ಕೇರಳ | ಬಿಜೆಪಿ ಟಿಕೆಟ್ ನಿರಾಕರಿಸಿದ್ದಕ್ಕೆ RSS ಕಾರ್ಯಕರ್ತ ಆತ್ಮಹತ್ಯೆ

Date:

ಕೇರಳದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದ್ದಕ್ಕೆ ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ತಿರುವನಂತಪುರಂ ಬಳಿಕ ತೃಕ್ಕಣ್ಣಾಪುರದ ಆನಂದ್ ಕೆ ಥಂಪಿ ಎಂಬವರು ತಮ್ಮ ಮನೆಯ ಶೆಡ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಕೇರಳ ರಾಜಧಾನಿಯಾಗಿರುವ ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ ತೃಕ್ಕಣ್ಣಾಪುರಂ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆನಂದ್‌ ಬಯಸಿದ್ದರು. ಬಿಜೆಪಿ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದರು. ಆದರೆ, ಬಿಜೆಪಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಆನಂದ್‌ ಹೆಸರು ಇರಲಿಲ್ಲವೆಂದು ವರದಿಯಾಗಿದೆ.

ತಮಗೆ ಟಿಕೆಟ್‌ ನೀಡದ ಕಾರಣ, ಆನಂದ್‌ ಅಸಮಾಧಾನಗೊಂಡಿದ್ದರು. ಅಲ್ಲದೆ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು. ಅದೇ ಪೋಸ್ಟ್‌ನಲ್ಲಿ ಆರ್‌ಎಸ್‌ಎಸ್‌ ನಾಯಕರ ವಿರುದ್ಧವೂ ನಾನಾ ರೀತಿಯ ಆರೋಪ ಮಾಡಿದ್ದರು ಎಂದು ಹೇಳಲಾಗಿದೆ.

“ಮರಳು ಕಳ್ಳಸಾಗಣೆ ಮಾಫಿಯಾ ಜೊತೆಗೆ ಕೆಲವು ಸ್ಥಳೀಯ ನಾಯಕರು ಸಂಪಬಂಧ ಹೊಂದಿದ್ದಾರೆ. ಅವರ ಹಿತಾಸಕ್ತಿಗಗಿ ನನಗೆ ಟಿಕೆಟ್‌ ನಿರಾಕರಿಸಲಾಗಿದೆ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸದ ಬಳಿಕ, ಜೊತೆಗಿದ್ದವರೂ ನನ್ನಿಂದ ದೂರವಾಗಲು ಪ್ರಾರಂಭಿಸಿದರು” ಎಂದು ಆನಂದ್ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ತಮ್ಮ ಸಾವಿಗೂ ಮುನ್ನ ಆನಂದ್ ಮಾಡಿರುವ ಆರೋಪಗಳನ್ನು ಬಿಜೆಪಿ ನಾಯಕರು ನಿರಾಕರಿಸಿದ್ದಾರೆ. ಅವರು ಟಿಕೆಟ್ ಕೋರಿ ನಮ್ಮನ್ನು ಸಂಪರ್ಕಿಸಿಲ್ಲ. ಅವರ ಸಾವನ್ನು ಟಿಕೆಟ್ ನಿರಾಕರಣೆ ಜೊತೆ ಸಂಬಂಧ ಕಲ್ಪಿಸಬಾರದು ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...