​‘ದಿ ಕೇರಳ ಸ್ಟೋರಿ 2’ ಸುಳ್ಳು ಪ್ರಚಾರ, ಸಮಾಜಕ್ಕೆ ವಿಷ: ಪಿಣರಾಯಿ ವಿಜಯನ್ ಆಕ್ರೋಶ

Date:

‘ದಿ ಕೇರಳ ಸ್ಟೋರಿ 2’ ಚಲನಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ತೀವ್ರ ವಿವಾದ ಭುಗಿಲೆದ್ದಿದ್ದು, ಇದು ರಾಜ್ಯದ ಜಾತ್ಯತೀತ ಮೌಲ್ಯಗಳಿಗೆ ಬೆದರಿಕೆಯೊಡ್ಡುವಂತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೇರಳದ ಮೂಲಭೂತ ಗುರುತಾಗಿರುವ ಧಾರ್ಮಿಕ ಸೌಹಾರ್ದತೆಯ ಪರಂಪರೆಗೆ ಈ ಚಿತ್ರವು ಧಕ್ಕೆ ತರಲಿದೆ ಎಂದು ಅವರು ಬುಧವಾರ ಎಚ್ಚರಿಕೆ ನೀಡಿದ್ದಾರೆ.

- Advertisement -

​ಈ ಚಿತ್ರದ ಮೊದಲ ಭಾಗವನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, “ಅದು ರಾಜ್ಯದ ವಿರುದ್ಧ ದ್ವೇಷ ಹರಡುವ ಮತ್ತು ಜಾತ್ಯತೀತ ಪರಂಪರೆಯನ್ನು ಹಾಳುಮಾಡುವ ಉದ್ದೇಶವನ್ನು ಹೊಂದಿತ್ತು. ಸುಳ್ಳು, ದ್ವೇಷ ಮತ್ತು ಕೇರಳ ವಿರೋಧಿ ಪ್ರಚಾರದಿಂದ ಕೂಡಿದ್ದ ಮೊದಲ ಭಾಗವನ್ನು ಕೋಮು ಪ್ರಚೋದನೆಯ ಉದ್ದೇಶದಿಂದಲೇ ನಿರ್ಮಿಸಲಾಗಿತ್ತು ಎಂಬುದು ಈ ದೇಶಕ್ಕೆ ಅರಿವಾಗಿದೆ,” ಎಂದರು. ಬಲವಂತದ ಮತಾಂತರದ ಘಟನೆಗಳನ್ನು ಬಿಂಬಿಸುತ್ತದೆ ಎನ್ನಲಾದ ಎರಡನೇ ಭಾಗವು ಸಹ ಅಪಪ್ರಚಾರ ಮಾಡುತ್ತಿದೆ ಎಂಬ ಆರೋಪಗಳು ಹಲವು ವಲಯಗಳಿಂದ ಕೇಳಿಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ತಮ್ಮ ಹೇಳಿಕೆಯಲ್ಲಿ ಮುಖ್ಯಮಂತ್ರಿ, “ಸಮಾಜದಲ್ಲಿ ವಿಭಜನೆ ಮತ್ತು ದ್ವೇಷವನ್ನು ಹರಡಲು ನಿರ್ಮಿಸಲಾದ ಇಂತಹ ವಿಷಕಾರಿ ಕೃತ್ಯಗಳಿಗೆ ಸಾರ್ವಜನಿಕ ಪ್ರದರ್ಶನಕ್ಕೆ ಏಕೆ ಅವಕಾಶ ನೀಡಲಾಗುತ್ತಿದೆ?” ಎಂದು ಪ್ರಶ್ನಿಸಿದ್ದಾರೆ. ಕೇವಲ ಶೀರ್ಷಿಕೆಯ ಕಾರಣಕ್ಕೆ ‘ಬೀಫ್’ (ಸ್ಪ್ಯಾನಿಷ್ ಚಿತ್ರ) ದಂತಹ ಚಿತ್ರಗಳನ್ನು ಚಲನಚಿತ್ರೋತ್ಸವಗಳಿಂದ ನಿಷೇಧಿಸಿರುವಾಗ ಇಂತಹ ದ್ವೇಷಪೂರಿತ ಚಿತ್ರಗಳಿಗೆ ಅವಕಾಶ ನೀಡುತ್ತಿರುವುದರ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

​ಚಿತ್ರದಲ್ಲಿನ ಅಂತರ್-ಧರ್ಮೀಯ ಸಂಬಂಧಗಳ ಚಿತ್ರಣವನ್ನು ಕಟುವಾಗಿ ಟೀಕಿಸಿದ ಅವರು, “ಪರಸ್ಪರ ಒಪ್ಪಿಗೆಯಿಂದ ನಡೆದ ವಿವಾಹಗಳನ್ನೂ ಸಹ ಕೋಮುವಾದ ಮತ್ತು ಬಲವಂತದ ಮತಾಂತರದ ಉದಾಹರಣೆಗಳಾಗಿ ಬಿಂಬಿಸುವ ಮೂಲಕ ಸುಳ್ಳು ಪ್ರಚಾರವನ್ನು ಹರಡಲಾಗುತ್ತಿದೆ,” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭ್ರಷ್ಟಾಚಾರವೆಂಬ ಸ್ನಾನದ ಕೋಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳೂ ಬೆತ್ತಲೆಯೇ…

ಕೇರಳದಲ್ಲಿ ನೆಲೆಸಿರುವ ಶಾಂತಿಯನ್ನು ಕದಡಲು ಹೊರಗಿನ ಶಕ್ತಿಗಳು ಯತ್ನಿಸುತ್ತಿವೆ ಎಂದು ಎಚ್ಚರಿಸಿದ ವಿಜಯನ್, “ಕೋಮು ಗಲಭೆಗಳೇ ಇಲ್ಲದ ಹಾಗೂ ಸಮುದಾಯಗಳ ನಡುವೆ ಪರಸ್ಪರ ಗೌರವದ ಪರಂಪರೆ ಹೊಂದಿರುವ ಕೇರಳದ ಬಗ್ಗೆ ಇಂತಹ ಶಕ್ತಿಗಳಿಗೆ ದ್ವೇಷವಿದೆ. ಇವರನ್ನು ‘ರಾಜ್ಯದ ಶತ್ರುಗಳು’ ಎಂದು ಕರೆದಿರುವ ಅವರು, ಇಂತಹ ಚಲನಚಿತ್ರಗಳ ಮೂಲಕ ಈ ಭಾಗದ ಶಾಂತಿ ಮತ್ತು ನೆಮ್ಮದಿಯನ್ನು ಕದಡಲು ಯತ್ನಿಸಲಾಗುತ್ತಿದೆ,” ಎಂದರು.

“ಸುಸ್ಥಿರ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದರಲ್ಲಿ ಮಾದರಿಯಾಗಿರುವ, ಹಾಗೂ ಧಾರ್ಮಿಕ ಸೌಹಾರ್ದತೆಯ ಬೀಡಾಗಿರುವ ಕೇರಳವನ್ನು ಭಯೋತ್ಪಾದನೆಯ ಕೇಂದ್ರವೆಂಬಂತೆ ಬಿಂಬಿಸುವ ಪ್ರಯತ್ನಗಳನ್ನು ನಾವೆಲ್ಲರೂ ಒಟ್ಟಾಗಿ ತಿರಸ್ಕರಿಸಬೇಕು. ಸುಳ್ಳು ಪ್ರಚಾರಗಳಿಂದ ಕೇರಳದ ಜಾತ್ಯತೀತ ಬುನಾದಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಮತ್ತು ಜಾತ್ಯತೀತತೆ ಹಾಗೂ ಸಹೋದರತೆಯ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ಇಂತಹ ಪ್ರಯತ್ನಗಳನ್ನು ವಿಫಲಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ,” ಎಂದು ಅವರು ನಾಗರಿಕರಿಗೆ ಕರೆ ನೀಡಿದ್ದಾರೆ.
​
ಸರಣಿಯ ಮೊದಲ ಚಿತ್ರವಾದ ‘ದಿ ಕೇರಳ ಸ್ಟೋರಿ’ಯಲ್ಲಿ ಅದಾ ಶರ್ಮಾ, ಸೋನಿಯಾ ಬಲಾನಿ, ಯೋಗಿತಾ ಬಿಹಾನಿ ಮತ್ತು ಸಿದ್ಧಿ ಇದ್ನಾನಿ ನಟಿಸಿದ್ದರು. ನಿಷೇಧ ಮತ್ತು ವಿವಾದಗಳ ನಡುವೆಯೂ ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಯಶಸ್ಸು ಕಂಡಿತು. ಅಷ್ಟೇ ಅಲ್ಲದೆ, ಈ ಚಿತ್ರಕ್ಕಾಗಿ ಸುದೀಪ್ತೋ ಸೇನ್ ಅತ್ಯುತ್ತಮ ನಿರ್ದೇಶಕ ಹಾಗೂ ಪ್ರಶಾಂತನು ಮಹಾಪಾತ್ರ ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದರು.

​ಇದೀಗ ‘ದಿ ಕೇರಳ ಸ್ಟೋರಿ 2’ ಫೆಬ್ರವರಿ 27 ರಂದು ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರದಲ್ಲಿ ಉಲ್ಕಾ ಗುಪ್ತಾ, ಐಶ್ವರ್ಯ ಓಜಾ ಮತ್ತು ಅದಿತಿ ಭಾಟಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌ ಪ್ರಶಸ್ತಿ ಪಡೆದ ಸಂಶೋಧನೆಯ ಸುತ್ತ ಒಂದು ನೋಟ

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....