ಕೇರಳ | ಕಂದಕಕ್ಕೆ ಉರುಳಿದ ಬಸ್; ನಾಲ್ವರ ಸಾವು, 32 ಮಂದಿಗೆ ಗಾಯ

Date:

ಕೇರಳ ರಾಜ್ಯ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ ಒಂದು ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಸಾವನ್ನಪ್ಪಿ, 32 ಮಂದಿ ಗಾಯಗೊಂಡ ಘಟನೆ ಕೇರಳದ ಪುಪ್ಪುಪರದಲ್ಲಿ ನಡೆದಿದೆ.

- Advertisement -

ತಮಿಳುನಾಡಿನ ತಂಜವೂರಿನಲ್ಲಿ ಪ್ರವಾಸದ ಬಳಿಕ ಬಸ್ ಮಾವೇಲಿಕ್ಕಾರಕ್ಕೆ ವಾಪಸ್ ಬರುತ್ತಿತ್ತು. ಇಡುಕ್ಕಿ ಜಿಲ್ಲೆಯ ಕಲ್ಲಿವಯಾಲ್ ಎಸ್ಟೇಟ್‌ ಬಳಿ 6:15ರ ಸುಮಾರಿಗೆ ಅಪಘಾತ ನಡೆದಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಕೇರಳ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಶಿಕ್ಷಕನಿಗೆ 111 ವರ್ಷ ಜೈಲು ಶಿಕ್ಷೆ

ಮೃತರನ್ನು ಅರುಣ್ ಹರಿ (55), ರಮ ಮೋಹನ್ (40), ಸಂಗೀತ್ (45) ಮತ್ತು ಬಿಂಧು ಉನ್ನಿತ್ತಾನ್ (59) ಎಂದು ಗುರುತಿಸಲಾಗಿದ್ದು, ಎಲ್ಲರೂ ಮಾವೇಲಿಕ್ಕಾರ ನಿವಾಸಿಗಳೆಂದು ಹೇಳಲಾಗಿದೆ.

ಪ್ರಾಥಮಿಕ ವರದಿ ಪ್ರಕಾರ ಬಸ್ ಬ್ರೇಕ್ ಫೇಲ್ ಆಗಿದೆ ಎಂದು ತಿಳಿದುಬಂದಿದೆ. ಬಸ್ ಸುಮಾರು 70 ಅಡಿ ಆಳದ ಕಂದರಕ್ಕೆ ಉರುಳಿದ್ದು ಮರದ ಮೇಲೆ ಬಿದ್ದಿದೆ. ಇದರಿಂದಾಗಿ ಹೆಚ್ಚಿನ ಸಾವುನೋವುಗಳ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಪುರುಷ ಭಕ್ತರ ಮೇಲಂಗಿ ತೆಗೆಯುವ ಅನಿಷ್ಟ ಪದ್ಧತಿ ಕೈಬಿಡಲು ನಿರ್ಧಾರ: ಕೇರಳ ಸಿಎಂ

ಸ್ಥಳೀಯ ನಿವಾಸಿಗಳು, ಪೊಲೀಸರು ಮತ್ತು ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಸೇರಿದಂತೆ ಹಲವು ಮಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಗಾಯಾಳುಗಳನ್ನು ಮುಂಡಕಯಂ ಮೆಡಿಕಲ್ ಟ್ರಸ್ಟ್ ಆಸ್ಪತ್ರೆ ಮತ್ತು ಮಾರ್ ಸ್ಲೀವಾ ಮೆಡಿಸಿಟಿಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.

ಭಾನುವಾರ ಬೆಳಗ್ಗೆ ಮಾವೇಲಿಕ್ಕಾರದಿಂದ ಬಸ್‌ ಹೊರಟಿದ್ದು, ಸೋಮವಾರ ಮುಂಜಾನೆ ಹಿಂತಿರುಗಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...