲ್ಲಿಲ್ಲ ಎಂದು ಯಾವುದೇ ಸೂಚನಾ ಫಲಕವನ್ನು ಕೂಡಾ ಹಾಕಿಲ್ಲ ಎಂದು ದೂರಿದೆ.
ನಾಯರ್ ಸೋಮವಾರ ಬೆಳಗ್ಗೆ ಲಿಫ್ಟ್‌ನಲ್ಲಿ ಮಲಗಿದ್ದನ್ನು ಲಿಫ್ಟ್ ಆಪರೇಟರ್ ಪತ್ತೆಹಚ್ಚಿದ್ದು ಲಿಫ್ಟ್ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. ಶನಿವಾರ ಮಧ್ಯಾಹ್ನದ ವೇಳೆ ಲಿಫ್ಟ್ ಪ್ರವೇಶಿಸಿದ ನಾಯರ್ ಸೋಮವಾರ ಬೆಳಿಗ್ಗೆ 6 ಗಂಟೆಗೆ ಲಿಫ್ಟ್‌ನಿಂದ ಹೊರ ಬಂದಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದ ಬಳಿಕ ಆರೋಗ್ಯ ಸಚಿವೆ ವೀಣಾ ಜಾರ್ಜ್ ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ಈ ಕುರಿತು ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದರು.