ಕೇರಳ ತಕರಾರು ಅರ್ಜಿ ವಜಾ : ‘ಕೆ‌ಎಸ್‌ಆರ್‌ಟಿಸಿ’ ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದ ಮದ್ರಾಸ್ ಹೈಕೋರ್ಟ್‌

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ‘ಕೆ‌ಎಸ್‌ಆರ್‌ಟಿಸಿ’ ಹೆಸರು‌ ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಕೇರಳ ಸರ್ಕಾರದ ರಸ್ತೆ ಸಾರಿಗೆ ನಿಗಮವು (ಆರ್‌ಟಿಸಿ) ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿದೆ.

- Advertisement -

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್‌ಟಿಸಿ’ ಎಂದು ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರವನ್ನು ನೀಡಲು ಅರ್ಜಿ ಸಲ್ಲಿಸಿದ್ದು, ಭಾರತ ಸರ್ಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ 2013ರಲ್ಲಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರಗಳನ್ನು ಸಂಸ್ಥೆಯು 1973ರ ನವೆಂಬರ್ 1ರಿಂದ ಬಳಸುತ್ತಿರುವುದನ್ನು ಮಂಜೂರು ಮಾಡಲಾಗಿದೆ. ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್ ಅವರಿಂದ ‘ಕೆಎಸ್‌ಆರ್‌ಟಿಸಿ’ ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್‌ನ್ನು ಸಹ ಪಡೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದಾದ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ ಮುಂದೆ ಇದನ್ನು ಪ್ರಶ್ನಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸಂಸ್ಥೆಯು 42 ವರ್ಷಗಳಿಂದ ಕೆಎಸ್‌ಆರ್‌ಟಿಸಿ ಹೆಸರನ್ನು ಬಳಸುತ್ತಿರುವ ಬಗ್ಗೆ ತಿಳಿದಿದೆ. ಆದ್ದರಿಂದ ಕೆಎಸ್‌ಆರ್‌ಟಿಸಿಯು ಪಡೆದಿರುವ ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ ಎಂದು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ವಾದಿಸಿದೆ.

ಕೇರಳ ಕೆಆರ್‌ಟಿಸಿ ಕೂಡ 2019ರಲ್ಲಿ ಕೆಎಸ್‌ಆರ್‌ಟಿಸಿಗೂ ಹಿಂದಿನಿಂದ ಸಂಕ್ಷಿಪ್ತ ಹೆಸರನ್ನು ಬಳಸುತ್ತಿರುವ ಕುರಿತು ನೋಂದಣಿ ಪಡೆದುಕೊಂಡಿದೆ.

ನಂತರ ಕೇಂದ್ರ ಸರ್ಕಾರವು ಐಪಿಎಬಿಯನ್ನು ರದ್ದುಗೊಳಿಸಿದ್ದು, ಐಪಿಎಬಿ ಮುಂದೆ ಬಾಕಿ ಉಳಿದಿದ್ದ ಪ್ರಕರಣಗಳನ್ನು ಚೆನ್ನೈನಲ್ಲಿರುವ ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | 202 ಕೆರೆಗಳ ಪೈಕಿ 159 ಕೆರೆಗಳಲ್ಲಿ ಒತ್ತುವರಿ: ಸರ್ವೇ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಸೂಚನೆ

ಈ ಪ್ರಕರಣವು ಡಿ.12 ರಂದು ಮದ್ರಾಸ್ ಹೈಕೋರ್ಟ್ ಮುಂದೆ ಬಂದಿದ್ದು, ಕೇರಳ ಆರ್‌ಟಿಸಿ ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಕೇರಳ ಕೆಆರ್‌ಟಿಸಿ ಸಲ್ಲಿಸಿದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ‌ (ಕೆಎಸ್‌ಆರ್‌ಟಿಸಿ) ಪ್ರಸಕ್ತ ಹಾಗೂ ಮುಂಬರುವ ದಿನಗಳಲ್ಲಿ ಸಹ ‘ಕೆಎಸ್ಆರ್‌ಟಿಸಿ’ ಹೆಸರನ್ನು ಬಳಸಲು ಯಾವುದೇ ಕಾನೂನು ಅಡಚಣೆಯಿರುವುದಿಲ್ಲ ಎಂದು ನಿಗಮ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...